ಪ್ರವಾಸೋದ್ಯಮ ಇಲಾಖೆಯಿಂದ ಕಂಬಳಕ್ಕೆ ಉಡುಗೊರೆ; 1 ಕೋಟಿ ರೂ. ಸಹಾಯಧನ ಬಿಡುಗಡೆ

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಶ್ರೀ ಸಿ.ಪಿ.ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು.

ಪ್ರವಾಸೋದ್ಯಮ ಇಲಾಖೆಯಿಂದ ಕಂಬಳಕ್ಕೆ ಉಡುಗೊರೆ; 1 ಕೋಟಿ ರೂ. ಸಹಾಯಧನ ಬಿಡುಗಡೆ
ಕಂಬಳ (ಪ್ರಾತಿನಿಧಿಕ ಚಿತ್ರ)
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 18, 2021 | 4:51 PM

ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸುವ ಸಲುವಾಗಿ ಸಹಾಯಧನ ನೀಡಲು ತೀರ್ಮಾನಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಇದೀಗ ಸುಮಾರು ಒಂದು ಕೋಟಿ ರೂ. ಹಣವನ್ನು ಸಹಾಯ ಧನವಾಗಿ ಕಂಬಳಕ್ಕೆ ನೀಡಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ತಿಳಿಸಿದೆ.

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ರೂ. ಲಕ್ಷದಂತೆ ಒಟ್ಟು 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

ಕೆಲವು ಷರತ್ತುಗಳು 1. ಕಂಬಳಕ್ಕಾಗಿಯೇ ಬಿಡುಗಡೆ ಮಾಡಿದ ಅನುದಾನವನ್ನು ಬಳಸಿಕೊಳ್ಳಬೇಕು. 2. ಮಂಜೂರು ಮಾಡಿ ಅನುದಾನವನ್ನು ಸಮರ್ಪಕವಾಗಿ ಹಾಗೂ ಸಂಪೂರ್ಣವಾಗಿ ವಿನಿಯೋಗಿಸಿದಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಮತ್ತು ಲೆಕ್ಕ ಪರಿಶೋಧಕರಿಂದ ಲೆಕ್ಕಪಟ್ಟಿಯನ್ನು ಪಡೆಯಬೆಕು. 3. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡಬೇಕು. 4. ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವಂತಿರಬೇಕು. 5. ಕಂಬಳವನ್ನು ಒಂದು ತಂಡದಿಂದ ಅಯೋಜಿಸಬೇಕು. ಸದರಿ ತಂಡವು ಒಂದೇ ಕುಟುಂಬಕ್ಕೆ ಸೇರಿರಬಾರದು.

ಇದನ್ನೂ ಓದಿ

ಕಂಬಳದಲ್ಲಿ ಪುಟ್ಟ ಬಾಲಕಿಯೊಬ್ಬಳು ಕಂಬಳ ಗದ್ದೆಗೆ ಇಳಿದು ಹೊಸ ಇತಿಹಾಸ ಬರೆದಿದ್ದಾಳೆ

ಪಾಕಿಸ್ತಾನದ ಈ ನವವಧುವನ್ನು ಭರ್ಜರಿ ಹೊಗಳುತ್ತಿದ್ದಾರೆ ನೆಟ್ಟಿಗರು; ಪತಿಯ ಬಳಿ ಇಟ್ಟ ಆ ಒಂದು ಬೇಡಿಕೆಯಿಂದ ಸ್ಟಾರ್​ ಆಗ್ಬಿಟ್ರು ಮಹಿಳೆ