ಉಡುಪಿ ಕಾರ್ಕಳ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪಾಯಕಾರಿ ಪ್ರಯಾಣ: ಸಿಎಂಒ ಕ್ಷಿಪ್ರ ಪ್ರತಿಕ್ರಿಯೆ!

ಹಿಂಬದಿಯ ಬಾಗಿಲಿನ ಮೆಟ್ಟಿಲು ತುಂಡಾಗಿ ನೇತುಕೊಂಡಿದ್ದ ಸ್ಥಿತಿಯಲ್ಲೇ ಕೆಎಸ್‌ಆರ್‌ಟಿಸಿ ಬಸ್​​​ ಸಂಚರಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾರ್ಕಳದಿಂದ ಉಡುಪಿಗೆ ತೆರಳುತ್ತಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿತ್ತು. ಘಟನೆ ಬಗ್ಗೆ ಖುದ್ದು ಮುಖ್ಯಮಂತ್ರಿಗಳ ಕಚೇರಿಯೇ ಸ್ಪಷ್ಟನೆ ನೀಡಿದೆ. ಸಿಎಂಒ ಹೇಳಿದ್ದೇನು? ಇಲ್ಲಿದೆ ವಿವರ.

ಉಡುಪಿ ಕಾರ್ಕಳ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪಾಯಕಾರಿ ಪ್ರಯಾಣ: ಸಿಎಂಒ ಕ್ಷಿಪ್ರ ಪ್ರತಿಕ್ರಿಯೆ!
ಉಡುಪಿ ಕಾರ್ಕಳ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪಾಯಕಾರಿ ಪ್ರಯಾಣ
Follow us
Ganapathi Sharma
|

Updated on: Sep 03, 2024 | 8:00 AM

ಬೆಂಗಳೂರು, ಸೆಪ್ಟೆಂಬರ್ 3: ಕಾರ್ಕಳದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​​​ನ ಹಿಂಬದಿಯ ಬಾಗಿಲಿನ ಮೆಟ್ಟಿಲು ತುಂಡಾಗಿ ನೇತುಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿತ್ತು. ಅದೇ ಬಸ್​​​ನಲ್ಲಿ ಪ್ರಯಾಣಿಕರು ಅಪಾಯಕಾರಿ ಯಾನ ಕೈಗೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿತ್ತು. ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಚೇರಿಯಿಂದ (ಸಿಎಂಒ) ಕ್ಷಿಪ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದರ ಜತೆಗೆ, ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka ಎಕ್ಸ್‌ ಖಾತೆಗೆ ಟ್ಯಾಗ್‌ ಮಾಡಿ ಸಂದೇಶ ಪ್ರಕಟಿಸುವಂತೆ ಮನವಿ ಮಾಡಿದೆ.

ಸಿಎಂಒ ಹೇಳಿದ್ದೇನು?

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವೀಡಿಯೊ, ಆಗಸ್ಟ್ 29 ರ ಬೆಳಗ್ಗಿನದ್ದಾಗಿದೆ. ಪ್ರಸಕ್ತ ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ಎದುರಾದ ಏರುತಗ್ಗುಗಳ ಪರಿಣಾಮ ಹಿಂದಿನ ಬಾಗಿಲಿನ ಮೆಟ್ಟಿಲು ನೆಲಕ್ಕೆ ಬಡಿದು ತುಂಡಾಗಿದೆ. ಸ್ವಲ್ಪ ದೂರದವರೆಗೆ ನೆಲಕ್ಕೆ ಉಜ್ಜಿಕೊಂಡು ಬಂದಿದ್ದರಿಂದ ಕೀರಲು ಶಬ್ದ ಮಾಡಿದೆ. ತಕ್ಷಣ ಎಚ್ಚೆತ್ತುಕೊಂಡ ನಿರ್ವಾಹಕ ಹಾಗೂ ಚಾಲಕ ಬಸ್‌ ನಿಲ್ಲಿಸಿ ಪರಿಶೀಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹಿಂದೆ ಬರುತ್ತಿದ್ದ ಬಸ್‌ಗೆ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ಸಿಎಂಒ ವಿವರಣೆ ನೀಡಿದೆ.

ಸಿಎಂಒ ಸಂದೇಶ

ಕಾಮಗಾರಿಯಲ್ಲಿದ್ದ ರಸ್ತೆಯ ಏರುತಗ್ಗುಗಳನ್ನು ನಿಭಾಯಿಸುವ ಸಂದರ್ಭ ಮೆಟ್ಟಿಲು ತುಂಡಾಗಿದ್ದೇ ವಿನಃ ಬೇರೆ ಯಾವ ಕಾರಣಗಳಿಂದಲ್ಲ ಎಂಬುದು ಪ್ರಾಥಮಿಕ ನೋಟಕ್ಕೆ ತಿಳಿದುಬಂದಿದೆ. ಆದರೂ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ತಾಂತ್ರಿಕ ಸಿಬ್ಬಂದಿಗಳು, ಮೇಲ್ವಿಚಾರಕರು ಹಾಗೂ ಘಟಕ ವ್ಯವಸ್ಥಾಪಕರಿಗೆ ಈ ಬಗ್ಗೆ ಸಮಜಾಯಿಷಿ ನೀಡುವಂತೆ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ ಎಂದೂ ಸಿಎಂಒ ಸಂದೇಶದಲ್ಲಿ ಉಲ್ಲೇಖಿಸಿದೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ

ಮೆಟ್ಟಿಲುಗಳು ತುಂಡಾಗಿ ನೇತುಕೊಂಡಿದ್ದ ಸ್ಥಿತಿಯಲ್ಲೇ ಕೆಎಸ್​ಆರ್​ಟಿಸಿ ಬಸ್ ಸಂಚಾರ ಮಾಡುತ್ತಿರುವುದನ್ನು ಬಿಜೆಪಿ ಟೀಕಿಸಿತ್ತು. ರಾಜ್ಯದಲ್ಲಿ ಸುಳ್ಳು ಭರವಸೆಗಳ ಆಮಿಷಗಳನ್ನು ಒಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಸಮರ್ಪಕವಾಗಿ ಈಡೇರಿಸಲಾಗದೆ ಜನರಿಂದ ನಿತ್ಯವೂ ಹಿಡಿ ಶಾಪ ಹಾಕಿಸಿಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಒಂದೇ ಒಂದು ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸದೆ, ಯಾವೊಂದು ಹೊಸ ಯೋಜನೆಯನ್ನು ಜಾರಿಗೊಳಿಸಲಾಗದೆ ಖಜಾನೆ ಬರಿದು ಮಾಡಿಕೊಂಡಿರುವುದು ದಿನ ಕಳೆದಂತೆ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿತ್ತು.

ವಿಡಿಯೋ ನೋಡಿ: ಕೆಎಸ್​ಆರ್​ಟಿಸಿ ಬಸ್​ನ ಸ್ಥಿತಿ ನೋಡಿ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕೊಟ್ಟಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಪರಿಣಾಮ ಎಲ್ಲೆಂದರಲ್ಲಿ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ, ಡೀಸೆಲ್ ಖಾಲಿಯಾಗಿ ನಿಲ್ಲುತ್ತೇವೆ, ಜನರೇ ತಳ್ಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ, ಮಹಿಳೆಯರು ನಿತ್ಯ ಕಿರಿ ಕಿರಿ ಎದುರಿಸುತ್ತಿದ್ದಾರೆ, ಶಾಲಾ ಕಾಲೇಜುಗಳಿಗೆ ಪ್ರತಿನಿತ್ಯ ಪ್ರಯಾಣಿಸುವ ವಿದ್ಯಾರ್ಥಿ ಸಮೂಹ ಸರಿಯಾದ ಸಮಯಕ್ಕೆ ಬಸ್ ಗಳು ಬಾರದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ