AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಪರೇಡ್​ನಲ್ಲಿ ಭಾಗವಹಿಸಲು ಕುಂದಾಪುರದ ಚಮ್ಮಾರನಿಗೆ ಪ್ರಧಾನಿ ಮೋದಿ ಆಹ್ವಾನ

ನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಚಮ್ಮಾರ ಮಣಿಕಂಠ ಅವರಿಗೆ ನರೇಂದ್ರ ಮೋದಿಯವರೇ ಆಹ್ವಾನ ನೀಡಿರುವುದರಿಂದ ಮಣಿಕಂಠ ಅವರು ರಾತ್ರೋರಾತ್ರಿ ಕುಂದಾಪುರದಲ್ಲಿ ಸೆಲೆಬ್ರಿಟಿಯಾಗಿಬಿಟ್ಟಿದ್ದಾರೆ.

ಗಣರಾಜ್ಯೋತ್ಸವ ಪರೇಡ್​ನಲ್ಲಿ ಭಾಗವಹಿಸಲು ಕುಂದಾಪುರದ ಚಮ್ಮಾರನಿಗೆ ಪ್ರಧಾನಿ ಮೋದಿ ಆಹ್ವಾನ
ಕುಂದಾಪುರದ ಚಮ್ಮಾರ ಮಣಿಕಂಠ
ಸುಷ್ಮಾ ಚಕ್ರೆ
|

Updated on: Oct 21, 2023 | 11:35 AM

Share

ಕುಂದಾಪುರ: 2024ರ ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಭಾಗವಹಿಸಲು ಕುಂದಾಪುರದ ಚಮ್ಮಾರ ಮಣಿಕಂಠ ಎಂಬುವವರಿಗೆ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಆಹ್ವಾನ ನೀಡಿದ್ದಾರೆ. ನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಚಮ್ಮಾರ ಮಣಿಕಂಠ ಅವರಿಗೆ ಆಹ್ವಾನ ಬಂದಿದ್ದು, ನರೇಂದ್ರ ಮೋದಿಯವರೇ  ಕರೆದಿರುವುದರಿಂದ ಮಣಿಕಂಠ ಅವರು ರಾತ್ರೋರಾತ್ರಿ ಕುಂದಾಪುರದಲ್ಲಿ ಸೆಲೆಬ್ರಿಟಿಯಾಗಿಬಿಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಚಪ್ಪಲಿಗಳನ್ನು ಹೊಲಿಯುವ ಕೆಲಸ ಮಾಡುತ್ತಿರುವ ಮಣಿಕಂಠ ಅವರು ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆಯ ಫಲಾನುಭವಿಯಾಗಿದ್ದಾರೆ. ಹೀಗಾಗಿ, ಅವರಿಗೆ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದ್ದು, ಮಣಿಕಂಠ ಅವರು ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಮಾಡುವ ಸಂಭ್ರಮದಲ್ಲಿದ್ದಾರೆ.

ಇದನ್ನೂ ಓದಿ: Republic Day 2024: ಗಣರಾಜ್ಯೋತ್ಸವದಂದು ಕರ್ತವ್ಯ ಪಥದಲ್ಲಿ ಮಹಿಳಾ ಶಕ್ತಿ ಪ್ರದರ್ಶನ, ಪರೇಡ್​ನಿಂದ ಸ್ತಬ್ಧಚಿತ್ರದವರೆಗೂ ಎಲ್ಲೆಲ್ಲೂ ಮಹಿಳೆಯರು

“ವಿಮಾನದಲ್ಲಿ ಪ್ರಯಾಣಿಸುವ ಅವಕಾಶವನ್ನು ಪಡೆಯಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ವಿಮಾನದಲ್ಲಿ ಕೂರುತ್ತಿದ್ದೇನೆ. ಹಾಗೇ, ಮೊದಲ ಬಾರಿಗೆ ದೆಹಲಿಗೆ ತೆರಳುತ್ತಿದ್ದೇನೆ. ನನ್ನಂತಹ ಸಾಮಾನ್ಯ ಚಮ್ಮಾರನನ್ನು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದು ನನಗೆ ನಂಬಲಾಗದಷ್ಟು ಸಂತೋಷ ಮತ್ತು ಆಶ್ಚರ್ಯವನ್ನು ಉಂಟುಮಾಡಿದೆ” ಎಂದು ಮಣಿಕಂಠ ಸಂತಸ ವ್ಯಕ್ತಪಡಿಸಿದ್ದಾರೆ.

ಮಣಿಕಂಠ ಅವರು ಇದುವರೆಗೂ ಟಿವಿಯಲ್ಲಿ ಮಾತ್ರ ಗಣರಾಜ್ಯೋತ್ಸವ ಪರೇಡ್ ಅನ್ನು ವೀಕ್ಷಿಸಿದ್ದರು. ಈ ಬಾರಿ ನೇರವಾಗಿ ಈ ದೃಶ್ಯವನ್ನು ವೀಕ್ಷಿಸುವ ಅವಕಾಶ ಸಿಕ್ಕಿದೆ. ಕುಂದಾಪುರ ಪಟ್ಟಣದ ಪುರಸಭೆಯ ಅಧಿಕಾರಿಗಳು ಮಣಿಕಂಠ ಅವರಿಗೆ ಯಾವುದೇ ತೊಂದರೆಯಿಲ್ಲದ ಪ್ರಯಾಣದ ಅನುಭವವನ್ನು ನೀಡಲು ಮುಂದಾಗಿದ್ದು, ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ಕುಂದಾಪುರ ತಾಯಿ-ಮಗಳ ಸಾಹಸ: ಭಾರತ-ಚೀನಾ ಗಡಿಯಲ್ಲಿ ಜಗತ್ತಿನ ತುತ್ತತುದಿಗೆ ಬೈಕ್ ಪ್ರಯಾಣ

ಮಣಿಕಂಠ ಅವರು ಗಣರಾಜ್ಯೋತ್ಸವದ ಪರೇಡ್ ಅನ್ನು ಹತ್ತಿರದಿಂದ ವೀಕ್ಷಿಸುವ ಅವಕಾಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಮಣಿಕಂಠ ತಮ್ಮ ಕುಟುಂಬ ಹಿಂದಿನಿಂದಲೂ ನಡೆಸಿಕೊಂಡು ಬಂದ ಚಮ್ಮಾರ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅವರ ತಂದೆ ಮತ್ತು ಅಜ್ಜ ಇಬ್ಬರೂ ಚಮ್ಮಾರರಾಗಿದ್ದರು. ಅವರು ಹೆಮ್ಮೆಯಿಂದ ಈ ವೃತ್ತಿಯನ್ನು ಪರಂಪರೆಯಂತೆ ನಡೆಸಿಕೊಂಡು ಬಂದಿದ್ದರು. ಅಪ್ಪ ಶುರು ಮಾಡಿದ ಚಪ್ಪಲಿ ಹೊಲಿಯುವ ಅಂಗಡಿಯನ್ನು ಈಗ ಮಣಿಕಂಠ ನಡೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದಲೇ ಮಣಿಕಂಠ ತಮ್ಮ ಇಬ್ಬರು ಮಕ್ಕಳಿಗೆ ಕಾಲೇಜು ಶಿಕ್ಷಣದವರೆಗೂ ಓದಿಸಿದ್ದಾರೆ ಹಾಗೂ ತಮ್ಮ ಕುಟುಂಬವನ್ನು ಸಾಕಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ನಗರವಾದ ಭದ್ರಾವತಿಯವರಾದ ಮಣಿಕಂಠ ಈಗ ಕುಂದಾಪುರದಲ್ಲಿ ನೆಲೆಸಿದ್ದಾರೆ. ಮಣಿಕಂಠ ಅವರು ಕಳೆದ 25 ವರ್ಷಗಳಿಂದ ಚಪ್ಪಲಿ ಮತ್ತು ಛತ್ರಿ ರಿಪೇರಿ ಮಾಡುತ್ತಿದ್ದಾರೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!