ಪೊಲೀಸರು ಮನುಷ್ಯತ್ವ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ: ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬ ಭೇಟಿಯಾಗಿ ಆರಗ ಜ್ಞಾನೇಂದ್ರ ಹೇಳಿಕೆ

ಎಸ್​​ಐ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾನೆ. ತಪ್ಪು ಮಾಡಿದವರಿಗೆ ಏನು ಶಿಕ್ಷೆ ಕೊಡಬೇಕು ಕೊಡುತ್ತೇವೆ. ಆತ ಇಲಾಖೆಗೆ ಸಮರ್ಥನೋ ಅಸಮರ್ಥನೋ ನಿರ್ಧರಿಸ್ತೇವೆ ಎಂದು ಕೋಟ ಗ್ರಾಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಪೊಲೀಸರು ಮನುಷ್ಯತ್ವ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ: ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬ ಭೇಟಿಯಾಗಿ ಆರಗ ಜ್ಞಾನೇಂದ್ರ ಹೇಳಿಕೆ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Jan 01, 2022 | 4:19 PM

ಉಡುಪಿ: ಜಿಲ್ಲೆಯ ಕೋಟ ಗ್ರಾಮದಲ್ಲಿ ಕೊರಗ ಜನಾಂಗದ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಕ್ಕೆ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಇಂದು (ಜನವರಿ 1) ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾದ ಕುಟುಂಬಸ್ಥರನ್ನು ಸಚಿವರು ಭೇಟಿಯಾಗಿದ್ದಾರೆ. ಕೊರಗ ಸಮುದಾಯದ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

ಪೊಲೀಸರು ಮನುಷ್ಯತ್ವ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ. ರೌಡಿಗಳನ್ನು ನಿಯಂತ್ರಿಸಲು ಪೊಲೀಸರನ್ನ ನೇಮಕ ಮಾಡ್ತೇವೆ. ಪೊಲೀಸರೇ ರೌಡಿ ಕೆಲಸ ಮಾಡಿದರೆ ತಡೆಯೋರು ಯಾರು? ಎಸ್​​ಐ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾನೆ. ತಪ್ಪು ಮಾಡಿದವರಿಗೆ ಏನು ಶಿಕ್ಷೆ ಕೊಡಬೇಕು ಕೊಡುತ್ತೇವೆ. ಆತ ಇಲಾಖೆಗೆ ಸಮರ್ಥನೋ ಅಸಮರ್ಥನೋ ನಿರ್ಧರಿಸ್ತೇವೆ ಎಂದು ಕೋಟ ಗ್ರಾಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಕೋಟ ಪೊಲೀಸರಿಂದ ಕೊರಗ ಜನಾಂಗದ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರಗ ಜ್ಞಾನೇಂದ್ರ ಮಾತನಾಡಿದ್ದಾರೆ. ಕೋಟ ಪೊಲೀಸರು ಮದುವೆ ಮನೆಯಲ್ಲಿ ಲಾಠಿಚಾರ್ಜ್ ಮಾಡಿದ್ದರು. ಲಾಠಿಚಾರ್ಜ್ ಮಾಡಿ ತಾವೇ ಪ್ರತಿದೂರು ಕೊಟ್ಟಿದ್ದರು. ಪ್ರತಿ ದೂರು ನೀಡಿದ ಪೊಲೀಸರ ವಿರುದ್ಧ ಆಕ್ರೋಶ ಹೆಚ್ಚಿತ್ತು. ಆಕ್ರೋಶದ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೆಂದ್ರ ಭೇಟಿ ನೀಡಿದ್ದಾರೆ. ಸಂತ್ರಸ್ತ ಕೊರಗ ಕುಟುಂಬ ಬೇಟಿ ಮಾಡಿ ಗೃಹಸಚಿವರು ಮಾತನಾಡಿದ್ದಾರೆ.

ಎರಡು ದಿನ ಸುಮ್ಮನಿದ್ದ ಪೊಲೀಸ್ ಕಾನ್ಸ್ಟೇಬಲ್ ಮೂರನೇ ದಿನ ಕೇಸು ಮಾಡಿದ್ದಾನೆ. ಸರ್ಕಾರಿ ನೌಕರಿಗೆ ಅಡ್ಡಿ ಎಂದು ಪ್ರತಿ ದೂರು ನೀಡಿದ್ದಾನೆ. ಎಲ್ಲರಿಗೂ ಗೊತ್ತಾಗುತ್ತೆ ಇದೊಂದು ಸುಳ್ಳು ಕೇಸ್. ಈ ರೀತಿ ಒಬ್ಬ ಪೋಲೀಸ್ ಸುಳ್ಳು ಕೇಸು ಕೊಡಬಾರದು. ಇದು ಬಹಳ ದೊಡ್ಡ ಅಪರಾಧ. ಸಾಮಾನ್ಯ ಜನ ಇದನ್ನೆಲ್ಲ ಮಾಡ್ತಾರೆ ನಿಜ. ಆದರೆ ನಮ್ಮ ಒಬ್ಬ ಪೊಲೀಸ್ ಈ ಕೆಲಸ ಮಾಡಬಾರದಿತ್ತು ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಕೋಟ ಎಸ್ಐ ಮೇಲಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಆತ ಒಬ್ಬ ದಾಷ್ಟ್ಯದ ಮನುಷ್ಯ ಅನಿಸುತ್ತೆ. ನಾನೇ ಸುಪ್ರೀಂ ಅನ್ನುವಂತೆ ವರ್ತಿಸಿದ್ದಾನೆ. ಮನುಷ್ಯತ್ವವನ್ನೇ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ. ರೌಡಿಗಳನ್ನು ಕಂಟ್ರೋಲ್ ಮಾಡಲು ಪೊಲೀಸ್ ನೇಮಕ ಮಾಡುತ್ತೇವೆ. ಪೊಲೀಸರೇ ರೌಡಿ ಕೆಲಸ ಮಾಡಿದರೆ ತಡೆಯೋರು ಯಾರು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾನೆ. ಹತ್ತು ಲಕ್ಷ ಪೊಲೀಸ್ ಸಿಬ್ಬಂದಿ ಇದ್ದಾರೆ. ಇಂಥ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಅವಮಾನ ಮಾಡುತ್ತಾರೆ. ನಮ್ಮಲ್ಲಿ ಒಳ್ಳೊಳ್ಳೆ ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರಗ ಕುಟುಂಬದ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಇದನ್ನೂ ಓದಿ: ಮದುವೆ ಮನೆಯಲ್ಲಿ ಲಾಠಿಚಾರ್ಜ್: ಕೊರಗರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮದ ಭರವಸೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ