ಉಡುಪಿ: ಎನ್‌ಐಎ ಅಧಿಕಾರಿಗಳು ರಾಜ್ಯದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಂದು (ಜ.6) ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರದಲ್ಲಿ (Brahmavar) ಎನ್‌ಐಎ (NIA) ತಂಡ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಮಾಜ್ ಮುನೀರ್ ಸ್ನೇಹಿತ, ಇಂಜಿನಿಯರಿಂಗ್ ವಿದ್ಯಾರ್ಥಿ ರಿಶಾನ್ ಶೇಖ್ನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರೆಶಾನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಶೇಖ್ ಪುತ್ರನಾಗಿದ್ದಾನೆ. ಇನ್ನೂ ತಾಜುದ್ದೀನ್ ಶೇಖ್ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಮತ್ತು ಶಿವಮೊಗ್ಗ ತುಂಗಾತೀರದ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ನಿನ್ನೆ (ಜನವರಿ 05) ರಾಜ್ಯದ ಶಿವಮೊಗ್ಗ, ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ 7 ಕಡೆ ದಾಳಿ ಮಾಡಿದೆ. ಈ ವೇಳೆ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್‌ನಲ್ಲಿ ಐಸಿಸ್ ಒಳಸಂಚು ಇರುವದು ಪತ್ತೆಯಾಗಿದೆ.
ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ
ಈ ದಾಳಿ ವೇಳೆ ಎನ್‌ಐಎ ಐಸಿಸ್ನ ಸಕ್ರಿಯ ಸದಸ್ಯರಾಗಿರುವ ಶಿವಮೊಗ್ಗದ ಮಂಜುನಾಥ ಬಡಾವಣೆಯ ಉಜೇರ್ ಫರ್ಹಾನ್ ಬೇಗ್, ಉಡುಪಿಯ ರೇಶಾನ್ ತಾಜೂದ್ದೀನ್ ಶೇಖ್ ಮೆನಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಶಂಕಿತ ಉಗ್ರ ಮಾಜ್ ವಿಚಾರಣೆ ವೇಳೆ ಇಬ್ಬರ ಹೆಸರು ಬಾಯಿಬಿಟ್ಟಿದ್ದನು. ಈ ಹಿನ್ನೆಲೆ ಆರೋಪಿ ಮಾಜ್‌ಗೆ ಸಹಪಾಠಿಯಾಗಿದ್ದ ರೇಶಾನ್ ತಾಜೂದ್ದೀನ್ನನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ: ಎನ್ಐಎಯಿಂದ ವಿಚಾರಣೆ
ಇನ್ನೂ ದಾಳಿ ವೇಳೆ ಡಿಜಿಟಲ್ ಡಿವೈಸಸ್ ಮತ್ತು ಹಲವು ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇವರು ಐಸಿಸ್ ಹ್ಯಾಂಡ್ಲರ್ಸ್‌ನಿಂದ ಕ್ರಿಪ್ಟೋ ವ್ಯಾಲೆಟ್‌ಗೆ ಹಣ ಪಡೆಯುತ್ತಿದ್ದರು. ಆರೋಪಿಗಳು ಲಿಕ್ಕರ್ ಶಾಪ್, ಗೋದಾಮು, ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿಹಚ್ಚಲು ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ.
ದಾವಣಗೆರೆ: ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಜಿಲ್ಲೆಯ ಹೊನ್ನಾಳಿ ಪಟ್ಟಣದ ನಿವಾಸಿ ನದೀಮ್ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಶಿವಮೊಗ್ಗ ಮೂಲದ ಯುವಕರು ಭಾಗಿಯಾದ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದ ಯುವಕರನ್ನು ಅಜ್ಞಾತ ಸ್ಥಳದಲ್ಲಿ ಇಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ನದೀಮ್ ಮನೆ ಹಾಗೂ ಕುಟುಂಬ ಸದಸ್ಯರು ಯಾರು ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಕುಕ್ಕರ ಬಾಂಬ್ ಸ್ಪೋಟ್ ಪ್ರಕರಣ ಕರಾವಳಿಯಿಂದ ಮಲೆನಾಡು ಸುತ್ತು ಹಾಯ್ದುಕೊಂಡು ಅರೇ ಮಲೆನಾಡು ಪ್ರದೇಶವಾದ ಹೊನ್ನಾಳಿಗೂ ಸುತ್ತಿಕೊಂಡಿದ್ದು ಅಚ್ಚರಿಯ ಸಂಗತಿಯಾಗಿದೆ.
ರೆಶಾನ್ ತಂದೆ ತಾಜುದ್ದೀನ್ ಶೇಖ್ ಬ್ಲಾಕ್ ಕಾಂಗ್ರೆಸ್ ನಲ್ಲಿ ಸಕ್ರೀಯ ಕಾರ್ಯಕರ್ತನಾಗಿದ್ದಾನೆ. ಸಿದ್ದರಾಮಯ್ಯ, ಡಿ. ಕೆ ಶಿವಕುಮಾರ್ ಮತ್ತು ಯು ಟಿ ಖಾದರ್ ಅವರ ಪರಮಾಪ್ತನಾಗಿದ್ದಾನೆ. ರಾಜ್ಯ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಕಾಂಗ್ರೆಸ್ ಪಕ್ಷ ಇದರ ಜವಾಬ್ದಾರಿಯನ್ನು ಹೊರಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಪ್ರಮೋಷನ್ ಕೊಟ್ಟು ಬ್ಲಾಕ್ ಅಧ್ಯಕ್ಷನನ್ನಾಗಿ ಮಾಡುತ್ತಾ? ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡುತ್ತಾರಾ? ಕಾಂಗ್ರೆಸ್ ನಾಯಕರ ಜೊತೆಗಿರುವ ಫೋಟೋವನ್ನು ಬಿಡುಗಡೆ ಮಾಡಿದ್ದೇನೆ.
ರೆಶಾನ್ ಕುಟುಂಬದ ಬಗ್ಗೆ ಕೂಡ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಶಾಂತ್ ತಾಯಿ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಆಕೆಯ ಮೇಲೆ ಲಿಖಿತ ದೂರನ್ನು ಶಿಕ್ಷಣ ಸಚಿವ ನಾಗೇಶ್ ಅವರಿಗೆ ನೀಡಲಾಗಿದೆ. ರಾಷ್ಟ್ರೀಯತೆ ಪ್ರಧಾನಿ ಮೋದಿ ವಿರುದ್ಧ ಕೆಲಸ ಮಾಡುತ್ತಿದ್ದರು. ಕಾಲೇಜು ವಿರುದ್ಧವಾಗಿ ಹೇಳಿಕೆ ಕೊಡುವ ಆಡಿಯೋಗಳನ್ನು ಸಚಿವರಿಗೆ ಕೊಡಲಾಗಿದೆ. ತಾಜುದ್ದೀನ್ ಆರ್ಥಿಕ ಪರಿಸ್ಥಿತಿ ಈ ಹಿಂದೆ ಹದಗೆಟ್ಟಿತ್ತು. ಏಕಾಏಕಿ ಇತ್ತೀಚೆಗೆ ಶ್ರೀಮಂತನಾದ ಬಗ್ಗೆ ಸ್ಥಳೀಯರು ಗುಮಾನಿ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:30 pm, Fri, 6 January 23