AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ: ಗೊಂದಲಗಳಿಗೆ ಪ್ರಮೋದ್​​ ಮಧ್ವರಾಜ್​​ ತೆರೆ

ಶ್ರೀಕೃಷ್ಣ ಮಠದ ಕನಕನ ಕಿಂಡಿ ಸ್ವರ್ಣ ಕವಚವನ್ನು ಪ್ರಧಾನಿ ಮೋದಿ ಉದ್ಘಾಟಿಸಿದಾಗ, ದಾನಿ ಪ್ರಮೋದ್ ಮಧ್ವರಾಜ್‌ಗೆ ಆಹ್ವಾನವಿರಲಿಲ್ಲ. ಇದೇ ವಿಚಾರವೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆದರೆ, ಕಡೆಗಣನೆ ಆರೋಪಗಳನ್ನು ತಳ್ಳಿಹಾಕಿದ ಮಧ್ವರಾಜ್, ಪ್ರಧಾನಿ ಉದ್ಘಾಟಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರೂ ಪ್ರಮೋದ್​​ ಮಧ್ವರಾಜ್​​ ಅವರಿಗೆ ಆಹ್ವಾನ ಇಲ್ಲದಿದ್ಧ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ.

ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ: ಗೊಂದಲಗಳಿಗೆ ಪ್ರಮೋದ್​​ ಮಧ್ವರಾಜ್​​ ತೆರೆ
ಪ್ರಮೋದ್​​ ಮಧ್ವರಾಜ್​​ ಸ್ಪಷ್ಟನೆ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಪ್ರಸನ್ನ ಹೆಗಡೆ|

Updated on: Dec 01, 2025 | 5:12 PM

Share

ಉಡುಪಿ, ಡಿಸೆಂಬರ್​​ 01: ಶ್ರೀಕೃಷ್ಣ ಮಠಕ್ಕೆ ಭೇಟಿ ವೇಳೆ ಪ್ರಧಾನಿ ಮೋದಿ ಅವರು ಪ್ರಮೋದ್​​ ಮಧ್ವರಾಜ್​ ಕೊಡುಗೆ ನೀಡಿದ್ದ ಕನಕನ ಕಿಂಡಿಯ ಸ್ವರ್ಣ ಕವಚವನ್ನು ಉದ್ಘಾಟಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ಮಾಜಿ ಸಚಿವರಿಗೆ ಆಹ್ವಾನ ಇರಲಿಲ್ಲ. ಇದೇ ವಿಚಾರವೀಗ ರಾಜಕೀಯವಾಗಿ ಒಂದಿಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಕೊಡುಗೆ ನೀಡಿದ್ದು ಬಿಜೆಪಿ ಮುಖಂಡರೇ ಆದರೂ ಅವರನ್ನು ಸೈಡ್​​ಲೈನ್​ ಮಾಡಲಾಯ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ಆರಂಭವಾಗಿರು ಕಾರಣ ಪ್ರಮೋದ್​​ ಮಧ್ವರಾಜ್​​ ಅವರೇ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ.

‘ನನ್ನ ಕಡೆಗಣಿಸಿದ್ದಾರೆಂದು ಅನಿಸುತ್ತಿಲ್ಲ’

ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್​​ ಮಧ್ವರಾಜ್​​ ಅವರ ಜೊತೆಯಾಗಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಎಲ್ಲ ಊಹಾಪೋಹಗಳಿಗೂ ಮಾಜಿ ಸಚಿವರು ಉತ್ತರಿಸಿದ್ದಾರೆ.ತಮ್ಮ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನರುಚ್ಛರಿಸಿದ್ದಾರೆ. ಮಠದವರಾಗಲಿ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರೂ ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ಅದನ್ನು ಹುಡುಕುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದಿದ್ದಾರೆ. ಕನಕನ ಕಿಂಡಿಗೆ ಸ್ವರ್ಣ ಕವಚ ದಾನ ಮಾಡಿದ ವ್ಯಕ್ತಿಯಾಗಿ ಪ್ರಧಾನಿಯ ಉದ್ಘಾಟನಾ ಕ್ಷಣವನ್ನು ಸ್ಥಳದಲ್ಲೇ ನಿಂತು ವೀಕ್ಷಿಸುವ ಆಸೆ ಇದ್ದರೂ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ನನ್ನ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡವರಿಗೆ ಧನ್ಯವಾದ ತಿಳಿಸೋದಾಗಿಯೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ ಮಾಡಿದ ನಮೋ

ಇನ್ನು ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕೂಡ ಸ್ಪಷ್ಟನೆ ನೀಡಿದ್ದಾರೆ. ಮಠ ಮತ್ತು ನಮ್ಮಿಂದ ಕಳುಹಿಸಿದ ಅತಿಥಿಗಳ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು  ಸೇರಿಸಲಾಗಿತ್ತು. ಆದರೆ ಪ್ರಧಾನಿಯ ಕಚೇರಿಯಿಂದ ಪರಿಷ್ಕೃತ ಪಟ್ಟಿಯನ್ನು ಕಳುಹಿಸಿದಾಗ ಅವರು ಸೇರಿದಂತೆ ಹಲವು ಹೆಸರುಗಳು ಇರಲಿಲ್ಲ. ಇದರಲ್ಲಿ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಪಾತ್ರವಹಿಸಿಲ್ಲ. ಪ್ರಮೋದ್​​ ಮಧ್ವರಾಜ್ ಅವರೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು–ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್ ಮಧ್ವರಾಜ್ ಒಟ್ಟಿಗಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ