Navaratri 2021: ಕೊಲ್ಲೂರಿನಲ್ಲಿ ಸರಳ ನವರಾತ್ರಿ; ಸಂಪ್ರದಾಯಕ್ಕೆ ಸೀಮಿತವಾಗಿ ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮ

ಅಕ್ಟೋಬರ್ 14ರಂದು ನಡೆಯುವ ನವಮಿ ರಥೋತ್ಸವದಂದು ಕೂಡ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕೊಲ್ಲೂರು ದೇಗುಲದ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

Navaratri 2021: ಕೊಲ್ಲೂರಿನಲ್ಲಿ ಸರಳ ನವರಾತ್ರಿ; ಸಂಪ್ರದಾಯಕ್ಕೆ ಸೀಮಿತವಾಗಿ ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮ
ಕೊಲ್ಲೂರು ದೇವಸ್ಥಾನ
Follow us
TV9 Web
| Updated By: preethi shettigar

Updated on: Oct 04, 2021 | 8:29 AM

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಈ ಬಾರಿ ಸರಳವಾಗಿ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ. ಅಕ್ಟೋಬರ್ 7ರಿಂದ 15ರವರೆಗೆ ದೇಗುಲದಲ್ಲಿ ನವರಾತ್ರಿ ಉತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಲು ತೀರ್ಮಾನಿಸಲಾಗಿದೆ. ಕ್ಷೇತ್ರದ ಒಳಗಷ್ಟೇ ಸರಳವಾಗಿ ಈ ಬಾರಿ ಉತ್ಸವ ಆಚರಣೆಗಳು ನಡೆಯಲಿದೆ. ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮಗಳು ಕೂಡ ಸಂಪ್ರದಾಯಕ್ಕೆ ಸೀಮಿತವಾಗಿ ನಡೆಯಲಿದೆ.

ಅಕ್ಟೋಬರ್ 14ರಂದು ನಡೆಯುವ ನವಮಿ ರಥೋತ್ಸವದಂದು ಕೂಡ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಬಂದ ನಂತರ ಕಳೆದ ಎರಡು ವರ್ಷಗಳಿಂದ ಇದೇ ಮಾದರಿಯಲ್ಲಿ ಅತ್ಯಂತ ಸರಳವಾಗಿ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ ಸೆಪ್ಟೆಂಬರ್ 4ರಂದು ಹೊರಡಿಸಲಾಗಿದ್ದ ಆದೇಶದ ಪ್ರಕಾರ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಡ್ಡಾಯ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇಗುಲದಲ್ಲಿ ಹೀಗೆ ಆದೇಶ ಹೊರಡಿಸಲಾಗಿದೆ. ಅದರಂತೆ, ದೇಗುಲಕ್ಕೆ ಭೇಟಿ ನೀಡುವ ಭಕ್ತರು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಕಠಿಣ ನಿಯಮಗಳ ಆದೇಶ ಹಿನ್ನೆಲೆ ಆಡಳಿತ ಮಂಡಳಿಯಿಂದ ಈ ಸೂಚನೆ ಹೊರಬಿದ್ದಿದೆ.

ಆಧಾರ್ ಕಾರ್ಡ್ ತೋರಿಸಿದರಷ್ಟೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯ ಮಾಡಲಾಗಿದೆ. ಕೊಲ್ಲೂರು ದೇಗುಲಕ್ಕೆ ಅತಿಹೆಚ್ಚು ಸಂಖ್ಯೆಯಲ್ಲಿ ಕೇರಳದಿಂದ ಭಕ್ತ ಜನರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಸೂಚಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: 

Navaratri 2021: ನವರಾತ್ರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಭಾರತದ ಪ್ರಮುಖ ದೇವಿಯರ ದೇವಸ್ಥಾನಗಳು ಇಲ್ಲಿವೆ

Yediyur Siddhalingeshwara: 15ನೇ ಶತಮಾನದ ಎಡೆಯೂರು ಸಿದ್ಧಲಿಂಗೇಶ್ವರ ದೇಗುಲದ ಕ್ಷೇತ್ರ ಮಹಿಮೆ ತಿಳಿಯೋಣ ಬನ್ನೀ

ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ