ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಕುಡಚಿಯಲ್ಲಿ ಆರೋಪಿ ಚೌಗಲೆ ಬಂಧನ

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್​​ ಬಂಧಿತ ಆರೋಪಿ. ಪ್ರವೀಣ್​​​​ ಅರುಣ್​​​ ಚೌಗಲೆ ಮಂಗಳೂರು ಏರ್​ಪೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಕುಡಚಿಯಲ್ಲಿ ಆರೋಪಿ ಚೌಗಲೆ ಬಂಧನ
ಉಡುಪಿಯಲ್ಲಿ ನಾಲ್ವರ ಹತ್ಯೆ, ಆರೋಪಿ ಅರೆಸ್ಟ್​
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಸಾಧು ಶ್ರೀನಾಥ್​

Updated on:Nov 15, 2023 | 10:54 AM

ಬೆಳಗಾವಿ, ನ.14: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್​​ ಬಂಧಿತ ಆರೋಪಿ. ಪ್ರವೀಣ್​​​​ ಅರುಣ್​​​ ಚೌಗಲೆ, ಮಂಗಳೂರು ಏರ್​ಪೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ಆರೋಪಿಯನ್ನು ಬಂಧಿಸಿದ ಪೊಲೀಸರು ಉಡುಪಿಗೆ ಕರೆದೊಯ್ದಿದ್ದಾರೆ.

ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಮಂಗಳೂರು ಏರ್​ಪೋರ್ಟ್ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಬಂದಿದೆ. ಇನ್ನು ಈತ ಹತ್ಯೆ ಮಾಡಿ ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.​​ ಇನ್ನು ಪ್ರವೀಣ ಅಡಗಿಕೊಂಡಿದ್ದ ಸಂಬಂಧಿಕರ ಮನೆಯವರನ್ನು ಮಾತನಾಡಿಸಲು ಯತ್ನಿಸಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಹಂತಕನ ಚಾಣಾಕ್ಷತೆಗೆ ಪೊಲೀಸರೇ ಶಾಕ್

ಘಟನೆ ವಿವರ

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಂದ ಧಾರುಣ ಘಟನೆ ನಡೆದಿತ್ತು. ಹೌದು,  ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ, ಓರ್ವ ಮಹಿಳೆ ಹಸೀನಾ ಹಾಗೂ ಆಕೆಯ 11ವರ್ಷದ ಬಾಲಕ ಅಫ್ನಾನ್, ಇಬ್ಬರು ಹೆಣ್ಣು ಮಕ್ಕಳಾದ ಅಯ್ನಾಝ್ ಮತ್ತು ಹಾಸೀಂ ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ.

ಜೊತೆಗೆ ಕೊಲೆಯಾದ ಮಹಿಳೆ ಹಸೀನಾಳ ಅತ್ತೆಯ ಮೇಲೂ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ. ಈ ಪ್ರಕರಣಕ್ಕೆ ಸಂಬಂಧಿದಂತೆ ತನಿಖೆ ಕೈಗೊಂಡ ಪೊಲೀಸರು, ಆರೋಪಿ ಪತ್ತೆಯಾಗಿ 5 ತಂಡಗಳನ್ನು ರಚನೆ ಮಾಡಿದ್ದರು. ಅದರಂತೆ ಇದೀಗ ಕುಡಚಿಯಲ್ಲಿ ಹಂತಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಉಡುಪಿಗೆ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Tue, 14 November 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ