ಲಂಚ ಕೇಳಿದರೆ ಪೊಲೀಸರಿಗೆ ದೂರು ಕೊಡಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೋಹತ್ಯಾ ನಿಷೇಧ ಕಾಯ್ದೆ ವಿಫಲಗೊಂಡಿಲ್ಲ. ಮತ್ತು ಕಾಯ್ದೆ ವಿಫಲವಾಗಲು ಪೊಲೀಸರು ಅವಕಾಶ ಮಾಡಿಕೊಡಬಾರದು. ಗೋಹತ್ಯೆ ಹೆಚ್ಚುತ್ತಿರುವುದು ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋಸಾಗಾಟ ಗೋಹತ್ಯೆ ಶೇಕಡ 100 ನಿಲ್ಲಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದರು.
ಉಡುಪಿ: ಕರ್ನಾಟಕದಲ್ಲಿ ಪೊಲೀಸ್ ನೇಮಕಾತಿಗೆ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೆಂದ್ರ ಲಂಚ ಕೇಳಿದವರ ಬಗ್ಗೆ ನನಗೆ ನೇರ ಮಾಹಿತಿ ಕೊಡಿ. ಇಲ್ಲಿ ಯಾರು ಯಾರನ್ನು ಖರೀದಿ ಮಾಡಲು ಸಾಧ್ಯವಿಲ್ಲ. ನಾವು ಖರೀದಿಯ ಸರಕುಗಳು ಅಲ್ಲ. ಕೆಲಸ ಪಡೆಯುವ ಉದ್ದೇಶದಿಂದ ಯಾರು ಹಣ ಕಳೆದುಕೊಳ್ಳಬೇಡಿ. ನೇಮಕಾತಿಗೆ ಲಂಚ ವಿಚಾರದಲ್ಲಿ ಡಿಜಿಪಿ ಜೊತೆ ಮಾಡಿದ್ದೇನೆ. ವಿಶೇಷವಾದ ತಂಡ ರಚನೆ ಮಾಡಿ ದಾಳಿಗಳನ್ನು ಮಾಡುತ್ತೇವೆ. ಪ್ರತಿ ಪೊಲೀಸ್ ಠಾಣೆ ಮೇಲೆ ನಿಗಾ ಇಡಲಾಗುವುದು. ಎಸ್ಐ ಪೋಸ್ಟ್ ಗೆ 25 ಲಕ್ಷ ಲಂಚ ತೆಗೆದುಕೊಂಡ ಬಗ್ಗೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ನೇಮಕಾತಿ ಹಿಂದಿನ ಜಾಲವನ್ನು ಬಯಲಿಗೆಳೆಯುತ್ತೇವೆ. ಮೆರಿಟ್ ಮತ್ತು ಯೋಗ್ಯತೆ ಇರುವವರು ಪೊಲೀಸ್ ಇಲಾಖೆಗೆ ಬರಬೇಕು. ಹಣ ಪೊಲೀಸ್ ಇಲಾಖೆಯನ್ನು ಕೊಂಡುಕೊಳ್ಳಬಾರದು. ಲಂಚ ವಿಚಾರದಲ್ಲಿ ಸ್ಥಳೀಯರು ಪೊಲೀಸ್ ಠಾಣೆಗೆ ದೂರು ಕೊಡಿ ಎಂದು ಸ್ಪಷ್ಟಪಡಿಸಿದರು.
ಒಂದೇ ಮನೆಯೊಳಗೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಎಲ್ಲರೂ ಅವರವರ ಧರ್ಮದಲ್ಲಿ ಚೆನ್ನಾಗಿರಲಿ ನೆಮ್ಮದಿಯಲ್ಲಿ ಇರಲಿ. ಇನ್ನೊಬ್ಬರ ಧರ್ಮ ಬದಲಾವಣೆ ಮಾಡುವ ವ್ಯವಸ್ಥಿತ ಜಾಲ ಇದೆ. ಈ ಜಾಲವನ್ನು ನಾವು ಮಟ್ಟ ಹಾಕುತ್ತೇವೆ. ಇಂತಹ ಬೆಳವಣಿಗೆಯಿಂದ ಶಾಂತಿ-ಸುವ್ಯವಸ್ಥೆ ಕೆಡುತ್ತದೆ. ಊರೂರಲ್ಲಿ ಬೆಂಕಿ ಹೊತ್ತಿ ಕೊಂಡರೆ ಬಹಳ ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷವಾದ ಕಾಯ್ದೆಯನ್ನು ಮುಂದಿನ ದಿನಗಳಲ್ಲಿ ತರುತ್ತೇವೆ. ಪೊಲೀಸರಿಗೆ ಇನ್ನಷ್ಟು ಅಧಿಕಾರ ಕೊಡುತ್ತೇವೆ ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೋಹತ್ಯಾ ನಿಷೇಧ ಕಾಯ್ದೆ ವಿಫಲಗೊಂಡಿಲ್ಲ. ಮತ್ತು ಕಾಯ್ದೆ ವಿಫಲವಾಗಲು ಪೊಲೀಸರು ಅವಕಾಶ ಮಾಡಿಕೊಡಬಾರದು. ಗೋಹತ್ಯೆ ಹೆಚ್ಚುತ್ತಿರುವುದು ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋಸಾಗಾಟ ಗೋಹತ್ಯೆ ಶೇಕಡ 100 ನಿಲ್ಲಿಸಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಇಲಾಖಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಗೋಹತ್ಯಾ ನಿಷೇಧ ಕಾಯ್ದೆ ವಿಫಲವಾಗಲು ಪೊಲೀಸರು ಬಿಡಬಾರದು ಎಂದು ಉಡುಪಿ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ ಅಜ್ಞಾತ ಸ್ಥಳಗಳಿಂದ ಸ್ಯಾಟಲೈಟ್ ಕರೆ ವಿಚಾರವಾಗಿಯೂ ಮಾತನಾಡಿದ ಅವರು, ಎಷ್ಟು ಕರೆಗಳು ಹೋಗಿದೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ. ಕೇಂದ್ರ ಸರ್ಕಾರದ ತಂಡ ರಾಜ್ಯದ ಪೊಲೀಸರ ಜೊತೆ ಸಂಪರ್ಕದಲ್ಲಿದೆ. ಇದು ರಾಷ್ಟ್ರೀಯ ಭದ್ರತೆಯ ಪ್ರಶ್ನೆ. ಈ ಬಗ್ಗೆ ಹೆಚ್ಚೇನೂ ಮಾತನಾಡಲು ಸಾಧ್ಯವಿಲ್ಲ. ಯಾವುದೇ ಅರಣ್ಯ ಪ್ರದೇಶದಿಂದ ಕರೆ ಹೋಗಿರಲಿ. ಅದನ್ನು ಪತ್ತೆಮಾಡಿ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:
ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್
Published On - 2:47 pm, Sat, 9 October 21