ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದ ಪ್ರಕರಣ; ಉಡುಪಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ

ಮಣಿಪಾಲ ಕೆಎಂಸಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದ ಪ್ರಕರಣ; ಉಡುಪಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿಕೊಟ್ಟು, ಆರೋಗ್ಯ ವಿಚಾರಿಸಿದರು
Follow us
TV9 Web
| Updated By: sandhya thejappa

Updated on: Dec 01, 2021 | 12:57 PM

ಉಡುಪಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಗಾಯಾಳುಗಳಿಗೆ ಮಣಿಪಾಲದ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ ಕೆಎಂಸಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಗೃಹ ಸಚಿವರ ತವರು ಕ್ಷೇತ್ರದಲ್ಲಿ ಅಕ್ರಮ ಗೋಸಾಗಣೆ ಪತ್ತೆ ಆಗಿತ್ತು. ಜಾನುವಾರು ಸಾಗಿಸುತ್ತಿದ್ದ ಮಿನಿ ಲಾರಿಯನ್ನು ಯುವಕರು ಬೆನ್ನತ್ತಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಗಿ ಗ್ರಾಮದಿಂದ ಸುಮಾರು 20 ಕಿ.ಮೀ.ವರೆಗೆ ಯುವಕರು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ್ದರು. ಈ ವೇಳೆ ಮಿನಿ ಲಾರಿಯನ್ನು ಚರಣ್ ಮತ್ತು ಕಿರಣ್ ಮೇಲೆ ದುಷ್ಕರ್ಮಿಗಳು ಹತ್ತಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳಿಗೆ ಉಡುಪಿಯ ಮಣಿಪಾಲದಲ್ಲಿರುವ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಳಗಿಯಿಂದ ಕೆಎ 17, ಸಿ 0624 ವಾಹನದಲ್ಲಿ ಜಾನುವಾರು ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ನಿನ್ನೆ ತೀರ್ಥಹಳ್ಳಿ ಆಸ್ಪತ್ರೆಗೆ ಗಾಯಾಳುಗಳು ದಾಖಲಾಗಿದ್ದಾಗ ಗೃಹಸಚಿವ ಆರಗ ಜ್ಞಾನೇಂದ್ರ ಆರೋಗ್ಯ ವಿಚಾರಿಸಿದ್ದರು. ಯುವಕರ ಚಿಕಿತ್ಸಾ ವೆಚ್ಚಕ್ಕೆ 35 ಸಾವಿರ ರೂ. ಧನ ಸಹಾಯ ಮಾಡಿದ್ದರು. ಈ ವೇಳೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಮಾಳೂರು ಪೊಲೀಸರು ಅಕ್ರಮ ಗೋಸಾಗಣೆ ವಾಹನ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮಿನಿ ಲಾರಿಯಲ್ಲಿ 3 ಹಸು, 2 ಎಮ್ಮೆ ಇತ್ತು ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

ಇದನ್ನೂ ಓದಿ

ಕಾವೇರಿದ ಪರಿಷತ್ ಚುನಾವಣೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಶಾಸಕರ ಮಧ್ಯೆ ಗಲಾಟೆ

Bribe: 2015ರಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿದ್ದ ಸರ್ವೆಯರ್‌ ಎಂ.ಜಿ.ರಂಗರಾಜುಗೆ 4 ವರ್ಷ ಜೈಲು ಶಿಕ್ಷೆ