Udupi News: ವೈದ್ಯರ ತಂಡ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ

ಸರ್ಕಾರ ಎಷ್ಟು ಖಡಕ್ ಎಚ್ಚರಿಕೆ ನೀಡುದರೂ ಕರಾವಳಿಯಲ್ಲಿ ನೈತಿಕ ಪೊಲೀಸ್​ಗಿರಿ ನಿಲ್ಲುತ್ತಿಲ್ಲ. ಇದೀಗ ಉಡುಪಿಯಲ್ಲಿ ನೈತಿಕ ಪೊಲೀಸ್​ ಗಿರಿ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

Udupi News: ವೈದ್ಯರ ತಂಡ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ
ನೈತಿಕ ಪೊಲೀಸ್ ಗಿರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 11:14 AM

ಉಡುಪಿ, (ಆಗಸ್ಟ್ 02): ಉಡುಪಿ(Udupi) ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಹಿಂದೂ ಮುಸ್ಲಿಂ ಬಣ್ಣ ಬಳಿದುಕೊಂಡಿದ್ದು, ರಾಷ್ಟ್ರಮಟ್ಟದವರೆಗೂ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ನೈತಿಕ ಪೊಲೀಸ್​ಗಿರಿ(Moral Policing) ಬೆಳಕಿಗೆ ಬಂದಿದೆ. ಹೌದು…ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಅವಾಜ್​ ಹಾಕಿ ಪೊಲೀಸ್​ಗಿರಿ ನಡೆಸಿದ್ದಾರೆ. ಈ ಸಂಬಂಧ ಕಾರ್ಕಳ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ

ಮಾಳ ಎಸ್.ಕೆ. ಗಡಿ ಬಳಿಯಿಂದ ಕಾರು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಆ ವೇಳೆ ಕಾರಿನಲ್ಲಿದ್ದ ಮಹಿಳೆ 112ಗೆ ಕರೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಪೊಲೀಸರು, ಐವರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಮಂಗಳೂರಿನ ಹೆಸರಾಂತ ಕಾಲೇಜಿನ ವೈದ್ಯರ ತಂಡ ಕಾರಿನಲ್ಲಿ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮೂಲಕ ಮಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಆರೋಪಿಗಳು, ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿ ಕುಂಟಲ್ಪಾಡಿ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಅಲ್ಲದೇ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಕೂಗಾಡಿದ್ದಾರೆ. ಕಾರಿನಲ್ಲಿದ್ದ ಮಹಿಳೆ ಕೂಡಲೇ ನೇರವಾಗಿ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ ಕೂಡಲೇ ಸ್ಥಳಕ್ಕೆ ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜೆ, ಸರ್ಕಲ್ ಇನ್ಸ್​ಪೆಕ್ಟರ್ ನಾಗರಾಜ್, ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?