ಉಡುಪಿ: ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ; ಶಾಂತಿ, ಸಹಬಾಳ್ವೆ ಸಂಬಂಧ ಮಾತುಕತೆ

ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ. ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ ಎಂದು ಮಾತುಕತೆ ಬಳಿಕ ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ ಹೇಳಿದ್ದಾರೆ.

ಉಡುಪಿ: ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ; ಶಾಂತಿ, ಸಹಬಾಳ್ವೆ ಸಂಬಂಧ ಮಾತುಕತೆ
ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ
Follow us
TV9 Web
| Updated By: ganapathi bhat

Updated on:Mar 30, 2022 | 2:26 PM

ಉಡುಪಿ: ನಗರದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿ ಮುಸಲ್ಮಾನ ವರ್ತಕರು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಜಾತ್ರೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿಯಾಗಿ, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಪೇಜಾವಶ್ರೀ ಭೇಟಿ ಮಾಡಲಾಗಿದೆ. ಅಬೂಬಕ್ಕರ್ ಆತ್ರಾಡಿ ನೇತೃತ್ವದ ಮುಸಲ್ಮಾನ ವ್ಯಾಪಾರಿಗಳ ಮಾತುಕತೆ ನಡೆಸಿದೆ.

ಉಡುಪಿಯಲ್ಲಿ ಮುಸಲ್ಮಾನ ವರ್ತಕರಿಗೆ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಕ್ರೈಸ್ತ ಧರ್ಮಗುರು ಫಾ. ಚಾಲ್ಸ್ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ನಾವೆಲ್ಲರೂ ಮನುಷ್ಯತ್ವದ ತತ್ವದಲ್ಲಿ ಬಾಳುವವರು. ಹೊಂದಾಣಿಕೆಯಿಂದ ನಡೆದುಕೊಂಡು ಹೋದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿ ಕೆಲವರು ಅಲ್ಲಲ್ಲಿ ತಪ್ಪುಗಳನ್ನು ಮಾಡುತ್ತಾರೆ. ಒಬ್ಬರಿಬ್ಬರು ಮಾಡಿದ ತಪ್ಪಿನಿಂದ ಹಲವರಿಗೆ ಸಮಸ್ಯೆಗಳು ಆಗುತ್ತದೆ. ತಪ್ಪು- ಒಪ್ಪುಗಳನ್ನು ಸರಿ ಮಾಡಿ ಮುಂದೆ ಹೋದರೆ ಶಾಂತಿ ಸಹಬಾಳ್ವೆ ಸಾಧ್ಯ. ಧರ್ಮ ಎಲ್ಲರಿಗೂ ಬೇಕು ಧರ್ಮಕ್ಕಾಗಿ ಮನುಷ್ಯತ್ವವನ್ನು ಬೇರ್ಪಡಿಸುವುದು ಸರಿಯಲ್ಲ. ಮನುಷ್ಯತ್ವ ಮತ್ತು ದೈವತ್ವ ಜೊತೆ ಜೊತೆಯಾಗಿ ಹೋದರೆ ಮಾತ್ರ ಜೀವಿಸಲು ಸಾಧ್ಯ. ಮನುಷ್ಯತ್ವವನ್ನು ಎತ್ತಿಟ್ಟುಕೊಂಡು ದೈವತ್ವವನ್ನು ಬಳಸಿಕೊಂಡು ಜೊತೆ ನಡೆದರೆ ಸಹಬಾಳ್ವೆ ಎಂದು ಉಡುಪಿಯ ಶೋಕಮಾತಾ ಇಗರ್ಜಿಯ ಧರ್ಮಗುರು ಫಾ. ಚಾರ್ಲ್ಸ್ ಹೇಳಿಕೆ ನೀಡಿದ್ದಾರೆ.

ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯು ಬೇಡ: ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರದ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಶಾಂತಿ- ಸಾಮರಸ್ಯ, ಸೌಹಾರ್ದ, ನೆಮ್ಮದಿ ಅವಶ್ಯವಾಗಿ ಬೇಕು. ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ ಎಂದು ಮಾತುಕತೆಯ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು. ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ. ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇವೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ. ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯು ಬೇಡ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ: ಅಬೂಬಕ್ಕರ್ ಆತ್ರಾಡಿ

ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲೆಸಲು ಸ್ವಾಮೀಜಿಗಳನ್ನು ಭೇಟಿ ಮಾಡಿದ್ದೇವೆ. ಮುಸಲ್ಮಾನ ಸಮುದಾಯ ಕೂಡಾ ಶಾಂತಿಯನ್ನು ಬಯಸುತ್ತದೆ. ಒಬ್ಬರು- ಇಬ್ಬರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವುದು ಸೂಕ್ತವಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಸಹಬಾಳ್ವೆಯಿಂದ ಬಾಳಬೇಕು. ಹಿಂದೆ ಆದ ಘಟನೆಗಳನ್ನು ಮರೆತು ಸಹಬಾಳ್ವೆಯಿಂದ ಬಾಳೋಣ. ನಾವೆಲ್ಲರೂ ಸಹಬಾಳ್ವೆಯಿಂದ ಬದುಕೋಣ ಎಂದು ಕಳಕಳಿಯಿಂದ ವಿನಂತಿ ಮಾಡುತ್ತೇನೆ. ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ. ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ ಎಂದು ಮಾತುಕತೆ ಬಳಿಕ ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ ಹೇಳಿದ್ದಾರೆ.

ಮುಸಲ್ಮಾನ ಸಮುದಾಯದ ಒಳಗೆ ನಾವು ಯಾವುದೇ ಮೀಟಿಂಗ್ ಮಾಡಿಲ್ಲ. ಚರ್ಚೆ ಹಲವು ದಾರಿಗಳಲ್ಲಿ ಸಾಗಿ ಇಂದು ಈ ಪರಿಸ್ಥಿತಿ ನಿರ್ಮಾಣವಾಗಿದೆ. ಮನಸ್ಸಿಗೆ ಬಂದ ಹಾಗೆ ಹೇಳಿಕೆಗಳನ್ನು ಕೊಟ್ಟು ಸಮಾಜದಲ್ಲಿ ಶಾಂತಿ ಕದಡುತ್ತದೆ. ಮಾತಿನಲ್ಲಿ ಪ್ರೀತಿ ತೋರಿದರೆ ಸಮಾಜದ ಶಾಂತಿ ಕದಡುವುದಿಲ್ಲ. ಒಂದು ಕೈಯಿಂದ ಸಾಮರಸ್ಯದ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ ಎಂದು ಅಬೂಬಕ್ಕರ್ ಆತ್ರಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ; ನಾವು ಶಾಂತಿ, ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ವಿಧಾನಸಭೆ: ಶಾಂತಿಯ ತೋಟವನ್ನು ಹಾಳು ಮಾಡಬೇಡಿ, ಕನ್ನಡಿಗರೇ ದಾರಿ ತಪ್ಪಬೇಡಿ: ಹೆಚ್​ಡಿ ಕುಮಾರಸ್ವಾಮಿ ಮನವಿ

Published On - 2:20 pm, Wed, 30 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ