ಉಡುಪಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆ; ಇಂದಿನಿಂದ ಶಾಲೆ ಆರಂಭ

ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಬೆಂಚಿನಲ್ಲಿ ಇಬ್ಬರೇ ಕುಳಿತು ಪಾಠ ಕೇಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದ ಪೋಷಕರ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಉಡುಪಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆ; ಇಂದಿನಿಂದ ಶಾಲೆ ಆರಂಭ
ಇಂದಿನಿಂದ 9ರಿಂದ 11ನೇ ತರಗತಿಗಳು ಆರಂಭ
Follow us
TV9 Web
| Updated By: sandhya thejappa

Updated on: Sep 01, 2021 | 11:23 AM

ಉಡುಪಿ: ಇಂದಿನಿಂದ (ಸೆಪ್ಟೆಂಬರ್ 1) ಜಿಲ್ಲೆಯಾದ್ಯಂತ 9ನೇ ತರಗತಿಯಿಂದ ಪ್ರಥಮ ಪಿಯು ತರಗತಿಗಳು ಆರಂಭವಾಗುತ್ತಿವೆ. ಹತ್ತು ದಿನ ವಿಳಂಬವಾಗಿ ತರಗತಿಗಳು ಪ್ರಾರಂಭವಾಗುತ್ತಿವೆ. ರಾಜ್ಯದ್ಯಂತ ಆಗಸ್ಟ್ 23ಕ್ಕೆ 9ನೇ ತರಗತಿಯಿಂದ 11ನೇ ತರಗತಿಗಳು ಆರಂಭವಾಗಿತ್ತು. ಪಾಸಿಟಿವಿಟಿ ರೇಟ್ ಹೆಚ್ಚಿದ್ದರಿಂದ ಉಡುಪಿಯಲ್ಲಿ ಶಾಲೆ ತೆರೆದಿರಲಿಲ್ಲ. ಸದ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ (Positivity Rate) ಇಳಿಕೆಯಾಗಿದೆ. ಹಾಗಾಗಿ ತರಗತಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.

ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಬೆಂಚಿನಲ್ಲಿ ಇಬ್ಬರೇ ಕುಳಿತು ಪಾಠ ಕೇಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದ ಪೋಷಕರ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಸೆಪ್ಟೆಂಬರ್ 6ರಿಂದ ಶಾಲೆ ಆರಂಭ 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಮಹತ್ವದ ನಿರ್ಧಾರವನ್ನು ಆಗಸ್ಟ್ 30ರಂದು ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೆಗೆದುಕೊಂಡಿದೆ. 6- 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆಪ್ಟೆಂಬರ್ 6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುವುದು. ವಾರದಲ್ಲಿ 5 ದಿನ (ಸೋಮವಾರದಿಂದ ಶುಕ್ರವಾರದವರೆಗೆ) ಶಾಲೆ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಉಳಿದ 2 ದಿನ (ಶನಿವಾರ, ಭಾನುವಾರ) ಶಾಲೆ ಸ್ವಚ್ಛಗೊಳಿಸಲು ಅವಕಾಶವಿರುತ್ತದೆ. ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಅಂದರೆ, ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬಹುದು ಎಂದು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು

ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೊ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ

(Nine to first pu offline class restart from today in udupi)

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?