ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ

ದೆಹಲಿಯ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ.​ ಯಾರೂ ಕರೆ ಮಾಡಿಲ್ಲ, ಅದಕ್ಕೆ ಉತ್ತರ ಕೊಡುವ ಪ್ರಶ್ನೆಯೂ ಇಲ್ಲ ಎಂದು ಉಡುಪಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಸ್ಪಷ್ಟನೆ ನೀಡಿದ್ದಾರೆ.

ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​​
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2023 | 4:38 PM

ಉಡುಪಿ, ಆಗಸ್ಟ್​ 26: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಶುಕ್ರವಾರ ಕರೆ ಮಾಡಿ ಮಾತನಾಡಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನೆಲೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್​​​, ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ದೆಹಲಿಯ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಕರೆ ಬಾರದೆ ಈ ರೀತಿ ಚರ್ಚೆಗಳೆಲ್ಲ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿ

ಕರ್ನಾಟಕ ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ. ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತೆ. ಬಿಜೆಪಿಯಲ್ಲಿ ಸಾಕಷ್ಟು ಜನ ನೊಂದಿದ್ದಾರೆ, ಸಂಕಟಪಡುತ್ತಿದ್ದಾರೆ. ಬಿಜೆಪಿಯಿಂದ ಹೊರಗೆ ಬರಲು ಬಹಳಷ್ಟು ಜನ ತಯಾರಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತೆ. ರಾಜ್ಯದಲ್ಲಿ ಕಾಂಗ್ರೆಸ್​ 12ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ ಎಂದರು.

ಇದನ್ನೂ ಓದಿ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ ಎಂದ ಹೆಚ್​ಡಿ ಕುಮಾರಸ್ವಾಮಿ; ಕಾರಣ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಸಿಗದ ಅವಕಾಶದ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಏನಾಗುತ್ತದೆ ಎನ್ನುವ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ಮೊದಲು 120 ಸ್ಥಾನ ಗೆದ್ದಿದ್ದ ಬಿಜೆಪಿ ದಯಾನೀಯ ಸ್ಥಿತಿಗೆ ಬಂದಿದೆ. ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ ಎಂದು​ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ