AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ

Coronavirus: ಆಧಾರ್ ಕಾರ್ಡ್ ತೋರಿಸಿದರಷ್ಟೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯ ಮಾಡಲಾಗಿದೆ.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ
ಕೊಲ್ಲೂರು ಮೂಕಾಂಬಿಕೆ ದೇಗುಲ
TV9 Web
| Updated By: ganapathi bhat|

Updated on:Sep 04, 2021 | 4:10 PM

Share

ಉಡುಪಿ: ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಡ್ಡಾಯ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇಗುಲದಲ್ಲಿ ಹೀಗೆ ಆದೇಶ ಹೊರಡಿಸಲಾಗಿದೆ. ಅದರಂತೆ, ದೇಗುಲಕ್ಕೆ ಭೇಟಿ ನೀಡುವ ಭಕ್ತರು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಕಠಿಣ ನಿಯಮಗಳ ಆದೇಶ ಹಿನ್ನೆಲೆ ಆಡಳಿತ ಮಂಡಳಿಯಿಂದ ಈ ಸೂಚನೆ ಹೊರಬಿದ್ದಿದೆ.

ಆಧಾರ್ ಕಾರ್ಡ್ ತೋರಿಸಿದರಷ್ಟೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯ ಮಾಡಲಾಗಿದೆ. ಕೊಲ್ಲೂರು ದೇಗುಲಕ್ಕೆ ಅತಿಹೆಚ್ಚು ಸಂಖ್ಯೆಯಲ್ಲಿ ಕೇರಳದಿಂದ ಭಕ್ತ ಜನರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಸೂಚಿಸಿ ಆದೇಶಿಸಲಾಗಿದೆ.

ಶುಕ್ರವಾರದ ಕೇರಳದ ಕೊರೊನಾ ಪ್ರಕರಣಗಳ ವಿವರ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಕೇರಳದಲ್ಲಿ ಮಾತ್ರ ಕೊವಿಡ್19 ಸೋಂಕಿತರ ಸಂಕ್ಯೆ ಏರಿಕೆಯಾಗುತ್ತಿರುವುದು ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿದ್ದು, ದೇಶಮಟ್ಟದಲ್ಲಿ ಕೇರಳ ಕೊರೊನಾ ಹಾಟ್​ಸ್ಪಾಟ್ ಎನಿಸಿಕೊಂಡಿದೆ. ಇಂದು (ಸಪ್ಟೆಂಬರ್ 3) ಕೇರಳದಲ್ಲಿ 29,322 ಹೊಸ ಕೊರೊನಾ ಪ್ರಕರಣಗಳು ವರದಿ ಆಗಿದೆ. 1.63 ಲಕ್ಷ ಮಾದರಿ ಪರೀಕ್ಷೆಯಲ್ಲಿ 29,322 ಮಂದಿ ಪಾಸಿಟಿವ್ ಆಗಿದ್ದು, ಪಾಸಿಟಿವಿಟಿ ದರ 17.91 ರಷ್ಟಿದೆ.

ಕೊರೊನಾ ಸೋಂಕಿನಿಂದ ಕೇರಳ ರಾಜ್ಯದಲ್ಲಿ ಶುಕ್ರವಾರ 131 ಮಂದಿ ಬಲಿ ಆಗಿದ್ದಾರೆ. ಆ ಮೂಲಕ, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 21,280 ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ ಇದುವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 41,51,455 ಕ್ಕೆ ಏರಿಕೆ ಆಗಿದೆ. ಇದೇ ವೇಳೆ, 22,938 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಅದರಂತೆ ಕೊವಿಡ್​ನಿಂದ ಗುಣಮುಖ ಆದವರ ಒಟ್ಟು ಸಂಖ್ಯೆ 38,83,183 ಆಗಿದೆ. 2,46,437 ಮಂದಿಯಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

ಇದನ್ನೂ ಓದಿ: 1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ

Published On - 4:09 pm, Sat, 4 September 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?