ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅದರಂತೆ ಇದೀಗ ಉಡುಪಿ ತಾಲೂಕಿನ ಹಿರಿಯಡ್ಕ ಗ್ರಾಮದಲ್ಲಿ ಮೊಬೈಲ್ ಕೊಡದಿದ್ದಕ್ಕೆ ಮನನೊಂದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಉಡುಪಿಯಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2024 | 3:11 PM

ಉಡುಪಿ, ಆ.20: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್(16) ಆತ್ಮಹತ್ಯೆಗೆ ಶರಣಾದ ಯುವಕ. ನಿನ್ನೆ(ಆ.19) ಮೃತ ವಿದ್ಯಾರ್ಥಿ ಪ್ರಥಮೇಶ್ ಮನೆಯಿಂದ ಕಾಣೆಯಾಗಿದ್ದ. ಇಂದು(ಮಂಗಳವಾರ) ಬೆಳಿಗ್ಗೆ ಕಾಲೇಜು ಸಮೀಪದ ಮನೆಯ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ಹೆತ್ತವರ ಗೋಳಾಟ ಮುಗಿಲುಮುಟ್ಟಿದೆ.

ಬೆಂಗಳೂರಿನಲ್ಲಿ ಸಾಫ್ಟ್​​ವೇರ್​​ ಇಂಜಿನಿಯರ್ ಆತ್ಮಹತ್ಯೆ

ಬೆಂಗಳೂರು: ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪೆನಿಯ ಉದ್ಯೋಗಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಯಾಜ್ಞಿಕ್​​​(22) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಆ.16ರಂದು ಹೋಟೆಲ್​ನಲ್ಲಿ ರೂಂ ಬಾಡಿಗೆ ಪಡೆದಿದ್ದ ಯಾಜ್ಞಿಕ್, ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್​​ ಕವರ್​ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಶವವವಾಗಿ ಪತ್ತೆ

ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಮುಳಗುಂದಿ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದಾಗ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಶಿವು(30) ಮೃತ ವ್ಯಕ್ತಿ. ಜಾನಕಲ್ ಗ್ರಾಮದ ನಿವಾಸಿಯಾಗಿರುವ ಶಿವು, ವೇದಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಈ ವೇಳೆ ದುರ್ಘಟನೆ ನಡೆದಿದ್ದು, ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ