ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ; ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ

ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಾ. ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ ಡಿಕೆಶಿ ಎದುರಲ್ಲೇ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ; ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ
Veerappa Moily
Updated By: ಸುಷ್ಮಾ ಚಕ್ರೆ

Updated on: Mar 02, 2025 | 8:36 PM

ಉಡುಪಿ (ಮಾರ್ಚ್ 2): ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಡುಪಿಯ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಡಿಸಿಎಂ ಡಿಕೆಶಿ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಡಿಕೆ ಶಿವಕುಮಾರ್ ಅವರಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಅವರು ಈಗ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ನಿಮ್ಮ ವಿರುದ್ಧ ಹೇಳಿಕೆಗಳು ಬರಬಹುದು, ಹೋಗಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಕಾಲ ಕೂಡಿಬರಬೇಕು, ಅವರು ಸಿಎಂ ಆಗುವಾಸೆ ನಂಗಿದೆ: ಡಿಕೆ ಸುರೇಶ್

ಡಿಕೆ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು. ಸಿಎಂ ಹುದ್ದೆ ಯಾರೂ ಕೊಡುವ ವರ ಅಲ್ಲ. ಅದು ಡಿ.ಕೆ.ಶಿವಕುಮಾರ್​​​ ಸಂಪಾದನೆ ಮಾಡಿರುವ ಶಕ್ತಿ. ಅವರು ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಈ ಪುಣ್ಯ ಭೂವಿಯಲ್ಲಿ ಆಡಿದ ಮಾತು ನೂರಕ್ಕೆ ನೂರು ಸತ್ಯ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆಶಿಗೆ ಸಿಎಂ ಹುದ್ದೆ ತಪ್ಪಿಸಲು ಆಗುವುದಿಲ್ಲ. ಅವರ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಅನ್ನೋದು ಶತಸಿದ್ಧ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ