ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ್ ಪೊಲೀಸರ ದಾಳಿ: ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್​ ಸ್ಟೇಸಿ ಬಾರ್​ ಮೇಲೆ ದಾಳಿ ನಡೆಸಿದೆ. ಈ ವೇಳೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಬಾರ್​ನಲ್ಲಿ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ  ಮಣಿಪಾಲ್ ಪೊಲೀಸರ ದಾಳಿ: ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ್ ಪೊಲೀಸರ ದಾಳಿ
Follow us
| Updated By: ಆಯೇಷಾ ಬಾನು

Updated on: Oct 01, 2023 | 11:15 AM

ಉಡುಪಿ, ಅ.01: ಇನ್ಸ್ಟಾಗ್ರಾಮ್ ಪೋಸ್ಟ್ (Instagram)  ನೋಡಿ ಬಾರ್​ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು (Manipal Police) ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ ಸ್ಟೇಸಿ ಬಾರ್​ನಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು (Manipal Students) ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ವಿಷಯ ತಿಳಿಯುತ್ತಿದ್ದಂತೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಾರ್​ ಮೇಲೆ ದಾಳಿ ನಡೆಸಿದ್ದಾರೆ.

ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್​ ಸ್ಟೇಸಿ ಬಾರ್​ ಮೇಲೆ ದಾಳಿ ನಡೆಸಿದೆ. ಈ ವೇಳೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಬಾರ್​ನಲ್ಲಿ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿ ವೀಕೆಂಡ್​ನಲ್ಲೂ ಮಣಿಪಾಲ ಪೊಲೀಸರು ಮಣಿಪಾಲದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸೇಂದಿ ವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ದೇವನಹಳ್ಳಿ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಪೆ ಆಟೋದಲ್ಲಿ ಆಂಧ್ರದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸೇಂದಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೆರೆಗೆ ಅಬಕಾರಿ ಇನ್ಸ್ ಪೆಕ್ಟರ್ ಸುನೀಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು ಸುಮಾರು 347 ಲೀಟರ್ ಅಕ್ರಮ ಸೇಂದಿಯನ್ನ ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Viral: ಗ್ರೀಸ್; 100 ಕೇಜಿ ಗಾಂಜಾ ತಿಂದ ಕುರಿಹಿಂಡು; ನಗಬೇಕೋ ಅಳಬೇಕೋ ಎಂದ ಕುರುಬ

ಖಚಿತ ಮಾಹಿತಿ ಮೇರೆಗೆ ದಾಳಿ: 2 ಕೆ.ಜಿ ಗಾಂಜಾ ವಶಕ್ಕೆ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ಹಾಗೂ ಆರೋಪಿಯನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ನಡೆದಿದೆ. ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ(24) ಬಂಧಿತ ಆರೋಪಿ. ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದಾಗ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಿಪಿಐ ಬಿ.ಎಸ್‌. ಲೋಕಾಪುರ ನಿರ್ದೇಶನದಂತೆ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್