AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೋಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ
ಆಲಿಫ್ ಇಸ್ಲಾಂImage Credit source: tv9
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 18, 2026 | 9:19 AM

Share

ಉಡುಪಿ, ಫೆಬ್ರವರಿ 18: ಭಾರತೀಯ ನೌಕಾ ಪಡೆಗೆ (Indian Navy) ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ (Pakistan) ರವಾನಿಸಿದ ಪ್ರಕರಣದಲ್ಲಿ ಉಡುಪಿ (Udupi) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್​​ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್, ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ರಹಸ್ಯವಾಗಿ ಪಾಕಿಸ್ತಾನಕ್ಕೆ ರವಾನಿಸಿರುವ ಆರೋಪ ಹಿನ್ನೆಲೆ, ಉಡುಪಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಒಬ್ಬ ಪ್ರಮುಖ ಆರೋಪಿ ಮತ್ತು ಮಾಹಿತಿ ರವಾನಿಸಲು ಬಳಸಿದ ಫೇಸ್‌ಬುಕ್ ಪೇಜ್‌ ಅಡ್ಮಿನ್​ನ ಬಂಧನ ಬಾಕಿಯಿದೆ.

ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್​ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿತ್ತು.

ಇದನ್ನೂ ಓದಿ: ಉಡುಪಿ: ಕೊಚ್ಚಿನ್ ಶಿಪ್ ಯಾರ್ಡ್​ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಇಬ್ಬರ ಬಂಧನ

ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆ ಕೊಚ್ಚಿನ್ ಶಿಪ್ ಯಾರ್ಡ್. ಇದು ನೌಕಾಪಡೆಗೆ ಮಾತ್ರವಲ್ಲದೆ, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ. ಸಂಸ್ಥೆಯ ಪ್ರಧಾನ ಕಚೇರಿ ಕೇರಳದಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ