ಅಮಲು ಪದಾರ್ಥ ಏರಿಸಿ ರಸ್ತೆಯಲ್ಲಿ ಚೆನ್ನೈ ಮೂಲದ ಮೆಡಿಕಲ್ ವಿದ್ಯಾರ್ಥಿಗಳು-ವಿದ್ಯಾರ್ಥಿನಿಯ ನಡುವೆ ಹೊಡೆದಾಟ: ವಿಡಿಯೋ

ವಿದ್ಯಾರ್ಥಿಗಳ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಹೋಗಿದೆ. ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತಾ ಪೊಲೀಸರಿಗೆ ಆವಾಜ್ ಹಾಕಿದ್ದಾರೆ ಆ ಮೂವರೂ ಯುವಕರು.

ಅಮಲು ಪದಾರ್ಥ ಏರಿಸಿ ರಸ್ತೆಯಲ್ಲಿ ಚೆನ್ನೈ ಮೂಲದ ಮೆಡಿಕಲ್ ವಿದ್ಯಾರ್ಥಿಗಳು-ವಿದ್ಯಾರ್ಥಿನಿಯ ನಡುವೆ ಹೊಡೆದಾಟ: ವಿಡಿಯೋ
ಅಮಲು ಪದಾರ್ಥ ಏರಿಸಿ ರಸ್ತೆಯಲ್ಲಿ ಚೆನೈ ಮೂಲದ ಮೆಡಿಕಲ್ ವಿದ್ಯಾರ್ಥಿಗಳು-ವಿದ್ಯಾರ್ಥಿನಿಯ ನಡುವೆ ಹೊಡೆದಾಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 08, 2022 | 1:02 PM

ಉಡುಪಿ: ಅಮಲು ಪದಾರ್ಥ ಸೇವಿಸಿ ಕಾಲೇಜು ವಿದ್ಯಾರ್ಥಿಗಳ ರಂಪಾಟ ನಡೆಸಿರುವ ಘಟನೆ ಉಡುಪಿಯ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ. ನಡು ರಸ್ತೆಯಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿಯ ನಡುವೆ ಹೊಡೆದಾಟಗಳು ನಡೆದಿವೆ. ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರೂ, ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತಾಗ ಗಲಾಟೆ ಶುರವಚ್ಚಿಕೊಂಡಿದ್ದಾರೆ

ವೈದ್ಯಕೀಯ ವಿದ್ಯಾರ್ಥಿಗಳಾಗಿ ಕೊರೊನಾ ವೀಕೆಂಡ್​ ಕರ್ಫ್ಯೂಗೂ ಡೋಂಟ್​ ಕೇರ್​: ಸ್ವತಃ ವೈದ್ಯಕೀಯ ವಿದ್ಯಾರ್ಥಿಗಳಾಗಿ ಕೊರೊನಾಗೂ ಡೋಂಟ್​ ಕೇರ್​, ಕೊರೊನಾ ವೀಕೆಂಡ್​ ಕರ್ಫ್ಯೂಗೂ ಡೋಂಟ್​ ಕೇರ್​ ಎಂದ ಮೆಡಿಕಲ್ ವಿದ್ಯಾರ್ಥಿಗಳು ಇವರು. ವಿದ್ಯಾರ್ಥಿಗಳ ಈ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಹೋಗಿದೆ. ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತಾ ಪೊಲೀಸರಿಗೆ ಆವಾಜ್ ಹಾಕಿದ್ದಾರೆ ಆ ಮೂವರೂ ಯುವಕರು. ಕೊನೆಗೆ ಸಾರ್ವಜನಿಕರ ಸಹಾಯದಿಂದ ಪೊಲೀಸರು ಅಂಬುಲೆನ್ಸ್‌ನಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚೆನ್ನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಇವರು. ವಿದ್ಯಾರ್ಥಿಗಳ ಹೈ ಡ್ರಾಮಾದಿಂದಾಗಿ ಸಾರ್ವಜನಿಕರಿಗೆ ಪುಕ್ಕಟೆ ಮನರಂಜನೆಯಂತೂ ಧಾರಾಳವಾಗಿ ಸಿಕ್ಕಿದೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರ್ಕಳದಲ್ಲಿ ಗೋಕಳ್ಳರ ಕಳ್ಳಾಟ: ಕರಿಯಕಲ್ಲು ಕಜೆ ಎಂಬಲ್ಲಿನ ಎರಡು ಮನೆಗಳಿಂದ ಗೋವುಗಳ ಕಳವಾಗಿದೆ. ಯಶೋಧ ಆಚಾರ್ಯ ಮತ್ತು ಸುಧಾಕರ ಶೆಟ್ಟಿ ಎಂಬವರ ಮನೆಯಿಂದ ಗೋ ಕಳವು ಆಗಿದೆ. ಒಂದು ವರ್ಷದ ಅವಧಿಯಲ್ಲಿ ಒಂದು ಮನೆಯಿಂದ 16 ದನಗಳ ಕಳವಾಗಿರುವುದು ಸೋಜಿಗವಾಗಿದೆ. ಮತ್ತೊಂದು ಮನೆಯಿಂದ 12 ಗೋವುಗಳನ್ನು ಅಪಹರಿಸಿರುವ ಕಳ್ಳರು ಈ ಪ್ರದೇಶದಿಂದ ಒಂದು ವರ್ಷದ ಅವಧಿಯಲ್ಲಿ ಈ ಕಳ್ಳಾಟದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಹಿಂದೂಜಾಗರಣ ವೇದಿಕೆಯ ಮುಖಂಡರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರಿಗೆ ಒತ್ತಾಯಿಸಿದ್ದಾರೆ.

College Students Under Inebriated Condition Creates Ruckus In Udupi | ಮತ್ತಲ್ಲಿ ವಿದ್ಯಾರ್ಥಿಗಳ ರಂಪಾಟ

ಇದನ್ನೂ ಓದಿ: ಕರ್ಫ್ಯೂ ಮಧ್ಯೆ ಮಾನವೀಯತೆ ತೋರಿದ ಹುಬ್ಬಳ್ಳಿ ಪೊಲೀಸರು: ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಯುವಕನಿಗೆ ನೆರವು

Published On - 11:27 am, Sat, 8 January 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ