AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಭೇಟಿಗೆ ಪ್ರಧಾನಿ ಮೋದಿ ಕಾತರ: ಕನ್ನಡ ನಾಡಿಗೆ ಬರುತ್ತಿರುವುದಕ್ಕೆ ಕನ್ನಡದಲ್ಲೇ ಖುಷಿ ಹಂಚಿಕೊಂಡ ನಮೋ

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ನವೆಂಬರ್ 28) ಉಡುಪಿಗೆ ಆಗಮಿಸಲಿದ್ದಾರೆ. ಹೀಗಾಗಿ ಉಡುಪಿಯಲ್ಲಿ ಪ್ರಧಾನಿ ಸ್ವಾಗತಕ್ಕೆ ಸಕಲ ಸಿದ್ಧತೆಗಳು ಜೋರಾಗಿದ್ದು, ಇನ್ನು ನರೇಂದ್ರ ಮೋದಿ ಸಹ ಕನ್ನಡ ನಾಡಿಗೆ ಬರುತ್ತಿರುವ ಬಗ್ಗೆ ಕನ್ನಡದಲ್ಲೇ ಖುಷಿ ಹಂಚಿಕೊಂಡಿದ್ದಾರೆ. ಹಾಗಾದ್ರೆ, ಉಡುಪಿ ಭೇಟಿ ಬಗ್ಗೆ ಮೋದಿ ಹೇಳಿದ್ದೇನು? ಪ್ರಧಾನಿ ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಉಡುಪಿ ಭೇಟಿಗೆ ಪ್ರಧಾನಿ ಮೋದಿ ಕಾತರ: ಕನ್ನಡ ನಾಡಿಗೆ ಬರುತ್ತಿರುವುದಕ್ಕೆ ಕನ್ನಡದಲ್ಲೇ ಖುಷಿ ಹಂಚಿಕೊಂಡ ನಮೋ
Pm Narendra Modi
TV9 Web
| Edited By: |

Updated on: Nov 27, 2025 | 8:53 PM

Share

ಉಡುಪಿ, (ನವೆಂಬರ್ 27): ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಾಳೆ (ನವೆಂಬರ್ 28) ಉಡುಪಿಯ (Udupi) ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮಠಕ್ಕೆ ಆಗಮಿಸಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಇನ್ನು ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಕಾತರರಾಗಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಉಡುಪಿ ಭೇಟಿ ಬಗ್ಗೆ ಪ್ರಧಾನಿ ಮೋದಿ ಮಾತು

ನಾಳೆ ಉಡುಪಿಗೆ ಭೇಟಿ ನೀಡುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೃಷ್ಣ ಮಠ ಭೇಟಿಗೂ ಮುನ್ನ ಉಡುಪಿಯಲ್ಲಿ ಮೋದಿ ರೋಡ್ ಶೋ; ಸಿದ್ಧತೆ ಹೇಗಿದೆ ಗೊತ್ತಾ?

ಇನ್ನು ಪ್ರಧಾನಿಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಕೃಷ್ಣಮಠ ಸಕಲ ರೀತಿಯಲ್ಲೂ ಸಜ್ಜಾಗಿದೆ. ಪ್ರಧಾನಿ ರೋಡ್ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆ ಬರಲಿದ್ದು, ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪರ್ಯಾಯ ಶ್ರೀಗಳು, ಸರ್ವಜ್ಞ ಪೀಠ, ಗೋಶಾಲೆ ದರ್ಶನ ಮಾಡಿದ ಬಳಿಕ ಅವರು ಗೀತಾಮಂದಿರಕ್ಕೆ ಭೇಟಿ ನೀಡುವರು. ಅಲ್ಲಿ ಲಘು ಉಪಹಾರ ಸೇವಿಸುವರು. ನಂತರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಪಠಿಸಲಿದ್ದಾರೆ ತಿಳಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಉಡುಪಿ ಭೇಟಿ: ಶ್ರೀ ಕೃಷ್ಣ ಮಠ ಸುತ್ತ ಬಿಗಿ ಬಂದೋಬಸ್ತ್, ದೇಗುಲಕ್ಕೆ ಬರುವವರು ಈ ಮಾರ್ಗಸೂಚಿ ಪಾಲಿಸಿ

ಬಿಗಿ ಪೊಲೀಸ್ ಬಂದೋಬಸ್ತ್​​

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಮಂದಿ ಪೊಲೀಸ್‌ ಆಯುಕ್ತರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವ ವಹಿಸಿದ್ದು, ಈಗಾಗಲೇ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದೆ. ಸ್ಥಳೀಯ ಪೊಲೀಸ್‌ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್‌ ವ್ಯವಸ್ಥೆ ಎಡಿಜಿಪಿ ಜಿತೇಂದ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ನೇತೃತ್ವದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ವೇಳಾಪಟ್ಟಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಉಡುಪಿಯತ್ತ ತೆರಳುವವರು.

  • ಬೆಳಗ್ಗೆ 8.15: ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಪಯಣ.
  • ಬೆಳಗ್ಗೆ 11.05: ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ.
  • ಬೆಳಗ್ಗೆ 11.10: ಹೆಲಿಕಾಪ್ಟರ್‌ ಮೂಲಕ ಪಯಣ.
  • ಬೆಳಗ್ಗೆ 11.35: ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮನ.
  • ಬೆಳಗ್ಗೆ 11.45: ಆದಿ ಉಡುಪಿ ಹೆಲಿಪ್ಯಾಡ್‌ನಿಂದ ರಸ್ತೆ ಮೂಲಕ ಶ್ರೀಕೃಷ್ಣ ಮಠಕ್ಕೆ ಪಯಣ.
  • ಮಧ್ಯಾಹ್ನ 12: ಶ್ರೀಕೃಷ್ಣ ಮಠ ಭೇಟಿ, ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿ.
  • ಮಧ್ಯಾಹ್ನ 12ರಿಂದ 1.30: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಪುತ್ತಿಗೆ ಶ್ರೀ ಭೇಟಿ.
  • ಮಧ್ಯಾಹ್ನ 1.35: ಶ್ರೀಕೃಷ್ಣಮಠದಿಂದ ನಿರ್ಗಮನ.
  • ಮಧ್ಯಾಹ್ನ 1.45: ಹೆಲಿಕಾಪ್ಟರ್‌ ಮೂಲಕ ಮಂಗಳೂರು ವಿಮಾನ ನಿಲ್ದಾಣ.
  • 2.15: ವಾಯುಪಡೆ ವಿಮಾನ ಮೂಲಕ ಗೋವಾದ ದಾಬೋಲಿಮ್‌ ವಿಮಾನ ನಿಲ್ದಾಣಕ್ಕೆ ಪಯಣ.
  • 3.05: ದಾಬೋಲಿಂ ವಿಮಾನ ನಿಲ್ದಾಣದಿಂದ ಗೋಕರ್ಣ ಪರ್ತಗಳಿ ಜೀವೋತ್ತಮ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ.

ಮಂಗಳೂರು ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ನಿಷೇಧ

ಪ್ರಧಾನಿ ನರೇಂದ್ರ ಮೋದು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್ 28) ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ಹಾರಾಟ ಮತ್ತು ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಇನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು CISF ಜೊತೆ ಸ್ಥಳೀಯ ಪೊಲೀಸರ ನಿಯೋಜಿಸಲಾಗಿದೆ. ಮೋದಿ ಏರ್ಪೋರ್ಟ್​ನಿಂದ ಹೊರಗೆ ಬರದೇ ಒಳಗಿಂದಲೇ ಹೆಲಿಕಾಪ್ಟರ್ ಟೇಕಾಫ್ ಆಗುವ ರೀತಿ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್​​ ವಾಪಾಸ್ ಏರ್ಪೋರ್ಟ್ ಒಳಗೆ ಲ್ಯಾಂಡಿಂಗ್ ಆಗಲಿದೆ.

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು