ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ: ಭ್ರಷ್ಟಾಚಾರದ ಉತ್ತುಂಗದಲ್ಲಿರುವವರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ -ಸಚಿವ ಸುನೀಲ್​ ಕುಮಾರ್

‘ಪೇ ಸಿಎಂ’ ಕ್ಯಾಂಪೇನ್​ಗೆ ಸಚಿವ ಸುನಿಲ್​ ಕುಮಾರ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್​ನವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ‘ಪೇ ಸಿಎಂ’ ಎಂಬುವುದು ಕಾಂಗ್ರೆಸ್​ನ ಸುಳ್ಳಿನ ಸುರಿಮಳೆ. ಪೋಸ್ಟರ್ ಅಂಟಿಸಿದ ಡಿಕೆಶಿ ED ಕಚೇರಿಗೆ ಹೋಗಿದ್ಯಾಕೆ?

ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ: ಭ್ರಷ್ಟಾಚಾರದ ಉತ್ತುಂಗದಲ್ಲಿರುವವರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ -ಸಚಿವ ಸುನೀಲ್​ ಕುಮಾರ್
ಸಚಿವ ಸುನೀಲ್ ಕುಮಾರ್
TV9kannada Web Team

| Edited By: Ayesha Banu

Sep 24, 2022 | 2:52 PM

ಉಡುಪಿ: ನಾಡಗೀತೆ ಹಾಡಲು ಸಮಯ ನಿಗದಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಕಳೆದ 18 ವರ್ಷಗಳಿಂದ ನಾಡಗೀತೆಯ ಬಗ್ಗೆ ಸ್ಪಷ್ಟನೆ ಇರಲಿಲ್ಲ. ರಾಗ ಸಂಯೋಜನೆ, ಸಮಯ ನಿಗದಿ ಬಗ್ಗೆ ಚರ್ಚೆ ಆಗುತ್ತಿತ್ತು. ನಾಡಗೀತೆ ಬಗ್ಗೆ ಬೊಮ್ಮಾಯಿ ಸರ್ಕಾರ ಸ್ಪಷ್ಟ ನಿಲುವಿಗೆ ಬಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್​ ಕುಮಾರ್​ ತಿಳಿಸಿದ್ದಾರೆ.

ಎಸ್.ಆರ್.ಲೀಲಾವತಿ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ 2 ನಿಮಿಷ 30 ಸೆಕೆಂಡ್​​ನಲ್ಲಿ ನಾಡಗೀತೆ ಹಾಡಲು ಅಂತಿಮವಾಗಿದೆ. ನಾಡಗೀತೆಯಲ್ಲಿ ಯಾವುದೇ ಶಬ್ದವನ್ನು ಕಡಿತ ಮಾಡಿಲ್ಲ. ಕನ್ನಡ ಸಂಸ್ಕೃತಿ ಇಲಾಖೆ ಒಪ್ಪಿ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಈ ಹಿಂದೆ ಆರೇಳು ನಿಮಿಷಗಳ ವರೆಗೆ ನಾಡಗೀತೆಯನ್ನು ಹಾಡಲಾಗುತ್ತಿತ್ತು. ಸಾಂಸ್ಕೃತಿಕ ಲೋಕದಲ್ಲಿ ಸಾಹಿತ್ಯ ವಲಯದಲ್ಲಿ ಸದಾಭಿಪ್ರಾಯ ಬಂದಿದೆ. ಬರಗೂರು ರಾಮಚಂದ್ರಪ್ಪರಿಂದ ಭೈರಪ್ಪ ರವರಿಗೆ ಎಲ್ಲ ಸಾಹಿತಿಗಳು ಒಪ್ಪಿದ್ದಾರೆ ಅವರಿಗೆ ಅಭಿನಂದನೆ ಎಂದರು.

ಇನ್ನು ವಿದ್ಯುತ್​ ದರ ಏರಿಕೆ ಕುರಿತು ಸುನಿಲ್​ ಕುಮಾರ್ ಪ್ರತಿಕ್ರಿಯಿಸಿದ್ದು ವಿದ್ಯುತ್​ ದರ ಏರಿಕೆ ವರ್ಷಕ್ಕೆ ಒಂದು ಬಾರಿ ನಡೆಯುತ್ತದೆ. ಕಲ್ಲಿದ್ದಲು ಬೆಲೆ ಏರಿಕೆಗೆ ಹೊಂದಾಣಿಕೆ ಮಾಡಿ ದರ ನಿಗದಿ ಮಾಡಲಾಗುತ್ತೆ. 9 ವರ್ಷದಿಂದ 3 ತಿಂಗಳಿಗೊಮ್ಮೆ ಕಲ್ಲಿದ್ದಲು ದರ ನಿಗದಿ ಆಗಿದೆ. ಕಲ್ಲಿದ್ದಲು ಬೆಲೆ ಹೊಂದಾಣಿಕೆಗೋಸ್ಕರ ವಿದ್ಯುತ್​ ದರ ಏರಿಕೆ ಮಾಡಲಾಗಿದೆ ಎಂದು ಉಡುಪಿಯಲ್ಲಿ ಇಂಧನ ಸಚಿವ ಸುನಿಲ್​ ಕುಮಾರ್​ ತಿಳಿಸಿದ್ರು. ಇದನ್ನೂ ಓದಿ: ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿ ಎಸ್ ವೈ ಮತ್ತು ಬೊಮ್ಮಾಯಿ ಜೊತೆಯಾಗಿ ಭಾಗಿಯಾದರು

‘ಪೇ ಸಿಎಂ’ ಎಂಬುವುದು ಕಾಂಗ್ರೆಸ್​ನ ಸುಳ್ಳಿನ ಸುರಿಮಳೆ

‘ಪೇ ಸಿಎಂ’ ಕ್ಯಾಂಪೇನ್​ಗೆ ಸಚಿವ ಸುನಿಲ್​ ಕುಮಾರ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್​ನವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ‘ಪೇ ಸಿಎಂ’ ಎಂಬುವುದು ಕಾಂಗ್ರೆಸ್​ನ ಸುಳ್ಳಿನ ಸುರಿಮಳೆ. ಪೋಸ್ಟರ್ ಅಂಟಿಸಿದ ಡಿಕೆಶಿ ED ಕಚೇರಿಗೆ ಹೋಗಿದ್ಯಾಕೆ? ಭ್ರಷ್ಟಾಚಾರದ ಪ್ರಕರಣದಲ್ಲಿ ಇಡಿ ವಿಚಾರಣೆಯನ್ನ ಎದುರಿಸಿ ಇದೀಗ ‘ಪೇ ಸಿಎಂ’ ಎಂದು ಪೋಸ್ಟರ್​ ಅಂಟಿಸುತ್ತಿದ್ದಾರೆ ಎಂದು ಉಡುಪಿಯಲ್ಲಿ ಇಂಧನ ಸಚಿವ ಸುನಿಲ್​ ಕುಮಾರ್​ ಗರಂ ಆಗಿದ್ದಾರೆ.

ಪಿಎಫ್​ಐಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು. ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ. ಜಗತ್ತಿನ ಯಾವುದೇ ರಾಷ್ಟ್ರ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಭಾರತ ಹಿಂದೂ ರಾಷ್ಟ್ರ. ಹಿಂದೂ ಸಂಸ್ಕೃತಿಯ ಹಿನ್ನೆಲೆಯಲ್ಲಿ ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ. ಜನರು ಕೂಡ ಇದಕ್ಕೆ ಬೆಂಬಲವನ್ನ ಕೊಡಬೇಕು ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಾಗಿ ಹೇಳಿದ್ದೆ. ಕಾರ್ಯಕರ್ತರಿಗೆ ನ್ಯಾಯ ಕೊಡುವ ಭರವಸೆಯನ್ನ ನೀಡಿದ್ದೆವು. ಪ್ರಕರಣವನ್ನು NIAಗೆ ಕೊಟ್ಟು ಸರ್ಕಾರ ಕೈ ಕಟ್ಟಿ ಕುಳಿತಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಎಸ್​ಡಿಪಿಐಪಿಎಫ್ ಪೋಷಿಸಿದ್ದರು. ಸಿದ್ದರಾಮಯ್ಯ ಕಾಲದಲ್ಲಿ 18 ಹಿಂದೂಗಳ ಹತ್ಯೆಯಾಗಿತ್ತು. ಆರೋಪಿಗಳ ಕೇಸನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿತ್ತು. ಅಶಾಂತಿ ಸೃಷ್ಟಿಸಿರುವ ಅವರ ವಿರುದ್ಧ ಕಾಂಗ್ರೆಸ್ ಸ್ನೇಹ ಬೆಳೆಸಿತ್ತು. ಭಾರತದ ಭದ್ರತೆಯನ್ನು ಕಾಪಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಲುವು ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಡೆಸುತ್ತಿರುವ ‘ಪೇ ಸಿಮ್’ ಅಭಿಯಾನ ಮತದಾರರ ಮೇಲೆ ಯಾವುದೇ ಪರಿಣಾಮ ಬೀರದು: ವಿಜಯೇಂದ್ರ

ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ

ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ. ಭ್ರಷ್ಟಾಚಾರದ ಉತ್ತುಂಗ ಏರಿಸಿದ ಕಾಂಗ್ರೆಸ್ಸಿಗರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ. ಭ್ರಷ್ಟಾಚಾರ ನಡೆದಿದ್ದರೆ ನ್ಯಾಯಾಲಯ ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ದೂರು ಕೊಡಿ. 10 ದಿನದ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಒಂದು ದಿನವು ಚರ್ಚೆ ನಡೆದಿಲ್ಲ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada