ಭಾರಿ ಮಳೆ; ಉಡುಪಿ, ಉತ್ತರ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 04, 2024 | 10:12 PM

ಉಡುಪಿ(Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ(Rain)ಗೆ ಅವಾಂತರಗಳು ಸೃಷ್ಟಿಯಾಗಿದ್ದು, ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಹಾಗಾದರೆ ಯಾವ್ಯಾವ ತಾಲೂಕಿನ ಶಾಲೆಗಳಲ್ಲಿ ರಜೆ ಅಂತೀರಾ? ಈ ಸ್ಟೋರಿ ಓದಿ.

ಭಾರಿ ಮಳೆ; ಉಡುಪಿ, ಉತ್ತರ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ ಹಾಗೂ ಉತ್ತರ ಕನ್ನಡದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
Follow us on

ಉಡುಪಿ, ಜು.04: ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ(Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ(Rain)ಗೆ ಅವಾಂತರಗಳು ಸೃಷ್ಟಿಯಾಗಿವೆ. ಜೊತೆಗೆ ಉಡುಪಿಯಲ್ಲಿ ಇಂದು(ಗುರುವಾರ) ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಇತ್ತ ಉತ್ತರ ಕನ್ನಡದಲ್ಲೂ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್​​​ ಆಗಿತ್ತು. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ ಘೋಷಣೆ

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಉಡುಪಿಯಲ್ಲಿ ಭಾರಿ ಮಳೆಗೆ ಮೊದಲ ಬಲಿ; ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವು

ಮೂರು ತಾಲೂಕಿನಾದ್ಯಂತ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ. ಅಗತ್ಯಬಿದ್ದಲ್ಲಿ ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಿದ್ದಾರೆ. ನಾಳೆ ಮಳೆಯಿಂದ ಇನ್ನಷ್ಟು ಅವಾಂತರ ಆಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Thu, 4 July 24