ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಾರ್ವಜನಿಕ ಹುದ್ದೆ ನೀಡಬೇಡಿ: ಸರ್ಕಾರದ ಹಿಂಬಾಗಿಲ ನೇಮಕಾತಿಗೆ ಹೈಕೋರ್ಟ್ ಬ್ರೇಕ್

ಹೈಕೋರ್ಟ್ ಸೋತ ರಾಜಕಾರಣಿಗಳನ್ನು ಸರ್ಕಾರಿ ಹುದ್ದೆಗಳಿಗೆ ನೇಮಿಸುವುದನ್ನು ತೀವ್ರವಾಗಿ ವಿರೋಧಿಸಿದೆ. ವಿಶೇಷವಾಗಿ ಭೂ ಸಕ್ರಮ ಸಮಿತಿಗಳ ಅಧ್ಯಕ್ಷರಾಗಿ ಹಿಂಬಾಗಿಲಿನ ನೇಮಕಾತಿಯನ್ನು ತೀವ್ರವಾಗಿ ಟೀಕಿಸಿದೆ. ಸೂಕ್ತ ಕಾನೂನು ಜ್ಞಾನ, ಪ್ರಾಮಾಣಿಕತೆ, ಮತ್ತು ಆಡಳಿತಾತ್ಮಕ ಸಾಮರ್ಥ್ಯದಂತಹ ಕಟ್ಟುನಿಟ್ಟಿನ ಅರ್ಹತಾ ಮಾನದಂಡಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಈ ನಿರ್ಧಾರವು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಅರ್ಹತೆಯನ್ನು ಖಚಿತಪಡಿಸುತ್ತದೆ.

ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಾರ್ವಜನಿಕ ಹುದ್ದೆ ನೀಡಬೇಡಿ: ಸರ್ಕಾರದ ಹಿಂಬಾಗಿಲ ನೇಮಕಾತಿಗೆ ಹೈಕೋರ್ಟ್ ಬ್ರೇಕ್
ಸಾಂದರ್ಭಿಕ ಚಿತ್ರ

Updated on: Nov 04, 2026 | 10:48 AM

ಬೆಂಗಳೂರು, ನ.4: ರಾಜಕೀಯ ವ್ಯಕ್ತಿಗಳು ಚುನಾವಣೆ ಸೋತ ನಂತರವು ಅವರಿಗೆ ಸರ್ಕಾರ ಹುದ್ದೆಗಳನ್ನು ನೀಡುವುದು ಅಥವಾ ಹಿಂಬಾಗಿಲಿನಿಂದ ಆಯ್ಕೆ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೀಗ ಅನಧಿಕೃತ ಜಮೀನು ಸಕ್ರಮಗೊಳಿಸುವ ಕಮಿಟಿಯ ಅಧ್ಯಕ್ಷರ ಹುದ್ದೆಗೆ ರಾಜಕೀಯ ಪರಾಜಿತ ಅಭ್ಯರ್ಥಿಗಳಿಗೆ ಹಿಂಬಾಗಿಲಿನ ನೇಮಕಾತಿ ಮಾಡಿಕೊಳ್ಳುವ ರಾಜ್ಯ ಸರ್ಕಾರದ ನಡೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ರೂಲ್ 108-EE(1)(a) ಅಡಿಯಲ್ಲಿ ಅನಧಿಕೃತವಾಗಿ ಭೂಮಿ ವಶಪಡಿಸಿಕೊಂಡ ಅರ್ಜಿಗಳ ಪರಿಶೀಲನೆಗೆ ರಚಿಸಲಾಗುವ ಹೆಚ್ಚುವರಿ ಸಮಿತಿಯ ಅಧ್ಯಕ್ಷರ ಹುದ್ದೆ ನೇಮಕಾತಿ ಮಾಡಲು ಕಟ್ಟುನಿಟ್ಟಿನ ಅರ್ಹತಾ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಉನ್ನತ ನ್ಯಾಯಪೀಠ ನಿರ್ದೇಶನ ನೀಡಿದೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು 2026ರಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿ ಭೂಷಣ್ ಅವರಿದ್ದ ದ್ವಿಪೀಠವು ಈ ಪ್ರಮುಖ ಆದೇಶ ಹೊರಡಿಸಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 94-A(2-A) ಅಡಿಯಲ್ಲಿ ಹೆಚ್ಚುವರಿ ಸಮಿತಿ ರಚಿಸಿ ರಾಜ್ಯ ಸರ್ಕಾರ 2023ರ ಡಿಸೆಂಬರ್ 4 ಮತ್ತು ಡಿಸೆಂಬರ್ 26ರಂದು ಹೊರಡಿಸಿದ್ದ ಅಧಿಸೂಚನೆಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ನವೆಂಬರ್ 2, 2023ರಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು 12,313 ಬಾಕಿ ಅರ್ಜಿಗಳ ವಿಲೇವಾರಿಗೆ ಸೆಕ್ಷನ್ 94(A)(1) ಅಡಿಯಲ್ಲಿ ಸಮಿತಿಯ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿತ್ತು. ಆದರೆ, ನಂತರ ರಾಜ್ಯ ಸರ್ಕಾರ ಹೆಚ್ಚುವರಿ ಸಮಿತಿ ರಚಿಸಿ 2023ರ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ಅಭ್ಯರ್ಥಿಯನ್ನು ನೇಮಕ ಮಾಡಲು ಯತ್ನಿಸಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಶಾಸಕರು ದ್ವಿಪೀಠಕ್ಕೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸ್ವಂತ ಗಳಿಕೆ ಇದ್ದು, ಸ್ವಾವಲಂಬಿಯಾಗಿರೋ ಹೆಂಡತಿಗೆ ಜೀವನಾಂಶ ಪಡೆಯುವ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಹೆಚ್ಚುವರಿ ಸಮಿತಿಯ ಅಧ್ಯಕ್ಷರ ಹುದ್ದೆಗೆ ಸೂಕ್ತ ಕಾನೂನು ಜ್ಞಾನ, ಆಡಳಿತಾತ್ಮಕ ಸಾಮರ್ಥ್ಯ, ಕಂದಾಯ ಕ್ಷೇತ್ರದ ಅನುಭವ, ಪ್ರಾಮಾಣಿಕತೆ ಹಾಗೂ ನಿಷ್ಪಕ್ಷಪಾತ ನಡವಳಿಕೆಯನ್ನು ಮೂಲ ಮಾನದಂಡವನ್ನಾಗಿ ನಿಗದಿಪಡಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯನ್ನು ಇಂತಹ ಪ್ರಮುಖ ಕಂದಾಯ ಸಮಿತಿ ಅಧ್ಯಕ್ಷರನ್ನಾಗಿ ಹಿಂಬಾಗಿಲಿನಿಂದ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದ ಸರ್ಕಾರದ ಶೈಲಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us