
ಉಡುಪಿ, (ನವೆಂಬರ್ 27): ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಾಳೆ (ನವೆಂಬರ್ 28) ಉಡುಪಿಯ (Udupi) ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮಠಕ್ಕೆ ಆಗಮಿಸಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಇನ್ನು ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಕಾತರರಾಗಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ನಾಳೆ ಉಡುಪಿಗೆ ಭೇಟಿ ನೀಡುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ…
— Narendra Modi (@narendramodi) November 27, 2025
ಇನ್ನು ಪ್ರಧಾನಿಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಕೃಷ್ಣಮಠ ಸಕಲ ರೀತಿಯಲ್ಲೂ ಸಜ್ಜಾಗಿದೆ. ಪ್ರಧಾನಿ ರೋಡ್ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆ ಬರಲಿದ್ದು, ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪರ್ಯಾಯ ಶ್ರೀಗಳು, ಸರ್ವಜ್ಞ ಪೀಠ, ಗೋಶಾಲೆ ದರ್ಶನ ಮಾಡಿದ ಬಳಿಕ ಅವರು ಗೀತಾಮಂದಿರಕ್ಕೆ ಭೇಟಿ ನೀಡುವರು. ಅಲ್ಲಿ ಲಘು ಉಪಹಾರ ಸೇವಿಸುವರು. ನಂತರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಪಠಿಸಲಿದ್ದಾರೆ ತಿಳಿಸಿದರು.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಮಂದಿ ಪೊಲೀಸ್ ಆಯುಕ್ತರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವ ವಹಿಸಿದ್ದು, ಈಗಾಗಲೇ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದೆ. ಸ್ಥಳೀಯ ಪೊಲೀಸ್ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್ ವ್ಯವಸ್ಥೆ ಎಡಿಜಿಪಿ ಜಿತೇಂದ್ರ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್ ಪಟೀಲ್ ಮತ್ತು ಐಜಿ ಚಂದ್ರಗುಪ್ತ ನೇತೃತ್ವದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.
ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಉಡುಪಿಯತ್ತ ತೆರಳುವವರು.
ಪ್ರಧಾನಿ ನರೇಂದ್ರ ಮೋದು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್ 28) ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ಹಾರಾಟ ಮತ್ತು ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.
ಇನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು CISF ಜೊತೆ ಸ್ಥಳೀಯ ಪೊಲೀಸರ ನಿಯೋಜಿಸಲಾಗಿದೆ. ಮೋದಿ ಏರ್ಪೋರ್ಟ್ನಿಂದ ಹೊರಗೆ ಬರದೇ ಒಳಗಿಂದಲೇ ಹೆಲಿಕಾಪ್ಟರ್ ಟೇಕಾಫ್ ಆಗುವ ರೀತಿ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್ ವಾಪಾಸ್ ಏರ್ಪೋರ್ಟ್ ಒಳಗೆ ಲ್ಯಾಂಡಿಂಗ್ ಆಗಲಿದೆ.