ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು

ಸಾವು ಯಾವಾಗ ಬರುತ್ತದೆ ಎಂದು ಹೇಳುವುದು ಕಷ್ಟ, ಅದರಂತೆ ಉಡುಪಿ(Udupi)ಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು
ಮಣಿಪಾಲದಲ್ಲಿ ಚಾಲಕ ಉಸಿರು ಗಟ್ಟಿ ಸಾವು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 17, 2024 | 2:58 PM

ಉಡುಪಿ, ಆ.17: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ಉಡುಪಿ(Udupi)ಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ ಬಸ್ ಹರಿದು ವಿದ್ಯಾರ್ಥಿ ಸ್ಥಳದಲ್ಲಿ ಸಾವು

ತುಮಕೂರು: ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಶಾಲಾ ಬಸ್​ ಹರಿದು 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ತೇಜಸ್(14) ಮೃತ ಬಾಲಕ. ಚಲಿಸುತ್ತಿದ್ದ ಬೈಕ್​ನಿಂದ ಆಯತಪ್ಪಿ ಕೆಳಗೆ ಬಿದ್ದ ಬಾಲಕನ ತಲೆ ಮೇಲೆಯೇ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ. ಇತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಯುವತಿ ಸಾವು, ಐವರಿಗೆ ಗಾಯ; ಅಪಘಾತದ ದೃಶ್ಯ ಸೆರೆ

ಶಿಕ್ಷಕ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಶಿಕ್ಷಕ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ಶಾಂತಿನಗರದಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕನಾಗಿರುವ ನಟರಾಜು, ಪತ್ನಿ ಅನಿತಾ ಎಂಬುವವರ ಮೇಲೆ ‌ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುತ್ತಿಗೆಯಿಂದ ಪತ್ನಿ ಅನಿತಾ ತಲೆಗೆ ಹೊಡೆದು ನಟರಾಜು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಅನಿತಾಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಇನ್ನು ಈ ಕುರಿತು ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 17 August 24