ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ​: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!

ದೇಶದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಆದರೆ ಜನ್ಮಾಷ್ಟಮಿಗೆ ಪ್ರಸಿದ್ಧವಾಗಿರುವ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮಾತ್ರ ಜನ್ಮಾಷ್ಟಮಿ ಆಚರಣೆ ನಡೆಯುತ್ತಿಲ್ಲ. ಅದಕ್ಕಾಗಿ ಭಕ್ತರು ಇನ್ನು ಒಂದು ತಿಂಗಳು ಕಾಯಬೇಕು. ಹಾಗಾಗಿ ಇಂದು ಉಡುಪಿಗೆ ಭೇಟಿ ನೀಡಿದವರಿಗೆ ನಿರಾಸೆ ಉಂಟಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ​: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!
ಶ್ರೀ ಕೃಷ್ಣ ಮಠ
Updated By: ಗಂಗಾಧರ​ ಬ. ಸಾಬೋಜಿ

Updated on: Aug 16, 2025 | 8:40 AM

ಉಡುಪಿ, ಆಗಸ್ಟ್​ 16: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ (Udupi) ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ (Krishna Janmashtami) ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.

ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ.

ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

ಇದನ್ನೂ ಓದಿ
ಶ್ರೀಕೃಷ್ಣ ಜನ್ಮಾಷ್ಟಮಿಗೆ ಮಡಕೆ ಹೊಡೆಯುವುದು ಯಾಕೆ? ಇದೇ ನೋಡಿ ಕಾರಣ
ಶ್ರೀ ಕೃಷ್ಣನಿಗೆ ಪ್ರಿಯವಾದ ರವೆ ಉಂಡೆಯಲ್ಲಿದೆ ಆರೋಗ್ಯ ಪ್ರಯೋಜನ
ಶ್ರೀಕೃಷ್ಣ ಜನ್ಮಾಷ್ಟಮಿಯಂದು ನಿಮ್ಮ ಪ್ರೀತಿಪಾತ್ರರಿಗೆ ಹೀಗೆ ಶುಭಾಶಯ ತಿಳಿಸಿ
ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು

ಇಂದು ಚಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರಧಾನ ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಬಂದ ಭಕ್ತರು ಶ್ರೀ ಕೃಷ್ಣ ದರ್ಶನ ಮಾಡಿದರು. ಆದರೆ ರಥಬೀದಿ ತುಂಬ ಕಾಣುವ ಬಾಲಕೃಷ್ಣ, ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುತ್ತೆ.

ಹೂವಿನ ವ್ಯಾಪರಿಗಳಿಗೆ ನಿರಾಸೆ

ಉಡುಪಿ ಅಷ್ಟಮಿ ಅಂದರೆ ಹಬ್ಬದ ಸಂಭ್ರಮ ಇರುತ್ತೆ. ವ್ಯಾಪಾರ ಬಹಳ ಜೋರಾಗಿಯೇ ನಡೆಯುತ್ತೆ ಎಂದು ಬಂದ ಹಾಸನ, ಚಿಕ್ಕಮಗಳೂರು ಕಡೆಯ ನೂರಾರು ಹೂವಿನ ವ್ಯಾಪರಿಗಳು ನಿರಾಸೆಯಾಗಿದ್ದಾರೆ. ಅಷ್ಟಮಿ ಹಬ್ಬದ ಆಚರಣೆ ಇಲ್ಲದ ಕಾರಣಕ್ಕೆ ಹೂವಿನ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ಅಷ್ಟಮಿ ಸಂಭ್ರಮದಲ್ಲಿ‌ ನಾಲ್ಕು ಕಾಸು ದುಡಿಮೆ ಆಗುತ್ತೆ ಬಂದವರು ಕೈ ಸುಟ್ಟುಕೊಂಡು ಹೋಗುವಂತಾಗಿದೆ.

ಇದನ್ನೂ ಓದಿ: ಉಡುಪಿ ಶ್ರೀ ಕಡಗೋಲು ಕೃಷ್ಣ ಮಠದಲ್ಲಿ ಪಾತ್ರೆ ತೊಳೆದು ಸರಳತೆ ಮೆರೆದ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ ನಿತ್ಯೋತ್ಸವದ ನಾಡು. ಅಷ್ಟಮಿ ಆಚರಣೆ ಇಲ್ಲಿಯೂ ಇಂದೇ ನಡೆಯುತ್ತದೆ ಎಂದು ಬಂದ ಭಕ್ತರಿಗೂ, ಕರ್ಮ ಫಲದ ಮೇಲೆ ನಂಬಿಕೆ ಇಟ್ಟು ಬಂದ ಹೂವಿನ ವ್ಯಾಪರಿಗಳಿಗೂ ನಿರಾಸೆಯಾಗಿದೆ. ಇವತ್ತು ನಷ್ಟ ಆದರೂ ಮುಂದಿನ ತಿಂಗಳ ಹಬ್ಬಕ್ಕೆ ಕೈ ತುಂಬ ದುಡಿಮೆಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 am, Sat, 16 August 25