ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ Vs ಮಾಜಿ ಶಾಸಕರ ವಾರ್​​: ದೇವರ ಅಂಗಳ ತಲುಪಿದ ರಾಜಕೀಯ ಕಚ್ಚಾಟ

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಕಚ್ಚಾಟ ತೀವ್ರಗೊಂಡಿದೆ. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಂಗ್ರೆಸ್‌ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ವೈಯಕ್ತಿಕ ದಾಳಿ ಮತ್ತು ಆರೋಪಗಳ ವಿರುದ್ಧ ಬೇಸರಗೊಂಡು, ದೇವರು ಮತ್ತು ದೈವದ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ. ಆದರೆ ಜನರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಶಾಸಕರು ಇದೇ ವೇಳೆ ತಿಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ Vs ಮಾಜಿ ಶಾಸಕರ ವಾರ್​​: ದೇವರ ಅಂಗಳ ತಲುಪಿದ ರಾಜಕೀಯ ಕಚ್ಚಾಟ
ಶಾಸಕ ಗುರ್ಮೆ ಸುರೇಶ್​​ ಶೆಟ್ಟಿ ಅವರಿಂದ ಪ್ರಾರ್ಥನೆ
Image Credit source: Tv9 Kannada
Edited By:

Updated on: Mar 09, 2026 | 2:39 PM

ಉಡುಪಿ, ಮಾರ್ಚ್​ 09: ಕಂಬಳದ ವಿಚಾರವಾಗಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶುರುವಾದ ರಾಜಕೀಯ ಕಚ್ಚಾಟವೀಗ ದೈವ ಮತ್ತು ದೇವರ ಅಂಗಳ ತಲುಪಿದೆ. ತನ್ನ ಮೇಲೆ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಬೇಸರಗೊಂಡಿರುವ ಬಿಜೆಪಿ ಶಾಸಕ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೇವರು ಮತ್ತು ದೈವದ ಮೊರೆ ಹೋಗಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ದೇಗುಲ ಮತ್ತು ಪೇಟೆಬೆಟ್ಟು ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಈ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.

ಕಾಂಗ್ರೆಸ್​​ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ವಿರುದ್ಧ ಬೇಸರ ಹೊರಹಾಕಿರುವ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಾರೆ ಎಂದು ಆರೋಪಿಸಿದ್ದಾರೆ. ಮಾರಿಯಮ್ಮನ ಮುಂದೆ ಸತ್ಯ ಸಮರ್ಪಿಸಿದ್ದೇನೆ. ಎಲ್ಲವನ್ನು ತಾಯಿಯೇ ನೋಡಿಕೊಳ್ಳಲಿ ಎಂದು ಹೇಳುವ ಮೂಲಕ ವೈಯಕ್ತಿಕ ನಿಂದನೆ ವಿಚಾರಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿಯೂ ಕೈ ಮುಗಿದು ಶಾಸಕರು ಪ್ರಾರ್ಥಿಸಿದ್ದು, ಸೊರಕೆ ಸವಾಲಿನ ಹಿನ್ನೆಲೆ ಈ ರೀತಿ ನಡೆದುಕೊಂಡಿರೋದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!

ತಮ್ಮ ಮೇಲಿನ ಅದಿರು ಲೂಟಿ ಆರೋಪದ ಬಗ್ಗೆಯೂ ಬೇಸರ ವ್ಯಕ್ತಪಡಿಸಿರುವ ಶಾಸಕ ಗುರ್ಮೆ ಸುರೇಶ್​​ ಶೆಟ್ಟಿ, ನಾನು ಯಾವುದೇ ಅನ್ಯಾಯ ಮಾಡಿಲ್ಲ. ಮಗನ ಆರ್ಥಿಕ ವ್ಯವಹಾರದ ಬಗ್ಗೆ ಸೊರಕೆ ಮಾಡಿರುವ ಆರೋಪದಿಂದ ಮನನೊಂದು ದೇವರಿಗೆ ಶರಣಾಗಿದ್ದೇನೆ. ನನ್ನ ಕುಟುಂಬ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ಪ್ರತಿ ಬಾರಿ ತನ್ನ ಕುಟುಂಬದ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಾರೆ. ಅನಾಚಾರ, ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ್ದಾರೆ. ಒಂದು ಸುಳ್ಳನ್ನು 10 ಸರಿ ಹೇಳಿದಾಗ ಜನರು ನಂಬುತ್ತಾರೆ. ಅದೇ ಕಾರಣಕ್ಕೆ ನಾನು ದೇವರಿಗೆ ಮೊರೆ ಹೋಗಿದ್ದೇನೆ. ಸುಳ್ಳು ಸಾಯಬೇಕು ಸತ್ಯ ಗೆಲ್ಲಬೇಕು. ನನಗೆ ಬದುಕಿಗೆ ಬೇಕಾದಷ್ಟು ಸಂಪತ್ತು ಭಗವಂತ ಕೊಟ್ಟಿದ್ದು, 40 ವರ್ಷದಿಂದ ಉದ್ಯಮ ನಡೆಸುತ್ತಿದ್ದೇನೆ. ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ. ಆದರೆ ಜನರಿಗೆ ತಪ್ಪು ಸಂದೇಶ ಹೋಗಬಾರದು. ನಾನು ಮಾಡಿರುವುದು ಪ್ರಾರ್ಥನೆ ಹೊರತು ಆಣೆ ಪ್ರಮಾಣ ಅಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us