ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ

ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.

ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ
ವಿಶ್ವ ಹಿಂದೂ ಪರಿಷತ್ ಮನವಿ
Follow us
TV9 Web
| Updated By: ganapathi bhat

Updated on:Mar 26, 2022 | 3:29 PM

ಉಡುಪಿ: ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ನಡೆಯುವ ಸಲಾಂ ಮಂಗಳಾರತಿ ಎಂಬ ಆರತಿಯ ಹೆಸರು ತೆಗೆಯುವಂತೆ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ದೇಗುಲದ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿದೆ. ಟಿಪ್ಪು ಸುಲ್ತಾನ್ ನೆನಪಿಗಾಗಿ ನಡೆಯುವ ಮಂಗಳಾರತಿಯ ಸಲಾಂ ಮಂಗಳಾರತಿ ಎಂಬ ಹೆಸರನ್ನು ತೆಗೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಟಿಪ್ಪು ಕ್ರೂರಿ, ಮತಾಂಧ, ಹಿಂದೂ ವಿರೋಧಿ ಎಂದು ವಿಹಿಂಪ ಹೇಳಿದೆ. ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಕ್ರಮ ಕೈಗೊಳ್ಳಬೇಕು. ಸಲಾಂ ಹೆಸರನ್ನು ತೆಗೆದು ದೇವರ ಹೆಸರಲ್ಲಿ ಆರತಿ ಮಾಡಿ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಗೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯದಲ್ಲಿ ಜಾತ್ರಾ ಮಹೋತ್ಸವ ವೇಳೆ ಮಾಡಲಾಗುವ ಈ ಆರತಿಯ ಹೆಸರು ಬದಲಿಸುವಂತೆ ಆಗ್ರಹ ಕೇಳಿಬಂದಿದೆ.

ಕೊಲ್ಲೂರು ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬೇಡಿ ಎಂದು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಈ ಮೊದಲು ಮನವಿ ಸಲ್ಲಿಕೆ ಮಾಡಲಾಗಿತ್ತು. ಕೊಲ್ಲೂರು ಪಂಚಾಯತಿಗೆ ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮನವಿ ಮಾಡಲಾಗಿತ್ತು. ಬಳಿಕ ಮುಸ್ಲಿಂ ವ್ಯಾಪಾರಿಗಳ ಜತೆ ಪಂಚಾಯಿತಿ ಅಧ್ಯಕ್ಷ ಚರ್ಚೆ ನಡೆಸಿದ್ದರು. ನಂತರ ದೇವಾಲಯದ ವಠಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ನಿರ್ಧರಿಸಲಾಗಿತ್ತು. ಆ ಬಳಿಕ ಇದೀಗ ಸಲಾಂ ಪೂಜೆಯ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ದೇವಾಲಯದಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: Budget 2022: ಕಾಶಿಯಾತ್ರೆ ಕೈಗೊಳ್ಳುವವರಿಗೆ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯಕ್ಕೆ ಪ್ಯಾಕೇಜ್ ಟ್ರಿಪ್

ಇದನ್ನೂ ಓದಿ: ಹಿಂದೂ ಜಾತ್ರೆಗಳು ಇನ್ನು ಹಿಂದೂಗಳಿಂದ, ಹಿಂದೂಗಳಿಗೋಸ್ಕರ ಮತ್ತು ಹಿಂದೂಗಳಿಗೆ ಮಾತ್ರ: ಹಿಂದೂ ಕಾರ್ಯಕರ್ತರು

Published On - 2:30 pm, Sat, 26 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ