Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ ! ಗ್ರಾಮಸ್ಥರಿಗೆ ಪೊಲೀಸರ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಕನ್ಸಲ್​ ಚಟುವಟಿಕೆ ಮತ್ತೆ ಆರಂಭವಾಯಿತಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ನಾಲ್ವರು ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್​ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರು ನಕ್ಸಲರು ಹಲವು ಮನೆಗಳಿಗೆ ಭೇಟಿ ನೀಡಿರುವ ಅನುಮಾನ ಕೂಡ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ ! ಗ್ರಾಮಸ್ಥರಿಗೆ ಪೊಲೀಸರ ಸೂಚನೆ
ಸಾಂದರ್ಭಿಕ ಚಿತ್ರ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on:Feb 07, 2024 | 9:34 AM

ಉಡುಪಿ, ಫೆಬ್ರವರಿ 06: ಕೆಲವು ವರ್ಷಗಳಿಂದ ತಣ್ಣಗಾಗಿದ್ದ ನಕ್ಸಲ್ (Naxal)​ ಚಟುವಟಿಕೆ ಮತ್ತೆ ಉಡುಪಿ (Udupi) ಜಿಲ್ಲೆಯಲ್ಲಿ ಆಕ್ಟಿವ್​ ಆಗಿದೆ. ಕೊಲ್ಲೂರು ಪೊಲೀಸ್​ ಠಾಣಾ ವ್ಯಾಪ್ತಿಯ ಹಲವೆಡೆ ನಕ್ಸಲರ ಓಡಾಟದ ಸುಳಿವು ಸಿಕ್ಕಿದೆ. ಬೈಂದೂರು (Baindur) ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರು ನಕ್ಸಲರು ಹಲವು ಮನೆಗಳಿಗೆ ಭೇಟಿ ನೀಡಿರುವ ಅನುಮಾನ ವ್ಯಕ್ತವಾಗಿದೆ. ಇನ್ನು ನಕ್ಸಲರು ಭೇಟಿ ನೀಡಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ (Forest Department) ಮಾಹಿತಿ ನೀಡಿದ್ದಾರೆ.

ಈ ನಕ್ಸಲರು ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದು, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ನಕ್ಸಲರು ಸಕ್ರಿಯ ಆಗಿದ್ದಾರೆ ಎನ್ನಲಾಗಿದೆ. ದಶಕದ ಬಳಿಕ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನಕ್ಸಲ್‌ ಚಟುವಟಿಕೆ ಸಕ್ರಿಯವಾಗಿದೆಯಾ? ಎಂಬ ಅನುಮಾನ ಮೂಡಿದೆ. ನಕ್ಸಲರ ಓಡಾದ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟಿವ್​ ಆಗಿದ್ದಾರೆ. ಗ್ರಾಮಗಳಿಗೆ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದಾರೆ.

ನಕ್ಸಲರು ಕೇರಳದಿಂದ ಕರ್ನಾಟಕಕ್ಕೆ ಬಂದಿರುವ ಬಗ್ಗೆಯೂ ಪೊಲೀಸರ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಯಾರೇ ಅಪರಿಚಿತರು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಕಡಿಮೆಯಾಗಿದ್ದ ನಕ್ಸಲ ಚಟುವಟಿಕೆ

2023 ರಿಂದ ಆಚೆಗೆ ಕಳೆದ ಏಳು ವರ್ಷಗಳಲ್ಲಿ ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣವಾಗಿ ಕಡಿಮೆಯಾಗಿದ ಎಂದು ರಾಜ್ಯ ಸರ್ಕಾರವು ನಕ್ಸಲ್ ನಿಗ್ರಹ ಪಡೆಯ (ANF) ಬಲವನ್ನು ಕಡಿಮೆ ಮಾಡಲ ಸರ್ಕಾರ ಚಿಂತನೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್​ ವರದಿ ಮಾಡಿದೆ. ಈ ನಕ್ಸಲರನ್ನು ಹೆಡೆಮುರಿ ಕಟ್ಟಲು 2005 ರಲ್ಲಿ ಅಂದಿನ ಸರ್ಕಾರ ಎಎನ್​​ಎಫ್​​ ಪಡೆಯನ್ನು ರಚಿಸಿದೆ.

ಇದನ್ನೂ ಓದಿ: ‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ

ನಕ್ಸಲ್ ಚಟುವಟಿಕೆಗಳು ಪುನರಾವರ್ತನೆಯಾಗುವ ಸಾಧ್ಯತೆ ಕಡಿಮೆ ಇರುವ ಸ್ಥಳಗಳಿಂದ ಎಎನ್​ಫ್​​ ಶಿಬಿರಗಳನ್ನು ತೆರವುಗೊಳಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿತ್ತು. ಈ ಬಗ್ಗೆ ಬಿಜೆಪಿ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಮಾತನಾಡಿ, ಜನರ ಜೀವನ ಮತ್ತು ಭದ್ರತೆಯಲ್ಲಿ ಯಾವುದೆ ರಾಜಿ ಇಲ್ಲ. ರಾಜ್ಯ ಸರ್ಕಾರ ಎಎನ್‌ಎಫ್ ಅನ್ನು ಸಂಪೂರ್ಣವಾಗಿ ವಿಸರ್ಜಿಸುವುದಿಲ್ಲ, ನಾವು ಪೊಲೀಸ್ ಇಲಾಖೆಯ ಮಾನವ ಮತ್ತು ಆರ್ಥಿಕ ಸಂಪನ್ಮೂಲವನ್ನು ಉತ್ತಮವಾಗಿ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದರು.

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಉತ್ತುಂಗದಲ್ಲಿ (1990 ರಿಂದ 2012) ಸುಮಾರು 40 ರಿಂದ 45 ಸಕ್ರಿಯ ಸಶಸ್ತ್ರ ನಕ್ಸಲರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ರಾಯಚೂರು, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದರು.

2005 ಮತ್ತು 2012 ರ ನಡುವೆ, ANF 11 ಎನ್‌ಕೌಂಟರ್‌ಗಳಲ್ಲಿ 19 ನಕ್ಸಲರನ್ನು ಕೊಂದಿತು. ಈ ಕಾರ್ಯಾಚರಣೆಯಲ್ಲಿ ಮೂವರು ಅಧಿಕಾರಿಗಳು ಹುತಾತ್ಮರಾದರು. 2005 ರಲ್ಲಿ ತುಮಕೂರಿನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ ಪಡೆಯ ಎಂಟು ಜನ ಸಿಬ್ಬಂದಿಗಳು ಮೃತಪಟ್ಟಿದ್ದರು. ನಕ್ಸಲರು ಪೊಲೀಸ್ ಮಾಹಿತಿದಾರರು ಎಂದು ಆರೋಪಿಸಿ ಏಳು ಜನರನ್ನು ಕೊಲೆ ಮಾಡಿದ್ದರು.

 ಸಾವು-ನೋವು

ನವೆಂಬರ್ 17, 2003: ಉಡುಪಿ ಜಿಲ್ಲೆಯಲ್ಲಿ ನಕ್ಸಲೀಯರಾದ ಹಾಜಿಮಾ ಮತ್ತು ಪಾರ್ವತಿ ಪೊಲೀಸರ ಗುಂಡಿಗೆ ಬಲಿಯಾದರು.

ಫೆಬ್ರವರಿ 6, 2005: ಚಿಕ್ಕಮಗಳೂರಿನಲ್ಲಿ ರಾಜ್ಯ ನಕ್ಸಲ್ ನಿಗ್ರಹ ದಳದಿಂದ ನಕ್ಸಲ್ ನಾಯಕ ಸಾಕೇತ್ ರಾಜನ್ ಹತ್ಯೆ ಮಾಡಲಾಯಿತು.

ಮೇ 17, 2005: ಪೊಲೀಸ್ ಮಾಹಿತಿದಾರ ಎಂಬ ಕಾರಣಕ್ಕೆ ಆದಿವಾಸಿ ನಾಯಕ ಶೇಷಯ್ಯನನ್ನು ನಕ್ಸಲರು ಕೊಂದರು.

ಫೆಬ್ರವರಿ 10, 2005: ತುಮಕೂರಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು 6 ಪೊಲೀಸರು ಮತ್ತು ಒಬ್ಬ ನಾಗರಿಕನನ್ನು ಕೊಂದರು. ಈ ದಾಳಿಯೇ ನಕ್ಸಲ್ ವಿರೋಧಿ ಪಡೆ ರಚನೆಗೆ ಕಾರಣವಾಗುತ್ತದೆ.

ನವೆಂಬರ್ 19, 2008: ಹೊರನಾಡು ಬಳಿ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟರು. ಈ ಕಾರ್ಯಾಚರಣೆಯಲ್ಲಿ ಓರ್ವ ಎಎನ್‌ಎಫ್ ಅಧಿಕಾರಿ ಕಮಾಂಡೊ ಹುತಾತ್ಮರಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Tue, 6 February 24

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್