ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ! ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ರಾತ್ರಿಯಿಡೀ ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಮುಂಜಾನೆಯ ವೇಳೆಗೆ ಮಳೆ ಕೊಂಚ ಕಡಿಮೆಯಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಇಂದು ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಉಡುಪಿ: ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇ 17, ಮೇ 19 ರಂದು ಆರೆಂಜ್ ಅಲರ್ಟ್ ಮತ್ತು ಮೇ 18ಕ್ಕೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಡಿಸಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ರಾತ್ರಿಯಿಡೀ ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಮುಂಜಾನೆಯ ವೇಳೆಗೆ ಮಳೆ ಕೊಂಚ ಕಡಿಮೆಯಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಇಂದು ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ. ಜಿಲ್ಲೆಯಾದ್ಯಂತ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಶಿರಸಿ, ಹೊನ್ನಾವರ, ಭಟ್ಕಳ, ಮುಂಡಗೋಡ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ. ಇಲ್ಲೂ ಕೂಡಾ ಮುಂಜಾನೆ ವೇಳೆಗೆ ಮಳೆ ಕೊಂಚ ಕಡಿಮೆಯಾಗಿದೆ.
ಧರೆಗುರುಳಿದ ವಿದ್ಯುತ್ ಕಂಬ: ಮೈಸೂರಿನಲ್ಲಿ ಗಾಳಿ, ಮಳೆಯಿಂದ ವಿದ್ಯುತ್ ಕಂಬ ಧರೆಗುರುಳಿದೆ. ಈ ಘಟನೆ ಕುವೆಂಪುನಗರದ ಕೆಹೆಚ್ಬಿ ಕಾಲೋನಿಯಲ್ಲಿ ನಡೆದಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ಆಗಮಿಸಿ ಕಂಬ ತೆರವುಗೊಳಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕೀನ ಚೀಡಚಿಕ್ಕನಹಳ್ಳಿಯಲ್ಲಿ ಮಳೆಗೆ ದ್ರಾಕ್ಷಿ ಚಪ್ಪರ ಕುಸಿದು ಬಿದ್ದಿದೆ. ರೈತ ವೆಂಕಟರೆಡ್ಡಿ ಎಂಬುವವರ ದ್ರಾಕ್ಷಿ ಚಪ್ಪರ ಕುಸಿದಿರುವ ಹಿನ್ನೆಲೆ ಲಕ್ಷಾಂತರ ಮೌಲ್ಯದ ದ್ರಾಕ್ಷಿ ನಾಶವಾಗಿದೆ.
ಮೈಸೂರು ನಗರದ ಬೋಗಾದಿಯಲ್ಲಿ ಮೋರಿಯ ಬ್ರಿಡ್ಜ್ ಕುಸಿದು ಬಿದ್ದಿದೆ. ನಿರಂತರ ಮಳೆಯಿಂದ ಮೋರಿಗಳು ತುಂಬಿ ಹರಿಯುತ್ತಿವೆ. ಜೊತೆಗೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:35 am, Tue, 17 May 22