AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಅರೆಸ್ಟ್​

ಹಿಂದೂ ಯುವತಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಲ್ಲದೆ, ಹಿಂದೂ ಧರ್ಮ ಮತ್ತು ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್​​ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಅರೆಸ್ಟ್​
ಮಹಮ್ಮದ್ ಡ್ಯಾನಿಷ್ ಖಾನ್
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on:Sep 03, 2024 | 1:44 PM

Share

ಉಡುಪಿ, ಸೆಪ್ಟೆಂಬರ್​ 03: ಹಿಂದೂ (Hindu) ಧರ್ಮ, ರಾಮ ಮಂದಿರದ (Ram Mandir) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ (Conversion) ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ (Medical Student) ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ. ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ಮಣಿಪಾಲ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದನು. ಈ ವೇಳೆ ತನ್ನ ಜೊತೆ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಜೊತೆ ಸ್ನೇಹ ಬೆಳಸಿದ್ದಾನೆ. ಇಬ್ಬರೂ ಹೊರ ರಾಜ್ಯದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಇಲ್ಲಿಗೆ ಬಂದಿದ್ದಾರೆ.

ಇಬ್ಬರ ನಡುವೆ ಸ್ನೇಹ ಬೆಳೆದ ನಂತರ, ಪರಸ್ಪರ ಫೋನ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಮುಂದೆ, ಗೆಳೆತನ ಪ್ರೀತಿಗೆ ತಿರುಗಿದೆ. ಇಬ್ಬರು ಪರಸ್ಪರ ಗಾಢವಾಗಿ ಪ್ರೀತಿಸಲು ಆರಂಭಿಸಿದ್ದಾರೆ. ನಂತರ, ಇದೇ ವರ್ಷ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆ ವೇಳೆ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಪ್ರೇಯಸಿಯ ಎದುರು ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಅಲ್ತಾಫ್​

ಬಳಿಕ, ಮಾರ್ಚ್​​ 11 ರಂದು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ತನ್ನ ಪ್ರೇಯಸಿಯ ರೂಮ್​ಗೆ ಹೋಗಿದ್ದಾನೆ. ಈ ವೇಳೆ ಪ್ರೇಯಸಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾನೆ. ಆಗ, ಪ್ರೇಯಸಿ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಆಕೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ. ಅಲ್ಲದೇ, ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದಾನೆ. ನಿರಂತರವಾಗಿ, ಪೋನ್‌ನಲ್ಲಿ ಕಿರುಕುಳ ಕೊಡಲು ಆರಂಭಿಸಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ದಾಖಲಿಸಿದ್ದಾಳೆ.

ಈತನ ಕಿರುಕುಳದಿಂದ ರೋಸಿ ಹೋದ ವಿದ್ಯಾರ್ಥಿನಿ ಆಗಸ್ಟ್​ 31 ರಂದು ಉಡುಪಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕೂಡಲೆ ಪೊಲೀಸರು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್​​ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್​ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:42 pm, Tue, 3 September 24