AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನ್ನೂ ಬಿಡದ ಖದೀಮರು: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್​ಸೈಟ್​​ ಮೂಲಕ ಕಿಡಿಗೇಡಿಗಳು ಭಕ್ತರಿಂದ ಹಣ ಪಡೆದು ವಂಚಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ಕುರಿತಾಗಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿಯ ಘಟನೆ ಹಿಂದೊಮ್ಮೆ ನಡೆದಿತ್ತು.

ದೇವರನ್ನೂ ಬಿಡದ ಖದೀಮರು: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ
ಕೊಲ್ಲೂರು ಮೂಕಾಂಬಿಕೆ Image Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 10, 2026 | 4:05 PM

Share

ಉಡುಪಿ, ಸೆಪ್ಟೆಂಬರ್​ 10: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನ ಹಾಗೂ ಜಗದಾಂಬಿಕಾ ಅತಿಥಿಗೃಹದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ವಂಚಿಸಿದ್ದಾರೆ. ಸದ್ಯ ಈ ಕುರಿತಾಗಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅತಿಥಿಗೃಹದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿ

ದೇವಸ್ಥಾನಕ್ಕೆ ಬರುವ ಭಕ್ತರಿಗೆ ಕೊಠಡಿಗಳನ್ನು ಕಾಯ್ದಿರಿಸುವುದಾಗಿ ನಂಬಿಸಲು ಖದೀಮರು ಜಗದಾಂಬಿಕಾ ಅತಿಥಿಗೃಹದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ರೂಪಿಸಿದ್ದಾರೆ. ಕೊಠಡಿ ಬುಕಿಂಗ್ ಹೆಸರಿನಲ್ಲಿ ಭಕ್ತರನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ, ಫೋನ್ ಪೇ ಕ್ಯೂಆರ್ ಕೋಡ್ ಕಳುಹಿಸಿ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಹಣ ಪಾವತಿಯಾದ ಬಳಿಕ ನಕಲಿ ರಶೀದಿ ನೀಡಿ ಹಲವು ಭಕ್ತರಿಗೆ ವಂಚಿಸಿದ್ದಾರೆ.

LIVE TV

ಇದನ್ನೂ ಓದಿ: 11.32 ಕೋಟಿ ರೂ. ವೆಚ್ಚದಲ್ಲಿ ಹೊಸ ರೂಪ ಪಡೆದ ಬೈಂದೂರಿನ ಸೋಮೇಶ್ವರ ಬೀಚ್: ಪ್ರವಾಸಿಗರನ್ನು ಸೆಳೆಯುತ್ತಿದೆ ‘ಪ್ರಕೃತಿ-ಆಧುನಿಕತೆಯ’ ಸಂಗಮ

ಈ ವಂಚನೆ ಜಾಲದ ಕುರಿತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರು ಕೊಲ್ಲೂರು ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತೆ ಖದೀಮರಿಂದ ವಂಚನೆ: ಭಕ್ತರಲ್ಲಿ ಆತಂಕ 

ಈ ಹಿಂದೆ ಕೂಡ ಇದೇ ರೀತಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದರು. ಇದೀಗ ಮತ್ತೆ ಅದೇ ರೀತಿಯ ಪ್ರಕರಣ ನಡೆದಿರುವುದು ಭಕ್ತರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ಇದನ್ನೂ ಓದಿ: ‘ಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ’: ಬಣ್ಣದ ಮಾತು ನಂಬಿ ಹಣ ಕಳೆದುಕೊಂಡ ಸಾವಿರಾರು ಮಂದಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ