ಮಾನಸಿಕ ಖಿನ್ನತೆ: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಹೈ‌ಪಾಯಿಂಟ್ ಹೈಟ್ಸ್​​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಗಾಯಗೊಂಡಿದ್ದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. 

ಮಾನಸಿಕ ಖಿನ್ನತೆ: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮೃತ ಬಾಲಕಿ ಪ್ರಜ್ಞಾ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2023 | 10:45 PM

ಉಡುಪಿ, ನವೆಂಬರ್​​​​ 06: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಹೈ‌ಪಾಯಿಂಟ್ ಹೈಟ್ಸ್​​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ(13) ಮೃತ ಬಾಲಕಿ. ಮುಂಜಾನೆ 6.30ರ ಸುಮಾರಿಗೆ ಅಪಾರ್ಟ್​ಮೆಂಟ್​ನಿಂದ ಜಿಗಿದಿದ್ದು, ಬಳಿಕ ಗಾಯಗೊಂಡಿದ್ದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.

ಹಾಡಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ದರೋಡೆ

ಮಂಡ್ಯ: ಹಾಡುಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ದರೋಡೆ ಮಾಡಿರುವಂತಹ ಘಟನೆ ಮಂಡ್ಯದ ನಗರಸಭೆ ಆವರಣದಲ್ಲಿ ನಡೆದಿದೆ. ಚಿನಕುರಳಿ ಗ್ರಾಮದ ಪರಮೇಶ್ ಹಣ ಕಳೆದುಕೊಂಡ ವ್ಯಕ್ತಿ. ನಗರಸಭೆ ಆವರಣದಲ್ಲಿ ಕಾರು ನಿಲ್ಲಿಸಿ SBI ಬ್ಯಾಂಕ್​ಗೆ ಕೆಲಸದ ನಿಮಿತ್ತ ಹೋಗಿದ್ದರು. ಕಾರಿನಲ್ಲಿ ಹಣವಿಟ್ಟಿದ್ದನ್ನ ಗಮನಿಸಿ ಕಳ್ಳತನ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಲಕ್ಷಾಂತರ ರೂ. ಹಣ ಕಳೆದುಕೊಂಡ ಪರಮೇಶ್ ಕಣ್ಣೀರು ಹಾಕಿದ್ದಾರೆ. ಜಮೀನು ರಿಜಿಸ್ಟರ್ ಮಾಡಿಸಿ ಹಣ ಪಡೆದು ನಗರಸಭೆ ಬಳಿ ಬಂದಿದ್ದರು. ಬೇರೆಯವರಿಗೆ ನೀಡಬೇಕಿದ್ದ ಹಣವನ್ನು ಕಳೆದುಕೊಂಡು ಪರಮೇಶ್ ಗೋಳಾಡಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ಬಲಿ ಆಗಿರುವಂತಹ ಘಟನೆ ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ಸರಗೂರಿನ ಕಾಡು ಬೇಗೂರು ಕಾಲೋನಿಯಲ್ಲಿ ನಡೆದಿದೆ. ಜಮೀನಿನಲ್ಲಿ ಶುಂಠಿ ಕೆಲಸ ಮಾಡುತ್ತಿದ್ದಾಗ ಹುಲಿ ದಾಳಿ ಮಾಡಿದ್ದು, ರೈತ ಬಾಲಾಜಿ ನಾಯಕ್‌ ಮೃತಪಟ್ಟಿದ್ದಾರೆ. ರೈತ ಬಾಲಾಜಿ ದೇಹವನ್ನ ಹುಲಿ ಅರ್ಧ ತಿಂದು ಹೋಗಿದೆ.

ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆ

ಬಾಗಲಕೋಟೆ: ಕೆರೆದಂಡೆಯಲ್ಲಿನ ಮೋಟರ್ ಶುರು ಮಾಡಲು ಹೋಗಿ ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕೆರೆಯಲ್ಲಿ ರೈತ ನಾಪತ್ತೆಯಾಗಿದ್ದ. ನಾಗಪ್ಪ ರಾಣಗಟ್ಟಿ(೨೭)ಮೃತ ಯುವರೈತ. ಜಮಖಂಡಿ ಅಗ್ನಿಶಾಮಕ ದಳ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಕೆರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಕಟರ್​ನಿಂದ ಎಟಿಎಂ ಮಷಿನ್ ಕತ್ತರಿಸಿ‌ ಹಣ ಕಳ್ಳತನ

ವಿಜಯಪುರ: ಗ್ಯಾಸ್ ಕಟರ್​ನಿಂದ ಎಟಿಎಂ ಮಷಿನ್ ಕತ್ತರಿಸಿ‌ ಹಣ ಕಳ್ಳತನ ಮಾಡಿರುವಂತಹ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಇಂಡಿಯಾ ಒನ್ ಎಟಿಎಂನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ರಾಯಗೊಂಡ‌ ಜನಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.

ಎಟಿಎಂನ ಸಿಸಿ‌ ಕ್ಯಾಮೆರಾಗೆ ಬಣ್ಣ ಬಳೆದಿದ್ದಾರೆ. ಪ್ರಾಥಮಿಕ‌ ಮಾಹಿತಿ ಪ್ರಕಾರ 3.60 ಲಕ್ಷ ರೂ. ಕಳ್ಳತನ ಮಾಡಿ ಪರಾರಿ ಆಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ