ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು, ತಾಯಿ ರಕ್ಷಣೆ

ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೊಳ್ಳಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ತಾಯಿಯನ್ನ ರಕ್ಷಣೆ ಮಾಡಲಾಗಿದೆ.

ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು, ತಾಯಿ ರಕ್ಷಣೆ
ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಕ್ಕಳು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2024 | 9:12 PM

ಉಡುಪಿ, ಜೂ.29: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ(Kundapura) ತಾಲೂಕಿನ ಕೆರಾಡಿ ಗ್ರಾಮದ ನಂದ್ರೊಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ತಾಯಿಯನ್ನ ರಕ್ಷಣೆ ಮಾಡಲಾಗಿದೆ. ನೀರಿನಲ್ಲಿ ಮುಳುಗಿ ಧನರಾಜ್‌(13) ಹಾಗೂ ಛಾಯಾ(7) ಕೊನೆಯುಸಿರೆಳೆದಿದ್ದಾರೆ. ರಕ್ಷಿಸಲ್ಪಟ್ಟ ತಾಯಿ ಶೀಲಾ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನ ಜೀವನಹಳ್ಳಿ ಬಳಿ ರೈಲ್ವೆ ಹಳಿ ಸಮೀಪ ಅಪರಿಚಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ರೈಲ್ವೆ ಪೊಲೀಸರಿಗೆ ವ್ಯಾಪ್ತಿಗೆ ಬರುವ ಹಿನ್ನೆಲೆ ಕಂಟೋನ್ಮೆಂಟ್ ರೈಲ್ವೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹ ರವಾನೆ ಮಾಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಬಯಲಾಗಬೇಕಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಮಿನಿ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ನವೀನ್ ಸ್ಥಳದಲ್ಲೇ ಸಾವು

ಬೆಂಗಳೂರು: ಮಿನಿ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೆಜ್ಜಗದಹಳ್ಳಿ ಬಳಿ ನಡೆದಿದೆ. ಚಿಕ್ಕಬಾಣಾವರ ಬಳಿಯ ಸೋಮಶೆಟ್ಟಿಹಳ್ಳಿಯ ನವೀನ್(25) ಮೃತ ವ್ಯಕ್ತಿ. ಮಿನಿ ಬಸ್‌ನಲ್ಲಿದ್ದ 25 ಮಹಿಳೆಯರ ಪೈಕಿ ಐವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳಿಗೆ ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾರ್ಮೆಂಟ್ಸ್‌ ಫ್ಯಾಕ್ಟರಿಯ ಮಹಿಳೆಯರನ್ನು ಕರೆದೊಯ್ಯತ್ತಿದ್ದ ಮಿನಿ ಬಸ್‌ ಇದಾಗಿತ್ತು. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ