ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು

| Updated By: ಸಾಧು ಶ್ರೀನಾಥ್​

Updated on: Jun 24, 2020 | 5:03 PM

ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಉದ್ಯಮಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿರಂಜನ ಭಟ್ಟಗೆ ಜಿಲ್ಲಾ ಸೆಷನ್ ನ್ಯಾಯಾಲಯ 14 ದಿನಗಳಮಟ್ಟಿಗೆ ಮಧ್ಯಂತರ ಜಾಮೀನು ನೀಡಿದೆ. 2016ರಲ್ಲಿ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಜೊತೆ ಸೇರಿ‌ ಉದ್ಯಮಿಯನ್ನ ಕೊಲೆ ಮಾಡಿದ್ದ ಆರೋಪ ನಿರಂಜನ ಮೇಲಿದೆ. ನಿರಂಜನನ ತಂದೆ ಶ್ರೀನಿವಾಸ ಭಟ್ಟ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿರೋ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಐದು […]

ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು
Follow us on

ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಉದ್ಯಮಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿರಂಜನ ಭಟ್ಟಗೆ ಜಿಲ್ಲಾ ಸೆಷನ್ ನ್ಯಾಯಾಲಯ 14 ದಿನಗಳಮಟ್ಟಿಗೆ ಮಧ್ಯಂತರ ಜಾಮೀನು ನೀಡಿದೆ.

2016ರಲ್ಲಿ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಜೊತೆ ಸೇರಿ‌ ಉದ್ಯಮಿಯನ್ನ ಕೊಲೆ ಮಾಡಿದ್ದ ಆರೋಪ ನಿರಂಜನ ಮೇಲಿದೆ. ನಿರಂಜನನ ತಂದೆ ಶ್ರೀನಿವಾಸ ಭಟ್ಟ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿರೋ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಐದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಲು ಆದೇಶ ಹೊರಡಿಸಿದ್ದಾರೆ.