ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ

ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ
ಶಿರೂರು ಒತ್ತಿನೆಣೆಯಲ್ಲಿ ಹಾದು ಹೋಗುವ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on:Jul 15, 2023 | 1:31 PM

ಉಡುಪಿ: ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 66 (Byndoor National Highway 66) ರಲ್ಲಿ ಗುಡ್ಡ ಕುಸಿತವಾಗುವ (Landslides) ಸಾಧ್ಯತೆ ಇದೆ. ಬೈಂದೂರು ತಾಲೂಕಿನ ಶಿರೂರು ಒತ್ತಿನೆಣೆಯಲ್ಲಿ ಪ್ರತಿ ಬಾರಿ ಮಳೆಗಾಳದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಈ ಬಾರಿಯೂ ಗುಡ್ಡ ಕುಸಿತವಾಗುವ ಸಂಭವಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.

ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಾಷ್ಟ್ರೀಯ ಹೆದ್ದಾರಿಯು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿದೆ. ಕುಂದಾಪುರದಿಂದ ಕಾರವಾರದ ಮಾಜಾಳಿವರೆಗೂ ಐಆರ್​ಬಿ ಕಂಪೆನಿಯಿಂದ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಪರ್ಯಾಯ ಸ್ಥಳವಿದ್ದರೂ ಒತ್ತಿನೆಣೆಯಲ್ಲಿ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸ್ಥಳೀಯರ ಸಲಹೆ ಪಡೆಯದೆ ಗುಡ್ಡಕ್ಕೆ ಸಮೀಪವಾಗಿ ಹೆದ್ದಾರಿ ನಿರ್ಮಿಸಲಾಗಿದೆ.

ಇದನ್ನೂ ಓದಿ: Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಒತ್ತಿನೆಣೆಯಲ್ಲಿ ಗುಡ್ಡ ಜರಿಯುವುದು ಸಾಮಾನ್ಯವಾಗಿದೆ. ಹೆದ್ದಾರಿ ಕಾಮಗಾರಿ ವೇಳೆಯೂ ಗುಡ್ಡ ಜರಿದಿತ್ತು. ಈ ಬಾರಿ ಸುರಿದ ಮಳೆಗೂ ಗುಡ್ಡ ಜರಿದು ಆತಂಕ ಸೃಷ್ಟಿಯಾಗಿತ್ತು. ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುತ್ತಿರುವುದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.

ಕಾಮಗಾರಿ ವೀಕ್ಷಿಸಲಿರುವ ಉತ್ತರ ಕನ್ನಡ ಡಿಸಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ಆರೋಪ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೂಚನೆ ಮೇರೆಗೆ ಉತ್ತರ ಕನ್ನಡದ ಜಿಲ್ಲಾಧಿಕಾರಿ ನೃತೃತ್ವದ ತಂಡ ಬಸ್‌ನಲ್ಲಿ ತೆರಳಿ ಕಾರವಾರದ ಮಾಜಾಳಿಯಿಂದ ಭಟ್ಕಳ ಗಡಿಯವರೆಗೆ ಹೆದ್ದಾರಿ ಕಾಮಗಾರಿ ವೀಕ್ಷಿಸಲಿದೆ. ಐಆರ್‌ಬಿ, NHAI ಅಧಿಕಾರಿಗಳು, ತಹಶೀಲ್ದಾರ್, ಪೌರಾಯುಕ್ತ, ಡಿವೈಎಸ್ಪಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದು, ಹೆದ್ದಾರಿ ಉದ್ದಕ್ಕೂ ರಸ್ತೆ, ಟನಲ್, ಸೂಚನಾಫಲಕ, ಡೈವರ್ಶನ್,‌ ಬೀದಿದೀಪ, ಸರ್ವೀಸ್ ರೋಡ್ ಕಾಮಗಾರಿ ಪರಿಶೀಲಿಸಲಿದೆ. ಗುಡ್ಡ ಕುಸಿತದ ಪ್ರದೇಶಗಳನ್ನೂ ವೀಕ್ಷಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sat, 15 July 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ