ಕುಂದಾಪುರ: ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2023 | 1:22 PM

ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದ ಮಗನನ್ನು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ತಾಯಿಯ ಕಣ್ಣು ತಪ್ಪಿಸಿ ಓಡಿ ಹೋಗಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಂದಾಪುರ: ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us on

ಉಡುಪಿ: ಕನ್ಯಾನ ಗ್ರಾಮದ ದಿ‌.ಕುಪ್ಪಯ್ಯ ಶೆಟ್ಟಿ ಅವರ ಪುತ್ರ ರವಿರಾಜ್ ಶೆಟ್ಟಿ (33) ಇಂದು ಬೆಳಿಗ್ಗೆ ಕುಂದಾಪುರ ಸಮೀಪ ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದ ಮಗನನ್ನು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ತಾಯಿ ಕರೆದುಕೊಂಡು ಬಂದಿದ್ದರು. ಈ ವೇಳೆ ಆಸ್ಪತ್ರೆಯಿಂದ ತಪ್ಪಿಸಿಕೊಂಡು ರಾಜಾಡಿ ಬಳಿ ಬಂದು ಸೇತುವೆ ಮೇಲಿನಿಂದ ನದಿಗೆ ಹಾರಿ ಮೃತಪಟ್ಟಿದ್ದಾನೆ. ಸ್ಥಳೀಯ ಮೀನುಗಾರ ನೆರವಿನಿಂದ ರವಿರಾಜ್ ಮೃತ ದೇಹಕ್ಕೆ ಮೇಲಕ್ಕೇತ್ತಲಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗೋಮಾಂಸ ಮಾರಾಟಕ್ಕೆ‌ ಯತ್ನ, ಭಜರಂಗದಳ ಕಾರ್ಯಕರ್ತರಿಂದ ಹಲ್ಲೆ

ಚಿಕ್ಕಮಗಳೂರು: ಗೋಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಯನ್ನ ಕರೆಂಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಮೂಡಿಗೆರೆ ಸಮೀಪದ ಮುದ್ರೆ ಮನೆ ಎಸ್ಟೇಟ್ ಬಳಿ‌ ಘಟನೆ ನಡೆದಿದ್ದು, ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಯುವಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಯಿಂಟ್ ವೀಲ್ಹ್ ನಿಂದ ಬಿದ್ದು ಯುವತಿಗೆ ಗಂಭೀರ ಗಾಯ

ಶ್ರೀರಂಗಪಟ್ಟಣ: ನಗರದ ರಂಗನಾಥ ಮೈದಾನದಲ್ಲಿ ರಥ ಸಪ್ತಮಿ ಅಂಗವಾಗಿ ಜಾತ್ರೆ ನಡೆದಿದೆ. ಈ ಸಂದರ್ಭದಲ್ಲಿ ಜಾತ್ರೆಯಲ್ಲಿ ಹಾಕಲಾಗಿದ್ದ ಜಾಯಿಂಟ್ ವೀಲ್ಹ್ ಆಡುವಾಗ ಆಕಸ್ಮಿಕವಾಗಿ ಯುವತಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆಕೆಯನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ