AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

Udupi News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲದಲ್ಲಿ ಕೊಟ್ಟ ಸಾಲದ ಹಣ ವಾಪಸ್ ಕೇಳಲು ಹೋದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಅಮಾನವೀಯವಾಗಿ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿಹಾಕಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು
ಸನತ್, ನಂದೀಶ್ ಕುಮಾರ್, ರಾಮ ಕುಮಾರ್Image Credit source: Tv9 Kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 07, 2026 | 1:07 PM

Share

ಮುಖ್ಯಾಂಶಗಳು

  • ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ?
  • ಉಡುಪಿ ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಘಟನೆ
  • ದೂರು-ಪ್ರತಿದೂರು ದಾಖಲು, 3 ಆರೋಪಿಗಳ ಬಂಧನ

ಉಡುಪಿ, ಆಗಸ್ಟ್​​ 07: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಸನತ್ ಎನ್ನುವ ಯುವಕನ ಮೇಲೆ ಪೈಶಾಚಿಕ ಕೃತ್ಯ ನಡೆಸಲಾಗಿದ್ದು, ಯುವತಿ ಮತ್ತು ಈತ ಒಂದೇ ಸಂಸ್ಥೆಯಲ್ಲಿ ಕೆಲಸಕ್ಕಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. ಇದೇ ಸಮಯದಲ್ಲಿ ಸನತ್ ನಿಂದ 50 ಸಾವಿರ ಹಣವನ್ನು ಯವತಿ ಸಾಲ ತೆಗೆದುಕೊಂಡಿದ್ದಳು ಎಂಬುದು ತಿಳಿದುಬಂದಿದೆ.

ದೂರು-ಪ್ರತಿದೂರುಗಳು ದಾಖಲು

ಸನತ್​​​ನಿಂದ ಸಾಲ ಪಡೆದ ಬಳಿಕ ಯುವತಿ ಕೆಲಸ ತೊರೆದಿದ್ದಲ್ಲದೆ, ಈತನ ಕರೆ ಸ್ವೀಕರಸದೆ ಸತಾಯಿಸುತ್ತಿದ್ದಳು. ಸಾಲ ನೀಡಿದ್ದ 50 ಸಾವಿರ ಹಣ ವಾಪಸ್ಸು ಕೇಳಿದಾಗ ಮನೆಗೆ ಬರುವಂತೆ ಆಕೆ ತಿಳಿಸಿದ್ದಳು. ಯುವತಿ ಕರೆದಳೆಂದು ಮನೆ ಬಳಿ ಹೋಗಿದ್ದ ಸನತ್ ಮೇಲೆ ಹಲ್ಲೆ ನಡೆಸಲಾಗಿದ್ದು, ಸಾಲದ್ದಕ್ಕೆ ಆತನ ಮೇಲೆಯೇ ಅಟ್ರಾಸಿಟಿ ಕಾಯ್ದೆ, ಲೈಂಗಿಕ‌ ದೌರ್ಜನ್ಯದಡಿ ದೂರು ದಾಖಲಿದ್ದಳು ಎಂದು ದೂರಲಾಗಿದೆ. ಘಟನೆ ಬಗ್ಗೆ ಯುವಕ ಸನತ್​​ ಕೂಡ ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ಕಳದ ರೇಂಜಾಳದಲ್ಲಿ ಭಾರೀ ಭೂಕುಸಿತದ ಆತಂಕ, ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

ಆರೋಪಿಗಳ ಬಂಧನ

ಘಟನೆ ಸಂಬಂಧ ದೂರು-ಪ್ರತಿದೂರುಗಳು ದಾಖಲಾಗಿದ್ದು, ಮನೆಗೆ ನುಗ್ಗಿ ದಲಿತ ಯುವತಿ ಮೇಲೆ ದೌರ್ಜನ್ಯ ಆರೋಪ ಸಂಬಂಧ ಸನತ್ ಮತ್ತು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣದಲ್ಲಿ ರಾಮ ಕುಮಾರ್, ನಂದೀಶ್ ಕುಮಾರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?