AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾವಾಸ್ಯೆ ನಡುವೆ ಪತಿಯ ಅಟ್ಟಹಾಸ; ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪತಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಪತಿ ತನ್ನ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹಲ್ಲೆ ನಡೆಸಿ ಬಳಿಕ ಡ್ಯಾನ್ಸ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಸ್ಥಳೀಯರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅಮಾವಾಸ್ಯೆ ನಡುವೆ ಪತಿಯ ಅಟ್ಟಹಾಸ; ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪತಿ
ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪತಿ
TV9 Web
| Edited By: |

Updated on:Aug 04, 2024 | 9:00 AM

Share

ಉಡುಪಿ, ಆಗಸ್ಟ್.04: ಕುಡಿದ ಮತ್ತಿನಲ್ಲಿ ಪತ್ನಿಯ (Wife) ಕುತ್ತಿಗೆಗೆ ಕತ್ತಿಯಿಂದ ಕಡಿದು ಡ್ಯಾನ್ಸ್ (Dance) ಮಾಡಿ ಪತಿ (Husband) ವಿಕೃತಿ ಮೆರೆದಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಪತ್ನಿ ಅನಿತಾ (38) ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಪತಿ ಲಕ್ಷ್ಮಣ ನರ್ತನ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.

ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್​ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೊರಬ ತಾಲೂಕು ಮೂಲದ ದಂಪತಿ, ಕಾಶಿ ಮಠದ ತೋಟ ನೋಡಿಕೊಳ್ಳುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಲಕ್ಷ್ಮಣ ತನ್ನ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾನೆ. ಮನೆಯ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಮನೆಯಲ್ಲೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತನೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

ಕೆಲ ಕ್ಷಣದ ಬಳಿಕ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇಷ್ಟಾದರೂ ಮೈ ಮೇಲೆ ದೈವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿ ಯಾವುದಕ್ಕೂ ಕ್ಯಾರೇ ಎಂದಿಲ್ಲ. ಸದ್ಯ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿದ್ದು ಒಂದೂವರೆ ಗಂಟೆಯ ಬಳಿಕ ಆರೋಪಿ ಪೊಲೀಸರ ಕೈಗೆ ಸಿಕ್ಕಿದ್ದಾನೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇಂದು ಭೀಮನ ಅಮಾವಸ್ಯೆ ಬೇರೆ ಇದ್ದು ತಡ ರಾತ್ರಿ ವ್ಯಕ್ತಿಯ ವರ್ತನೆ ನೋಡಿ ಜನರಲ್ಲಿ ಭಯ ಮೂಡಿದೆ.

ಇದನ್ನೂ ಓದಿ: ಕೇರಳ: ಭೂಕುಸಿತದಲ್ಲಿ ಸಿಲುಕಿರುವ ಪ್ರಾಣಿಗಳ ರಕ್ಷಣೆ, ಸುರಕ್ಷತೆಗೆ ಕಂಟ್ರೋಲ್ ರೂಂ ತೆರೆದ ಸರ್ಕಾರ

ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥ

ಶಾಲಾ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿಷಕಾರಿ ಬೀಜ ಸೇವಿಸಿದ ಬಳಿಕ ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಶಾಲೆ ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿಗೆ ಹೆಚ್ಚಿನ ಸಮಸ್ಯೆಯಾಗಿದ್ದು, ಉಳಿದವರ ಆರೋಗ್ಯ ಸ್ಥಿರವಾಗಿದೆ. ಬಳ್ಳಾರಿಯ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:50 am, Sun, 4 August 24