Haladi srinivas shetty: ಚುನಾವಣೆಯಿಂದ ಹಿಂದೆಸರಿದ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸಶೆಟ್ಟಿ ತೀರ್ಮಾನ ಮಾಡಿದ್ದು, ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

Haladi srinivas shetty: ಚುನಾವಣೆಯಿಂದ ಹಿಂದೆಸರಿದ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ
ಚುನಾವಣೆಯಿಂದ ಹಿಂದೆಸರಿದ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ
Follow us
|

Updated on:Apr 03, 2023 | 9:30 PM

ಉಡುಪಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ತೀರ್ಮಾನ ಮಾಡಿದ್ದು, ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಹಣ ಮಾಡಲು ರಾಜಕೀಯಕ್ಕೆ ಹೋಗಬೇಕು ಎಂಬ ಮಾತು ಸಾಮನ್ಯ. ಆದರೆ ಇದಕ್ಕೆ ತದ್ವಿರುದ್ದವಾಗಿ ನಡೆದುಕೊಂಡ ಜಾಲಾಡಿ ಶ್ರೀನಿವಾಸ ಶೆಟ್ಟಿ, ತಮ್ಮ ಜಮೀನು, ಆಸ್ತಿಯನ್ನೇ ಮಾರಾಟ ಮಾಡಿ ಜನಸೇವೆ ಮಾಡಿದ ಅಪರೂಪದ ರಾಜಕಾರಣಿಯಾಗಿದ್ದಾರೆ. ಸದ್ಯ ಚುನಾವಣೆಯಿಂದ ಹಿಂದೆಸರಿಯುವ ಮೂಲಕ ರಾಜಕಾರಣಕ್ಕೆ ನಿವೃತ್ತಿ ಘೋಷಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕುಂದಾಪುರ ವಿಧಾನಸಭೆ ಕ್ಷೇತ್ರದ ಶಾಸಕನಾಗಿ ಸತತವಾಗಿ 5 ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ ಧರ್ಮದ ಮತದಾರ ಬಾಂಧವರಿಗೆ ನನ್ನ ಕೃತಜ್ಞಯನ್ನು ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದೆ ಇರಲು ನಿಶ್ಚಿಯಿಸಿದ್ದೇನೆ. ನಾನು ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ತಂತ ನಿಷ್ಠೆಯಿಂದ ನನ್ನ ಜವಾಬ್ದಾರಿಯನ್ನು ನಿರ್ವಹಿಸಿರುತ್ತೇನೆ . ಕುಂದಾಪುರದ ವಿಧಾನಸಭಾ ಕ್ಷೇತ್ರವು ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಈ ಕ್ಷೇತ್ರದ ಎಲ್ಲಾ ವರ್ಗದ ಮತದಾರರಿಗೂ ತಮ್ಮ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಕೊಟ್ಟು ಅವರ ನೋವು ಸಂಕಷ್ಟಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಅಣ್ಣನ ವಿರುದ್ದ ಸ್ಪರ್ಧೆಗೆ ಸಿದ್ದವಾದ ಬಿಜೆಪಿ ಮಹಿಳಾ ಉಪಾಧ್ಯಕ್ಷೆ: ಪುತ್ರನಿಗೆ ಪಟ್ಟ ಕಟ್ಟಲು ಸಜ್ಜಾಗಿದ್ದ ಆನಂದಸಿಂಗ್ ಗೆ ಹೊಸ ತೆಲೆ ನೋವು, ಪುತ್ರನಿಗೆ ಸಿಗುತ್ತಾ ಚಾನ್ಸ್!

ಐದು ಬಾರಿ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ನಡೆದ ಲೋಕಸಭಾ, ವಿಧಾನಸಭೆ, ವಿಧಾನಪರಿಷತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

ಮತದಾರರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ನಂಬಿಕೆಯೇ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದ್ದು, ಅದಕ್ಕಾಗಿ ನಾನು ನನ್ನ ಸಮಸ್ತ ಮತಬಾಂಧವರಿಗೂ ಮತ್ತೊಮ್ಮೆ ಕೃತಜ್ಞತೆ ಸಲ್ಲಿಸುತ್ತಾ ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಬಿಜೆಪಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ಪಕ್ಷೇತರರಾಗಿ ನಿಂತು ಗೆಲ್ಲಲು ಸಹಕರಿಸಿದ ಎಲ್ಲರಿಗೂ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಎಲ್ಲಾ ಮತಬಾಂಧವರೂ ಸಹಕಾರ ನೀಡಬೇಕಾಗಿ ಮನವಿ ಮಾಡಿದರು.

ಆಸ್ತಿ ಮಾರಾಟ ಮಾಡಿ ಜನಸೇವೆ ಮಾಡಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ರಾಜಕೀಯ ಇರುವುದು ಹಣ ಮಾಡಲು ಅಲ್ಲ, ಜನಸೇವೆಗಾಗಿ ಎಂದು ಅರಿತುಕೊಂಡಿರುವ ಹಾಲಾಡಿಯವರು ಜನಸೇವೆಗಾಗಿ ತಮ್ಮ ಆಸ್ತಿ, ಜಮೀನು ಮಾರಾಟ ಮಾಡಿದ್ದಾರೆ. ಅಲ್ಲದೆ, ತಮ್ಮ ಮನೆಯನ್ನೇ ಪಕ್ಷ ಮತ್ತು ಶಾಸಕರ ಕಚೇರಿಯಾಗಿ ಮಾಡಿಕೊಂಡಿದ್ದಾರೆ. ಇನ್ನೊಂದು ವಿಶೇಷವೆಂದರೆ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಯಪೀಯಿ ಅವರಂತೆ ಇವರೂ ವಿವಾಹವಾಗದೆ ಜನಸ್ಪಂದನಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಇವರನ್ನು ಕುಂದಾಪುರದ ವಾಯಪೇಯಿ ಅಂತಾನೂ ಕರೆಯುತ್ತಾರೆ.

ತನ್ನ ಗುರುವಿನ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಚುನಾವಣೆಯಿಂದ ಹಿಂದೆಸರಿದ ಹಾಲಾಡಿ?

ಹೇಳಿಕೇಳಿ ಹಾಲಾಡಿಯವರ ರಾಜಕೀಯ ಗುರು ಬಿಜೆಪಿ ಹಿರಿಯ ನಾಯಕ ಎಜಿ ಕೊಡ್ಗಿ. ಸದ್ಯ ಇವರ ಪುತ್ರ ಕಿರಣ್ ಕೊಡ್ಗಿ ಅವರು ಶ್ರೀನಿವಾಸ್ ಶೆಟ್ಟಿ ಶಿಷ್ಯರಾಗಿದ್ದು, ಹಾಲಾಡಿಯವರ ಬಲಗೈ ಎಂದೇ ಕರೆಯಲಾಗುತ್ತದೆ. ಸದ್ಯ ಕಿರಣ್​ ಅವರಿಗೆ ಚುನಾವಣೆಯಲ್ಲಿ ಅವಕಾಶ ನೀಡುವ ನಿಟ್ಟಿನಲ್ಲಿ ಚುನಾವಣ ರಣಕಣದಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಹಿಂದೆಸರಿದಿದ್ದಾರೆ ಎನ್ನಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Mon, 3 April 23