AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಡಿಕೆ ಶಿವಕುಮಾರ್ ಇಳಿದಿರುವುದು ಆತಂಕ ಉಂಟುಮಾಡಿದೆ -ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡನೆ

ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ.

ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಡಿಕೆ ಶಿವಕುಮಾರ್ ಇಳಿದಿರುವುದು ಆತಂಕ ಉಂಟುಮಾಡಿದೆ -ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡನೆ
ಕೋಟಾ ಶ್ರೀನಿವಾಸ ಪೂಜಾರಿ, ಸಚಿವರು
TV9 Web
| Edited By: ಆಯೇಷಾ ಬಾನು|

Updated on:Jun 19, 2022 | 7:40 PM

Share

ಉಡುಪಿ: ಪಠ್ಯ ಪುಸ್ತಕ ಪರಿಷ್ಕರಣೆ(Textbook Revision) ಕುರಿತಂತೆ ರಾಜಕೀಯ ಜಟಾಪಟಿ ಮುಗಿಯುವಂತೆ ಕಾಣ್ತಿಲ್ಲ. ಪಠ್ಯ ಪರಿಷ್ಕರಣ ವಿರುದ್ಧ ನಿನ್ನೆಯಷ್ಟೇ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ವು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar), ಪಠ್ಯಪುಸ್ತಕದ ಪ್ರತಿಯನ್ನು ಹರಿದು ತಮ್ಮ ಆಕ್ರೋಶ ಹೊರಹಾಕಿದ್ರು. ಈ ಬಗ್ಗೆ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ(Kota Srinivas Pujari) ಖಂಡನೆ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ. ಡಿಕೆಶಿಯವರು ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು. ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ. ಡಿಕೆಶಿ ಅವರ ಹುದ್ದೆಗೆ ಈ ವರ್ತನೆ ತಕ್ಕದಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಡಿಕೆಶಿ ವರ್ತನೆಯನ್ನು ಖಂಡಿಸಿದ್ದಾರೆ. ಇದನ್ನೂ ಓದಿ: Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಒಕ್ಕಲಿಗರ ಸಂಘ ಯಾಕೆ ಮಾತಾಡ್ತಿಲ್ಲ ಎಂದ ಡಿಕೆಶಿ ಏಪ್ರಿಲ್ 18ರಂದು ಪಠ್ಯ ಪರಿಷ್ಕರಣೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಡಿಕೆಶಿ, ಸ್ವಾಮೀಜಿಗಳು ಸರ್ಕಾರದ ವಿರುದ್ಧ ಹೆದರದೆ ಧ್ವನಿ ಎತ್ತಬೇಕು. ಅವಮಾನ ಆದಾಗ ಒಕ್ಕಲಿಗರ ಸಂಘ, ವೀರಶೈವ ಲಿಂಗಾಯತ ಸಂಘದವರು ಯಾಕೆ ಮಾತಾಡ್ಲಿಲ್ಲ ಅಂತಾ ಪ್ರಶ್ನಿಸಿದ್ರು.

ಪಠ್ಯಪುಸ್ತಕಗಳನ್ನು ವಾಪಸ್ ಪಡೆಯುವಂತೆ ಸಿದ್ದು ಆಗ್ರಹ ವಿಜಯಪುರದ ದೇವರಹಿಪ್ಪರಗಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷ್ಕರಣಾ ಪಠ್ಯ ವಿಸರ್ಜಿಸಬೇಕು. ಈಗಾಗಲೇ ಪೂರೈಸಿರುವ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು ಅಂತಾ ಒತ್ತಾಯಿಸಿದ್ದಾರೆ.

ಕೈ ನಾಯಕ ಪಠ್ಯ ವಾರ್‌ಗೆ ಕೇಸರಿ ಕಲಿಗಳು ಟಾಂಗ್ ಕಾಂಗ್ರೆಸ್‌ ನಾಯಕರ ಪಠ್ಯ ವಾರ್‌ಗೆ ಕೇಸರಿ ಕಲಿಗಳು ಟಾಂಗ್ ಕೊಟ್ಟಿದ್ದಾರೆ. ತುಮಕೂರಿನಲ್ಲಿ ಗುಡುಗಿರೋ ಸಚಿವ ಆರ್‌.ಅಶೋಕ್, ಸಿದ್ದರಾಮಯ್ಯ ಕಾಲದಲ್ಲೂ ಕುವೆಂಪು ಪಠ್ಯಕ್ಕೆ ಕತ್ತರಿ ಹಾಕಿ, ಟಿಪ್ಪುವನ್ನು ವೈಭವೀಕರಿಸಲಾಗಿತ್ತು ಅಂತಾ ಕುಟುಕಿದ್ರು. ಪುಸ್ತಕ ಹರಿದ ಡಿಕೆಶಿಗೂ ತಿರುಗೇಟು ಕೊಟ್ರು. ಇದನ್ನೂ ಓದಿ: P M Narendra Modi: ಚೆಸ್​ ಒಲಿಂಪಿಯಾಡ್​ ಜ್ಯೋತಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:47 pm, Sun, 19 June 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ