Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ; ಆರೋಪಿ ಪತ್ತೆ ಹಚ್ಚಿದ್ದೇ ರೋಚಕ

ಕೃಷ್ಣ ಜನ್ಮಾಷ್ಟಮಿ ಎಂದು ತನ್ನ ಊರಿಗೆ ರೈಲಿನಲ್ಲಿ ಹೊರಟಿದ್ದ ಉಡುಪಿ ತಾಲೂಕಿನ ಮಣಿಪಾಲದ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿ ನಡೆದಿದೆ. ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಣಿಪಾಲ್ ಪೊಲೀಸರು ಸಾವಿರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಹಚ್ಚಿ ಅವನ ಮನೆಗೆ ತೆರಳಿ ಬಂಧಿಸಿದ್ದಾರೆ.

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ; ಆರೋಪಿ ಪತ್ತೆ ಹಚ್ಚಿದ್ದೇ ರೋಚಕ
ಮೊಹಮ್ಮದ್ ಶುರೈಮ್
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು

Updated on: Aug 29, 2024 | 12:46 PM

ಉಡುಪಿ, ಆಗಸ್ಟ್​.29: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು (Manipal Police) ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ. ಭಾನುವಾರ ಬೆಳಗ್ಗೆ ರೈಲಿನಲ್ಲಿ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.

ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಶನಿವಾರ ರಾತ್ರಿ ಉಡುಪಿಗೆ ಹೊರಟಿದ್ದರು. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಯುವಕನೋರ್ವ ಅಸಭ್ಯ ವರ್ತನೆ ತೋರಿದ್ದಾನೆ. ಇನ್ನೇನು ಉಡುಪಿ ಬರಲು ಅರ್ಧ ಗಂಟೆ ಇರುವಾಗ ಮಾನಭಂಗಕ್ಕೆ ಯತ್ನಿಸಿದ್ದಾನೆ. ಕೂಡಲೇ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಆರೋಪಿ ಶುರೈಮ್ ಕ್ಷಮೆಯಾಚಿಸಿದ್ದಾನೆ. ಘಟನೆ ಕುರಿತು ಉಡುಪಿ ರೈಲ್ವೆ ಪೊಲೀಸ್​ಗೆ ಯುವತಿ ಮಾಹಿತಿ ನೀಡಿದ್ದಾರೆ. ರೈಲ್ವೆ ಮದತ್ ಆ್ಯಪ್ ಮೂಲಕವೂ ದೂರು ನೀಡಿದ್ದಾರೆ. ಯುವತಿ ನೀಡಿದ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: 60 ವರ್ಷಗಳಿಂದ ವಾಸವಾಗಿದ್ದ ನೆಲ ನನ್ನದು ಎಂದು ಖಾಸಗಿ ವ್ಯಕ್ತಿ ವಾದ, ಗ್ರಾಮದ 30 ಕುಟುಂಬಗಳಿಗೆ ಎತ್ತಂಗಡಿ ಭೀತಿ

ನೂರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಮಾಡಿದ್ದು ಹೇಗೆ?

ಇನ್ನು ಯುವತಿ ನೀಡಿದ್ದ ದೂರು, ಹಾಗೂ ಕೆಲ ಸುಳಿವುಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದೇ ರೋಚಕ. ಮೊದಲಿಗೆ ಪೊಲೀಸರು ರೈಲಿನಲ್ಲಿ ಪ್ರಯಾಣಿಸಿದ್ದ ಎಲ್ಲಾ ಪ್ರಯಾಣಿಕರ ವಿವರ ಪಡೆದು ಬಳಿಕ ಅದರಿಂದ ಶಾರ್ಟ್ ಲಿಸ್ಟ್ ಮಾಡಿದರು. ಘಟನೆ ನಡೆದದ್ದು ವೀಕೆಂಡ್ ಆದ ಹಿನ್ನೆಲೆ ಬೆಂಗಳೂರು-ಮುರ್ಡೇಶ್ವರ ನಡುವೆ ಸಂಚರಿಸುವ ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಸಿದ್ದರು. 3 ಹಂತಗಳಲ್ಲಿ ಶಾರ್ಟ್ ಲಿಸ್ಟ್ ರೆಡಿ ಮಾಡಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ.

ಬಳಿಕ ಆರೋಪಿ ಭಟ್ಕಳದಲ್ಲಿ ಇಳಿದು ಹೋಗಿದ್ದನ್ನ ಪತ್ತೆ ಹಚ್ಚಿದ್ದ ಪೊಲೀಸರು ಸಿಸಿಟಿವಿ ಫೂಟೇಜ್, ಪ್ರಯಾಣಿಕರ ವಿವರ ಆಧರಿಸಿ ಕಾರ್ಯಾಚರಣೆ ನಡೆಸಿ ಭಟ್ಕಳದ ನಿವಾಸದಿಂದಲೇ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ