ಉಡುಪಿಯ ಈ ಪಟ್ಟಣದಲ್ಲಿದೆ ಮಹಿಷ ದೇವಸ್ಥಾನ: ಇಲ್ಲಿ ನಿತ್ಯವೂ ನೆರವೇರುತ್ತೆ ಮಹಿಷಾಸುರನಿಗೆ ಪೂಜೆ!

ದಸರಾ ಬಂತು ಎಂದರೆ ಸಾಕು, ರಾಜ್ಯದಲ್ಲಿ ‘ಮಹಿಷ’ ಎನ್ನುವ ಹೆಸರು ವಿವಾದಕ್ಕೆ ಕಾರಣವಾಗುತ್ತದೆ. ದೇವಿ ಚಾಮುಂಡೇಶ್ವರಿಗೆ ಹೇಗೆ ದಸರಾ ಸಂದರ್ಭ ಪೂಜೆ ನಡೆಯುತ್ತದೆಯೋ, ಅದೇ ರೀತಿಯಾಗಿ ಮಹಿಷನನ್ನು ಪೂಜಿಸುವ ಮಹಿಷಾ ದಸರಾ ಆಚರಣೆ ನಡೆಯುತ್ತದೆ. ವಿಶೇಷ ಏನೆಂದರೆ ಉಡುಪಿಯ ಐತಿಹಾಸಿಕ ನಗರಿ ಒಂದರಲ್ಲಿ ಇಂದಿಗೂ ಮಹಿಷಾಸುರನ ದೇವಸ್ಥಾನ ಒಂದಿದೆ. ಇಲ್ಲಿ ನಿತ್ಯವೂ ಮಹಿಷನಿಗೆ ಪೂಜೆಯಾಗುತ್ತದೆ!

ಉಡುಪಿಯ ಈ ಪಟ್ಟಣದಲ್ಲಿದೆ ಮಹಿಷ ದೇವಸ್ಥಾನ: ಇಲ್ಲಿ ನಿತ್ಯವೂ ನೆರವೇರುತ್ತೆ ಮಹಿಷಾಸುರನಿಗೆ ಪೂಜೆ!
ಬಾರ್ಕೂರಿನ ಮಹಿಷ ದೇವಸ್ಥಾನ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma

Updated on:Oct 03, 2024 | 8:30 AM

ಉಡುಪಿ, ಅಕ್ಟೋಬರ್ 3: ಕರ್ನಾಟಕದ ಕರಾವಳಿ ಜಿಲ್ಲೆಗಳು ರಾಜ್ಯದಲ್ಲಿಯೇ ವಿಶಿಷ್ಟ ಆಚರಣೆ, ಪದ್ಧತಿ, ಸಂಸ್ಕೃತಿಯ ಮೂಲಕ ಗುರುತಿಸಿಕೊಂಡಂಥ ಪ್ರದೇಶಗಳು. ದೈವ ದೇವರುಗಳ ಆಗರವಾಗಿರುವ ಕರಾವಳಿಯಲ್ಲಿ ಇಂದಿಗೂ ನಾಗನನ್ನು ಜೀವಂತ ದೈವ ಎಂದೇ ಪೂರಿಸುವ ಪರಿಪಾಠವಿದೆ. ಪ್ರಕೃತಿಯನ್ನು ಪೂಜಿಸುವ ಪರಿಪಾಠವಿರುವ ಕರಾವಳಿಯಲ್ಲಿ ಮಹಿಷನಿಗೂ ಪೂಜೆ ನಡೆಯುತ್ತಿದೆ ಎಂದರೆ ನೀವು ನಂಬಲೇಬೇಕು! ಕಳೆದು ಕಳೆದ ಕೆಲವು ವರ್ಷಗಳಿಂದ ಮಹಿಷ ದಸರಾ ಎನ್ನುವ ವಿಚಾರ ರಾಜ್ಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಒಂದು ಪಂಥ ಮಹಿಷ ಅಸುರ, ಅವನನ್ನು ಪೂಜಿಸಬಾರದು ಎಂದರೆ, ಇನ್ನೊಂದು ಪಂಥ ಮಹಿಷ ಎಂದರೆ ನಮ್ಮ ರಾಜ, ಅವನನ್ನ ನಾವು ಪೂಜಿಸುತ್ತೇವೆ ಎಂದು ಪ್ರತಿಪಾದಿಸುತ್ತಿದೆ. ಈ ಮಧ್ಯೆ, ಉಡುಪಿ ಜಿಲ್ಲೆಯ ಐತಿಹಾಸಿಕ ಪಟ್ಟಣ ಬಾರ್ಕೂರಿನಲ್ಲಿ ಮಹಿಷಾಸುರನ ಹೆಸರಿನ ದೇವಾಲಯವಿದೆ. ಅದಕ್ಕೆ ನಿತ್ಯವೂ ಪೂಜೆ ನಡೆಯುತ್ತಿದೆ.

ಶಿವ ಗಣನಂತೆ ಈ ಮಹಿಷ!

Mahisha temple in Udupi's Barkur amid the Mahisha Dasara controversy: Worship to Mahishasura takes place daily here

ಉಡುಪಿ ಜಿಲ್ಲೆಯ ದೇವಾಲಯಗಳ ನಗರಿ ಎಂದೇ, ಹೆಸರುವಾಸಿಯಾಗಿರುವ ಬಾರ್ಕೂರಿನಲ್ಲಿ ಇಂದಿಗೂ ಕೂಡ ಮಹಿಷನಿಗೆ ನಿತ್ಯ ಪೂಜೆ ನಡೆಯುತ್ತದೆ. ಇಲ್ಲಿನ ಅರ್ಚಕ ಭಾಸ್ಕರ ಶಾಸ್ತ್ರಿ ತಿಳಿಸುವಂತೆ ಇಲ್ಲಿ ಮಹಿಷ ಎನ್ನುವ ಹೆಸರಿನ ಶಿವಗಣಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಶಿವನ ಪ್ರಥಮ ಗಣ ಎಂದು ಇಲ್ಲಿ ನಿತ್ಯವೂ ಮಹಿಷನಿಗೆ ಪೂಜೆಯ ಜೊತೆ ವರ್ಷಕ್ಕೆ ಒಮ್ಮೆ ತೊಟ್ಟಿಲು ಸೇವೆ ನಡೆಯುತ್ತದೆ.

ಮಹಿಷ ಮಂಡಲವಾಗಿದ್ದ ಕರಾವಳಿ!

ಇನ್ನು ಕರಾವಳಿ ಕರ್ನಾಟಕ ಈ ಹಿಂದೆ ಮಹಿಷ ಮಂಡಲ ಎಂದು ಗುರುತಿಸಿಕೊಳ್ಳುತ್ತಿದ್ದು, ಇಲ್ಲಿಗೆ ಮಹೀಷ ಎನ್ನುವ ರಾಜನಿದ್ದ ಎನ್ನುವ ಪ್ರತೀತಿಯೂ ಇದೆ. ಮಹಿ ಅಂದರೆ ಭೂಮಿ, ಈಶ ಎಂದರೆ ಒಡೆಯ ಅರ್ಥಾತ್ ಚಕ್ರವರ್ತಿ ಎನ್ನುವ ಕಾರಣಕ್ಕೆ ಇಲ್ಲಿ ಮಹಿಷನಿಗೆ ನಿತ್ಯ ಪೂಜೆ ನಡೆಯುತ್ತದೆ ಎನ್ನುವುದು ಇತಿಹಾಸ ತಜ್ಞರ ಮಾತು.

ಇತಿಹಾಸ ತಜ್ಞರು ಹೇಳುವುದೇನು?

Mahisha temple in Udupi's Barkur amid the Mahisha Dasara controversy: Worship to Mahishasura takes place daily here

ಕ್ರಿಸ್ತ ಶಕ ನಾಲ್ಕನೇ ಶತಮಾನಕ್ಕೆ ಸೇರಿದ ಇಲ್ಲಿನ ಮಹಿಷನ ವಿಗ್ರಹದಲ್ಲಿ ಕೋಣದ ತಲೆ ಮಾನವನ ದೇಹದಲ್ಲಿ ಇತ್ತು ಎನ್ನಲಾಗಿದೆ. ಆನಂತರ 1971ರಲ್ಲಿ ದೇವಳದ ಜೀರ್ಣೋದ್ಧಾರ ಸಂದರ್ಭ ಬೇರೆಯ ವಿಗ್ರಹ ತಂದು ಪ್ರತಿಷ್ಠಾಪನೆ ಮಾಡಿ ಕೋಣದ ತಲೆಯ ಮಾನವ ದೇಹದ ಮತ್ತೊಂದು ವಿಗ್ರಹವನ್ನು ಕೂಡ ಪ್ರತಿಷ್ಠಾಪಿಸಿ ಇದರ ಜೊತೆಗೆ ಉಳಿದ ಉಳಿದ ದೈವಗಳನ್ನು ತಂದು ಪ್ರತಿಷ್ಠಾಪಿಸಿ ಇಲ್ಲಿ ನಿತ್ಯ ಪೂಜೆ ಮಾಡಲಾಗುತ್ತಿದೆ ಎಂದು ಇತಿಹಾಸ ತಜ್ಞ ಮುರುಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ಜೀವಂತ ವ್ಯಕ್ತಿ, ಚಾಮುಂಡಿ ಕೇವಲ ಕಾಲ್ಪನಿಕ ಚಿತ್ರವಷ್ಟೇ: ಪ್ರೊ.ನಂಜರಾಜೇ ಅರಸ್

ಒಟ್ಟಾರೆಯಾಗಿ ಕರಾವಳಿ ತನ್ನ ವಿಶಿಷ್ಟ ಸಂಪ್ರದಾಯಗಳ ಮೂಲಕ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಎನ್ನುವುದಕ್ಕೆ ಈ ದೇವಾಲಯ ಒಂದು ಸ್ಪಷ್ಟ ಉದಾಹರಣೆ. ನಂಬಿಕೆ ಮತ್ತು ಭಕ್ತಿಗಿಂಥ ದೊಡ್ಡದು ಯಾವುದೂ ಇಲ್ಲ ಎನ್ನುವುದಕ್ಕೆ ಇಲ್ಲಿನ ಈ ದೇವಸ್ಥಾನವೇ ಸಾಕ್ಷಿ ಎಂದರೆ ತಪ್ಪಾಗಲಾರದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:27 am, Thu, 3 October 24