ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ; ಶಿಶುಪಾಲನಿಗೆ ಕೃಷ್ಣನೇ ಶಾಸ್ತಿ ಮಾಡಿದ್ದ -ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಉತ್ತರ

ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ, ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತೆ. ನಾವಂತೂ ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ.

ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ; ಶಿಶುಪಾಲನಿಗೆ ಕೃಷ್ಣನೇ ಶಾಸ್ತಿ ಮಾಡಿದ್ದ -ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಉತ್ತರ
ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾಡುತ್ತಾರೆ; ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ- ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಪ್ರತ್ಯುತ್ತರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 15, 2021 | 10:51 AM

ಉಡುಪಿ: ದಲಿತರ ಮನೆಯಲ್ಲಿ ಬಲಿತರ ವಾಸ್ತವ್ಯದ ಬಗ್ಗೆ ಹಿರಿಯ ಸಂಗೀತಗಾರ ಹಂಸಲೇಖ ನೀಡಿರುವ ಹೇಳಿಕೆ ಬಗ್ಗೆ ವಿಶ್ವಪ್ರಸನ್ನ ತೀರ್ಥಶ್ರೀ ಅವರು ಉಡುಪಿಯಲ್ಲಿ ಟಿವಿ9 ಜೊತೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಹಂಸಲೇಖ ನನ್ನ ಗುರುಗಳನ್ನು ಟೀಕೆ ಮಾಡಿರಬಹುದು. ಹಂಸಲೇಖ ಬಾಯಲ್ಲಿ ಇಂತಹ ಮಾತು ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ (Pejavara Sri Vishvesha Tirtha) ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು. ಸಮಾಜದ ಎಲ್ಲರ ಉದ್ಧಾರ ವಿಶ್ವೇಶತೀರ್ಥರು ಬಯಸಿದ್ದರು. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ.

ಶ್ರೀಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲ ವಿರೋಧಿಸಿದ್ದ. ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ನಾವು ದಲಿತರ ಜೊತೆಗಿದ್ದೇವೆ, ದಲಿತರು ನಮ್ಮಿಂದ ಹೊರತಲ್ಲ. ಐಕ್ಯ ಸಂದೇಶ ನೀಡುವ ಸಲುವಾಗಿ ನಮ್ಮ ಕಾರ್ಯಕ್ರಮಗಳು ನಡೆಯುತ್ತವೆ. ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ, ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತೆ. ನಾವಂತೂ ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ ಎಂದು ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿದ್ದಾರೆ.

vishwaprasanna theertha shree udupi

ವಿಶ್ವಪ್ರಸನ್ನ ತೀರ್ಥಶ್ರೀ

ಆ ಮಾತುಗಳು ನನ್ನ ಪತ್ನಿಗೇ ಹಿಡಿಸಲಿಲ್ಲ ಎಂದು ಕ್ಷಮೆಯಾಚಿಸಿದ ಹಂಸಲೇಖ:

ದಲಿತರ ಮನೆಯಲ್ಲಿ ಬಲಿತರ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ತಾವು ನೀಡಿರುವ ಹೇಳಿಕೆಯ ವಿಚಾರ ವ್ಯಾಪಕ ವಿವಾದ ಎಬ್ಬಿಸುತ್ತಿದ್ದಂತೆ ಪೇಜಾವರ ಶ್ರೀಗಳ ಕುರಿತಾದ ತಮ್ಮ ಹೇಳಿಕೆಯ ಬಗ್ಗೆ ಹಂಸಲೇಖ ಕ್ಷಮೆಯಾಚಿಸಿದ್ದಾರೆ.

ಅಸ್ಪೃಶತೆಯನ್ನ ತೊಡಗಿಸಲು ಶ್ರೀಗಳು ಶ್ರಮ ವಹಿಸುತ್ತಿದ್ದಾರೆ. ಅದರ ಬಗ್ಗೆ ನನಗೆ ಗೌರವವಿದೆ. ನುಡಿದರೆ ಮುತ್ತಿನಂತಿರಬೇಕು, ಆದ್ರೆ ನಾನು ತಪ್ಪು ಮಾಡಿದೆ. ನಾನು ಆಡಿದ ಮಾತುಗಳು ನನ್ನ ಪತ್ನಿಗೇ ಹಿಡಿಸಲಿಲ್ಲ.  ಅಕೆಯೂ ಸಹ ಅದನ್ನ ವಿರೋಧ ಮಾಡಿದರು. ನನ್ನ ಪತ್ನಿಯ ಬಳಿಯೂ ನಾನು ಕ್ಷಮೆ ಕೇಳಿದ್ದೇನೆ. ನಾನು ಸಂಗೀತಗಾರ – ಕಂಟ್ರೋಲ್‌ನಲ್ಲಿ ಇರಬೇಕು. ಯಾರ ಮನಸ್ಸು ನೋಯಿಸಲು ನನಗೆ ಇಷ್ಟವಿಲ್ಲ. ಹೀಗಾಗಿ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಕೋರಿದ್ದಾರೆ.

Also Read: Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ (hamsalekha statement on pejavara shree dalit visit vishwaprasanna theertha shree reaction to tv9 in udupi)

Published On - 10:32 am, Mon, 15 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್