ಕುಂದಾಪುರ: ಹಿಂದೂ, ಕ್ರೈಸ್ತ, ಮುಸ್ಲಿಂ ಹಾಡಿಗೆ ಮಕ್ಕಳ ನೃತ್ಯ: ಹಿಂದುತ್ವವಾದಿ ಸಂಘಟನೆಗಳ ಆಕ್ರೋಶ
ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಮತದ ಹಾಡುಗಳಿಗೆ ವಿದ್ಯಾರ್ಥಿನಿಯರು ಹೆಜ್ಜೆ ಹಾಕಿದರು. ಆದ್ರೆ ಅಲ್ಲಾಹು ಅಕ್ಬರ್ (ಆಜಾನ್) ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವೇದಿಕೆಯಲ್ಲಿದ್ದ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದೆ ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಉಡುಪಿ: ಜಿಲ್ಲೆಯ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಮುಸ್ಲೀಮರ ಆಜಾನ್ಗೆ (Azaan) ನೃತ್ಯ (Dance) ಮಾಡಿದ್ದು ಹಿಂದೂ ಸಂಘಟನೆಗಳ (Hindu Organization) ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಹಿಂದೂ ಸಂಘಟನೆಗಳಿಂದ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಶಾಲೆ ಆಡಳಿತ ಮಂಡಳಿ ಕ್ಷಮೆ ಕೇಳಿದೆ.
ಶಂಕರನಾರಾಯಣದ ಮದರ್ ಥೇರೆಸಾ ಮೆಮೋರಿಯಲ್ ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಮಾಡಿದರು. ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಮತದ ಹಾಡುಗಳಿಗೆ ವಿದ್ಯಾರ್ಥಿನಿಯರು ಹೆಜ್ಜೆ ಹಾಕಿದರು. ಆದ್ರೆ ಅಲ್ಲಾಹು ಅಕ್ಬರ್ (ಆಜಾನ್) ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವೇದಿಕೆಯಲ್ಲಿದ್ದ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದೆ ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಆಜಾನ್ ಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಕ್ಷಮೆ ಕೇಳಿದ ಶಾಲೆ ಆಡಳಿತ ಮಂಡಳಿ
ಇನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರ ಹಾಕಿದ್ರು. ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ್ರು. ಹಾಗೂ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ರು. ಸದ್ಯ ವಿರೋಧ ಹೆಚ್ಚಾಗುತ್ತಿದ್ದಂತೆ ಶಾಲೆ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ. ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್ ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಾರೆ. ಯಾರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸುವ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೇ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಘಟನೆ ಹಿನ್ನೆಲೆ
ಕಾರ್ಯಕ್ರಮದಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಮ್ ಹಾಡಿಗೆ ವಿದ್ಯಾರ್ಥಿಗಳು ನಟನೆ ಮಾಡಿದ್ದರು. ಹಿಂದೂ ವಿದ್ಯಾರ್ಥಿಗಳಿಂದ ಆಜಾನ್ ಗೆ ನೃತ್ಯ ಮಾಡಿಸಿರುವ ಬಗ್ಗೆ ಸ್ಥಳದಲ್ಲೇ ಖಂಡನೆ ವ್ಯಕ್ತವಾಗಿತ್ತು. ಇಂದು ಹಿಂದೂ ಜಾಗರಣಾ ವೇದಿಕೆ ಶಂಕರನಾರಾಯಣದಲ್ಲಿ ಪ್ರತಿಭಟನೆ ನಡೆಸಿತ್ತು. ಶಂಕರನಾರಾಯಣ ಜಂಕ್ಷನ್, ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು. ಹಿಂದು ವಿರೋಧಿ ನೀತಿ, ನಡವಳಿಕೆ ಮಾಡದಂತೆ ಹಿಂ.ಜಾ.ವೇ ಸೂಚನೆ ನೀಡಿತ್ತು.
Published On - 1:14 pm, Wed, 16 November 22