AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ವಿಷದ ಇಂಜೆಕ್ಷನ್​ ಕೊಡಿಸಿ ಕೊಲೆ ಯತ್ನ: ಹೆಂಡ್ತಿ ಬದುಕುಳಿಯುತ್ತಿದ್ದಂತೆಯೇ ಪ್ರೇಯಸಿ ಜತೆ ಪತಿ ಆತ್ಮಹತ್ಯೆ

ಗರ್ಭಿಣಿ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಪತಿ, ತನ್ನ ಪ್ರೇಯಸಿಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೈಂದೂರು ತಾಲೂಕಿನ ಗೋಳಿಹೊಳೆಯ ಸೌಪರ್ಣಿಕಾ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ಜೋಡಿಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಪತ್ನಿಗೆ ವಿಷದ ಇಂಜೆಕ್ಷನ್​ ಕೊಡಿಸಿ ಕೊಲೆ ಯತ್ನ: ಹೆಂಡ್ತಿ ಬದುಕುಳಿಯುತ್ತಿದ್ದಂತೆಯೇ ಪ್ರೇಯಸಿ ಜತೆ ಪತಿ ಆತ್ಮಹತ್ಯೆ
ಮೃತರು Image Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 30, 2026 | 4:19 PM

Share

ಮುಖ್ಯಾಂಶಗಳು

  • ಸೌಪರ್ಣಿಕ ನದಿ ಸಮೀಪ ಜೋಡಿಗಳ ಮೃತದೇಹ ಪತ್ತೆ
  • ಗರ್ಭಿಣಿ ಪತ್ನಿ ಕೊಲೆಗೆ ಯತ್ನಿಸಿದ್ದ ಗಂಡ
  • ಬೈಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ, ಸೆಪ್ಟೆಂಬರ್​​ 30: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆಯ ಸೌಪರ್ಣಿಕ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನೇಣು‌ ಬಿಗಿದ ರೀತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಜೋಡಿ ಮೃತದೇಹ ಪತ್ತೆ ಆಗಿರುವ ಘಟನೆ ನಡೆದಿದೆ. ಸದ್ಯ ಮೃತರನ್ನು ಗೋಳಿಹೊಳೆಯ ಚಾರ್ತಾಲಿ ಗ್ರಾಮದ ನಿವಾಸಿಗಳಾದ ವಿಠಲ ನಾಯ್ಕ್(35) ಮತ್ತು ಭವ್ಯ(33) ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನರ್ಸ್ ಎಂದು ಪ್ರೇಯಸಿಯನ್ನು ಪರಿಚಯಿಸಿ ಕೊಲೆಗೆ ಸಂಚು

ಆಟೋ ಚಾಲಕನಾಗಿದ್ದ ವಿಠಲ ನಾಯ್ಕ್, ಪ್ರೇಯಸಿ ಭವ್ಯ ಟೈಲರ್ ವೃತ್ತಿ ಮಾಡಿಕೊಂಡಿದ್ದರು. ಸುಮಾರು 20 ದಿನಗಳ ಹಿಂದೆ ವಿಠಲ ನಾಯ್ಕ್ ತನ್ನ ಪ್ರೇಯಸಿ ಭವ್ಯಳನ್ನು ನರ್ಸ್ ಎಂದು ಗರ್ಭಿಣಿ ಪತ್ನಿಗೆ ಪರಿಚಯಿಸಿದ್ದ. ಬಳಿಕ ಪತ್ನಿಗೆ ವಿಷದ ಇಂಜೆಕ್ಷನ್ ಕೊಡಿಸಿ, ಪ್ರೇಯಸಿಯೊಂದಿಗೆ ಊರು ಬಿಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ: ನಿಗೂಢವಾಗಿ ನಾಪತ್ತೆಯಾಗಿದ್ದ ನವ ವಿವಾಹಿತೆ ಪ್ರಿಯಾಂಕಾ ಶವವಾಗಿ ಪತ್ತೆ: ಬರೋಬ್ಬರಿ 11 ದಿನಗಳ ಬಳಿಕ ಕೆರೆಯಲ್ಲಿ ಕಂಡುಬಂತು ಮೃತದೇಹ

ವಿಷ ಪ್ರಾಶನದಿಂದ ತೀವ್ರ ಅಸ್ವಸ್ಥಗೊಂಡಿದ್ದ ಪತ್ನಿಯನ್ನು ಸ್ಥಳೀಯರು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LIVE TV

ಪತ್ನಿ ಬದುಕುಳಿದ ಬೆನ್ನಲ್ಲೇ ಆತ್ಮಹತ್ಯೆ ಶಂಕೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿ ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗುತ್ತಿದ್ದಂತೆಯೇ, ಇತ್ತ ಗೋಳಿಹೊಳೆಯ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವಿಠಲ ನಾಯ್ಕ್ ಹಾಗೂ ಭವ್ಯ ಶವಗಳು ಪತ್ತೆಯಾಗಿವೆ. ಪತ್ನಿ ಬದುಕುಳಿದಿರುವ ವಿಷಯ ತಿಳಿದು, ಇಬ್ಬರೂ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನು ಓದಿ: ರೇಷನ್ ಕಾರ್ಡ್ ವಿಚಾರಕ್ಕೆ ತಮ್ಮನಿಗೆ ಅಣ್ಣನೇ ಚಾಕು ಹಾಕಿದ್ನಾ? ಒಡವಟ್ಟಿದವರ ದ್ವೇಷದ ಹಿಂದಿರುವ ಕಥೆ ಇಲ್ಲಿದೆ

ಇನ್ನು ಸ್ಥಳಕ್ಕೆ ಭೇಟಿ ನೀಡಿರುವ ಬೈಂದೂರು ಠಾಣಾ ಪೊಲೀಸರು ಮೃತದೇಹಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ