ಇಂದು ನರೇಂದ್ರ ಮೋದಿ ಪದಗ್ರಹಣ; ಉಡುಪಿ ಪೇಜಾವರಶ್ರೀ, ಡಾ.ನಸೀರ್ ಅಹ್ಮದ್​ಗೆ ಆಹ್ವಾನ

ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪೇಜಾವರಶ್ರೀಗಳಿಗೂ ಆಹ್ವಾನ ನೀಡಲಾಗಿದ್ದು ಇಂದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

ಇಂದು ನರೇಂದ್ರ ಮೋದಿ ಪದಗ್ರಹಣ; ಉಡುಪಿ ಪೇಜಾವರಶ್ರೀ, ಡಾ.ನಸೀರ್ ಅಹ್ಮದ್​ಗೆ ಆಹ್ವಾನ
ನರೇಂದ್ರ ಮೋದಿ, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು

Updated on:Jun 09, 2024 | 9:51 AM

ಉಡುಪಿ, ಜೂನ್.09: ನರೇಂದ್ರ ಮೋದಿಯವರ (Narendra Modi) ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಶುರುವಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇಂದಿನಿಂದ ಮತ್ತೆ ನಮೋ ದರ್ಬಾರ್ ಆರಂಭವಾಗಲಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಪೇಜಾವರಶ್ರೀಗಳಿಗೂ (Pejavara Shree) ಆಹ್ವಾನ ಸಿಕ್ಕಿದ್ದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀಗಳು ತೆರಳಲಿದ್ದಾರೆ.

ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಆಹ್ವಾನ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆರಳಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಡಾ.ನಸೀರ್ ಅಹ್ಮದ್​ಗೂ ಆಹ್ವಾನ

ದಾವಣಗೆರೆಯಸಮಾಜ ಸೇವಕ & ಬಿಜೆಪಿ ಮುಖಂಡ ಡಾ.ನಸೀರ್ ಅಹ್ಮದ್​ ಅವರಿಗೂ ಪಿಎಂಒ ಅಧಿಕೃತ ಆಹ್ವಾನ ನೀಡಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯ, ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಅಧಿಕೃತ ಆಹ್ವಾನ ನೀಡಲಾಗಿದೆ. ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾಗಿರುವ ಡಾ.ನಸೀರ್ ಬೆಳಗ್ಗೆ ಹುಬ್ಬಳ್ಳಿ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: PM Modi Swearing in Ceremony: ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಮೋದಿ ಪ್ರಮಾಣವಚನ, ಇಡೀ ದೆಹಲಿಗೆ 3 ಹಂತದ ಭದ್ರತಾ ವ್ಯವಸ್ಥೆ

ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಖರ್ಗೆಗೆ ಆಹ್ವಾನ

ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡಲಾಗಿದೆ.

ನಿನ್ನೆ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನ ಸ್ವೀಕರಿಸಿದ್ದಾರೆ. ಆದರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ ಎಂದು ಇನ್ನೂ ನಿರ್ಧರಿಸಿಲ್ಲ. ಮತ್ತೊಂದೆಡೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಕಾನೂನುಬಾಹಿರವಾಗಿ ಮೋದಿ‌ ಸರಕಾರ ರಚಿಸುತ್ತಿದ್ದಾರೆ. ಬಿಜೆಪಿಗೆ ಬಹುಮತ ಇಲ್ಲದೆ ಸರಕಾರ ರಚನೆ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Sun, 9 June 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ