ಉಡುಪಿ: ಮಂಕಿ ಕ್ಯಾಪ್ ಹಾಕಿಕೊಂಡು, ಕೋವಿ ಹಿಡಿದು ಬಂದಿದ್ದರು ಸರ್, ನಕ್ಸಲರ ಚಲನವಲನ ಕಂಡ ಗ್ರಾಮಸ್ಥ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಉದಯನಗರದಲ್ಲಿ ನಕ್ಸಲರು ಓಡಾಡಿದ ಬಗ್ಗೆ ಗ್ರಾಮಸ್ಥನೋರ್ವ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥನಿಂದ ಮಾಹಿತಿ ಪಡೆದ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆಗೆ ಇಳಿದಿದೆ. ದಶಕಗಳಿಂದ ಶಾಂತವಾಗಿದ್ದ ನಕ್ಸಲ್​ ಚಟುವಟಿಕೆ ಮತ್ತೆ ಆರಂಭವಾಯಿತೆ ಎಂಬ ಪ್ರಶ್ನೆ ಉದ್ಭವಾಗಿದೆ.

ಉಡುಪಿ: ಮಂಕಿ ಕ್ಯಾಪ್ ಹಾಕಿಕೊಂಡು, ಕೋವಿ ಹಿಡಿದು ಬಂದಿದ್ದರು ಸರ್, ನಕ್ಸಲರ ಚಲನವಲನ ಕಂಡ ಗ್ರಾಮಸ್ಥ
ಪ್ರತ್ಯಕ್ಷದರ್ಶಿಗಳ ವಿಚಾರಣೆ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on: Feb 10, 2024 | 1:25 PM

ಉಡುಪಿ, ಫೆಬ್ರವರಿ 10: ನಕ್ಸಲ್ (Naxal)​ ಚಟುವಟಿಕೆ ರಾಜ್ಯದಲ್ಲಿ ಮತ್ತೆ ಶುರುವಾಗಿದೆ ಎಂಬ ಅನುಮಾನ ಶುರುವಾಗಿದೆ. ಉಡುಪಿ (Udupi) ಜಿಲ್ಲೆಯ ಬೈಂದೂರು (Baindur) ತಾಲೂಕಿನ ಕೊಲ್ಲೂರು ಭಾಗದಲ್ಲಿ ನಕ್ಸಲರು ಕಾಣಿಸಿಕೊಳ್ಳುತ್ತಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ನಕ್ಸಲರು ಕೊಲ್ಲೂರು ಸಮೀಪದ ಉದಯನಗರದಲ್ಲಿ ಕಾಣಿಸಿಕೊಂಡಿದ್ದ ಬಗ್ಗೆ ಪ್ರತ್ಯಕ್ಷ ದರ್ಶಿಯ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ (ANF) ತಂಡ ಕಾರ್ಯಚರಣೆ ನಡೆಸಿದೆ. ಉದಯನಗರದಲ್ಲಿ ನಕ್ಸಲರ ಓಡಾಟವನ್ನು ಕಂಡ ಸ್ಥಳೀಯ ಶಾಜು ಟಿವಿ9 ಡಿಜಿಟಲ್​ನೊಂದಿಗೆ ಮಾತನಾಡಿ, ಐವರು ನಕ್ಸಲರು ಎರಡು ದಿನಗಳ ಹಿಂದೆ ತಡರಾತ್ರಿ 2.30 ಗಂಟೆಗೆ ಮನೆ ಹತ್ತಿರದಲ್ಲಿ ಹಾದು ಹೋಗಿದರು. ಮಂಕಿ ಕ್ಯಾಪ್, ಬ್ಯಾಗ್ ಹಾಕಿಕೊಂಡಿದ್ದರು. ಇಬ್ಬರ ಬಳಿ ಕೋವಿ ಇರುವುದನ್ನು ಕಂಡಿದ್ದೇನೆ. ನಾಯಿ ಬೊಗಳಿದ್ದರಿಂದ ಮನೆ ಒಳಗಡೆಯಿಂದ ನೋಡಿದೆ. ಬೆಳಗ್ಗೆ ಎದ್ದವನೆ ಎಎನ್ಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ನಕ್ಸಲ್ ಹುತಾತ್ಮ ದಿನ ಆಚರಣೆ

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿದೆ.ಈ ತಂಡ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ. ಹೀಗೆ ಬಂದ ನಕ್ಸಲರು ಪೊಲೀಸರ ಎನ್ಕೌಂಟರ್​​ನಲ್ಲಿ ಮೃತಪಟ್ಟ ನಕ್ಸಲ್​ ಸಾಕೇತ್​​​ನ ನೆನಪಿಗಾಗಿ ನಕ್ಸಲ್​ ಹುತಾತ್ಮ ದಿನಾಚರಣೆ ಆಚರಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ ! ಗ್ರಾಮಸ್ಥರಿಗೆ ಪೊಲೀಸರ ಸೂಚನೆ

2005ರ ಫೆಬ್ರವರಿ 5 ರಂದು ಕಳಸ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ರಾತ್ರಿ ಪೊಲೀಸರ ಎನ್ಕೌಂಟರ್​​ನಲ್ಲಿ ನಕ್ಸಲ್​ ಸಾಕೇತ್ ​​ಸಾವಿಗೀಡಾಗಿದ್ದನು. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಸಾಕೇತ್ ನೆನಪಿಗಾಗಿ ನಕ್ಸಲರು ಪ್ರತಿ ವರ್ಷ ನಕ್ಸಲ್ ಹುತಾತ್ಮ ದಿನಾಚರಣೆ ಆಚರಿಸುತ್ತಾರೆ.

1990 ರಿಂದ 2012ರ ವರೆಗು ಉತ್ತುಂಗದಲ್ಲಿದ್ದ ನಕ್ಸಲ್​ ಚಟುವಟಿಕೆ

1990 ರಿಂದ 2012ರ ವರೆಗು ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಉತ್ತುಂಗದಲ್ಲಿತ್ತು. ಸುಮಾರು 40 ರಿಂದ 45 ಸಕ್ರಿಯ ಸಶಸ್ತ್ರ ನಕ್ಸಲರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ರಾಯಚೂರು, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದರು.

2005 ಮತ್ತು 2012 ರ ನಡುವೆ, ಎಎನ್​ಎಫ್​​ ಅಧಿಕಾರಿಗಳ 11 ಎನ್‌ಕೌಂಟರ್‌ಗಳಲ್ಲಿ 19 ನಕ್ಸಲರು ಮೃತಪಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. 2005 ರಲ್ಲಿ ತುಮಕೂರಿನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ ಪಡೆಯ ಎಂಟು ಜನ ಸಿಬ್ಬಂದಿಗಳು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ