AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr G Parameshwar: ಇಂದಿನಿಂದ 2 ದಿನ ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ

ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

Dr G Parameshwar: ಇಂದಿನಿಂದ 2 ದಿನ ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ
ಗೃಹ ಸಚಿವ ಡಾ.ಪರಮೇಶ್ವರ್
ಆಯೇಷಾ ಬಾನು
|

Updated on: Jun 06, 2023 | 8:23 AM

Share

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್(Dr G Parameshwar) ಅವರು ಇಂದಿನಿಂದ 2 ದಿನ ಮಂಗಳೂರು(Mangaluru), ಉಡುಪಿ(Udupi) ಪ್ರವಾಸ ಕೈಗೊಂಡಿದ್ದಾರೆ. ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ 6 ಗಂಟೆಗೆ ಕೊಲ್ಲೂರಿಗೆ ತೆರಳಿದ್ದಾರೆ.

ಮಾರ್ಚ್ 7 ರಂದು ಬುಧವಾರ ಬೆಳಿಗ್ಗೆ 7 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದಾರೆ. ಡಾ. ಪರವೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು